ಕೇಂದ್ರದ ಮಾಜಿ ಸಚಿವ ಮುಸ್ಲಿಂ ಸಮುದಾಯದ ಪ್ರಭಾವಿ ನಾಯಕ ಸಿ.ಕೆ.ಜಾಫರ್ ಷರೀಪ್ ಇನ್ನಿಲ್ಲ

ಬೆಂಗಳೂರು,ನ.25– ಕೇಂದ್ರದ ಮಾಜಿ ಸಚಿವ ಮುಸ್ಲಿಂ ಸಮುದಾಯದ ಪ್ರಭಾವಿ ನಾಯಕ ಸಿ.ಕೆ.ಜಾಫರ್ ಷರೀಪ್ ಇಂದು ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಈ ಹಿಂದೆ ಕೇಂದ್ರದಲ್ಲಿ ಮಾಜಿ ಪ್ರಧಾನಿ ದಿವಂಗತ ಪಿ.ವಿ.ನರಸಿಂಹರಾವ್ ಅವರ ಸಂಪುಟದಲ್ಲಿ ರೈಲ್ವೆ ಸಚಿವರಾಗಿದ್ದ ಅವರು ರಾಜ್ಯಕ್ಕೆ ಅನೇಕ ಯೋಜನೆಗಳನ್ನು ಜಾರಿ ಮಾಡಿದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರ ಆರೋಗ್ಯದಲ್ಲಿ ನಿನ್ನೆ ರಾತ್ರಿ ಏರುಪೇರು ಉಂಟಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಮಧ್ಯಾಹ್ನ ನಿಧನರಾಗಿದ್ದಾರೆ.

ಮೀಟರ್ ಗೇಜ್‍ನ್ನು ಬ್ರಾಡ್‍ಗೇಜ್‍ಗೆ ಪರಿವರ್ತಿಸಿದ್ದಲ್ಲದೆ ಹಲವು ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ರೈಲ್ವೆ ಯೋಜನೆಗಳನ್ನು ಅವರ ಕಾಲದಲ್ಲಿಯೇ ಪೂರ್ಣಗೊಳಿಸಿದ ಕೀರ್ತಿಯೂ ಸಲ್ಲುತ್ತದೆ. ಹೀಗಾಗಿ ರೈಲ್ವೆ ಯೋಜನೆಗಳು ನೆನಪಿಗೆ ಬಂದಾಗ ಕರ್ನಾಟಕ ಜನತೆ ಜಾಫರ್ ಷರೀಫ್ ಅವರನ್ನು ನೆನಪಿಸಿಕೊಳ್ಳುತ್ತಾರೆ.

ಕಾಂಗ್ರೆಸ್‍ನಲ್ಲಿ ಇದ್ದರೂ ತೆರೆಮರೆಗೆ ಸರಿದಿದ್ದರು. ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ ಬಹಿರಂಗವಾಗಿಯೇ ಸರ್ಕಾರದ ವಿರುದ್ದ ಗುಟುರು ಹಾಕುತ್ತಿದ್ದರು. ಪಕ್ಷ ಮತ್ತು ನಿಷ್ಠೆಗೆ ಹೆಸರಾಗಿದ್ದ ಜಾಫರ್ ಷರೀಫ್ ಹೈಕಮಾಂಡ್‍ನಲ್ಲಿ ಅತ್ಯಂತ ಪ್ರಭಾವಿ ಮುಖಂಡರಾಗಿದ್ದರು.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಅವರು ಐದು ಬಾರಿ ಇಲ್ಲಿಂದ ಗೆದ್ದಿದ್ದರು. 1933 ನವೆಂಬರ್ 3ರಂದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಜನಿಸಿದ್ದ ಜಾಫರ್ ಷರೀಫ್ 2004ರಲ್ಲಿ ಸೋತ ನಂತರ ರಾಜಕೀಯದಿಂದಲೇ ತೆರೆಮರೆಗೆ ಸರಿದಿದ್ದರು.

City Today News

(Tj vision media)

9341997936

Leave a Reply

Please log in using one of these methods to post your comment:

WordPress.com Logo

You are commenting using your WordPress.com account. Log Out /  Change )

Google photo

You are commenting using your Google account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s