ಸತತವಾಗಿ 7 ಬಾರಿ ವಿಧಾನ ಸಭಾ ಸದಸ್ಯರಾಗಿ ಆಯ್ಕೆಯಾಗಿ ಸಕ್ರಿಯವಾಗಿ ರಾಜಕಾರಣದಲ್ಲಿ ಇರುವ ರಾಮಲಿಂಗಾ ರೆಡ್ಡಿಯವರಿಗೆ ಸಂಪುಟ ದರ್ಜೆ ಸ್ಥಾನ ನೀಡಬೇಕು ಎಂದು ರೆಡ್ಡಿ ಸಮುದಾಯ ಕಾಂಗ್ರೆಸ್ ಹೈಕಮಾಂಡನ್ನು ಒತ್ತಾಯಿಸಿದೆ.

ಬೆಂಗಳೂರು : ಕಾಂಗ್ರೇಸ್ ಹಿರಿಯ ಮುಖಂಡ, ಶಾಸಕ ರಾಮಲಿಂಗಾ ರೆಡ್ಡಿ ಅವರು ಸುಮಾರು 40 ವರ್ಷಗಳಿಂದ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡು ಮಂಜೂಣಿಯಲ್ಲಿದ್ದು ಸತತವಾಗಿ 7 ಬಾರಿ ವಿಧಾನ ಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಸಕ್ರಿಯವಾಗಿ ರಾಜಕಾರಣದಲ್ಲಿ ಇರುವ ಅವರಿಗೆ ಸಂಪುಟ ದರ್ಜೆ ಸ್ಥಾನ ನೀಡಬೇಕು ಎಂದು ರೆಡ್ಡಿ ಸಮುದಾಯ ಕಾಂಗ್ರೆಸ್ ಹೈಕಮಾಂಡನ್ನು ಒತ್ತಾಯಿಸಿದೆ.

ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಮಾಜಿ ಶಾಸಕ ಮುನಿವೆಂಕಟರೆಡ್ಡಿ, 2018 ರಲ್ಲಿ ನಡೆದ ವಿಧಾನ ಸಭಾ ಚುನಾವಣೆಯಲ್ಲಿ ಬಿಟಿಎಂ ವಿಧಾನ ಸಭಾ ಕ್ಷೇತ್ರದಿಂದ 7ನೇ ಬಾರಿಗೆ ಅತೀ ಹೆಚ್ಚಿನ ಮತಗಳ ಅಂತರದಿಂದ ಜಯಶೀಲರಾಗಿದ್ದಾರೆ. ಅಲ್ಲದೆ ಅನೇಕಲ್, ಜಯನಗರ ವಿಧಾನ ಸಭಾ ಕ್ಷೇತ್ರಗಳು ಸೇರಿದಂತೆ ಬೆಂಗಳೂರು ನಗರದ ಕಾಂಗ್ರೇಸ್ ಪಕ್ಷದ ಹೆಚ್ಚು ಅಭ್ಯರ್ಥಿಗಳ ಗೆಲುವಿಗೆ ಕಾರಣ ಕರ್ತರಾಗಿದ್ದಾರೆ.

ಇವರ ಸುದೀರ್ಘ ರಾಜಕೀಯ ಜೀವನದಲ್ಲಿ ರಾಮಲಿಂಗಾ ರೆಡ್ಡಿ ಅವರು ಸಣ್ಣ ಕೈಗಾರಿಕೆ, ಕೃಷಿ ಉತ್ಪನ್ನ ಮಾರಾಟ ಖಾತೆ, ಆಹಾರ ಮತ್ತು ನಾಗರೀಕ ಸರಬರಾಜು ಖಾತೆ, ಶಿಕ್ಷಣ, ಸಾರಿಗೆ, ಹಾಗೂ ಗೃಹ ಸಚಿವರಾಗಿ ಹಲವು ಖಾತೆಗಳಲ್ಲಿ ಸೇವೆಯನ್ನು ಸಲ್ಲಿಸಿದ್ದು, ಯಾವುದೇ ವಿವಾದಗಳಿಗೆ ಅವಕಾಶ ಕೊಡದೆ ಅತ್ಯಂತ ಸಮರ್ಥ ರೀತಿಯಲ್ಲಿ ಕಾರ್ಯನಿರ್ವಹಿಸಿರುತ್ತಾರೆ. ಇದುವರೆಗೂ 40 ರಾಜಕೀಯದಲ್ಲಿ ಅಧಿಕಾರಕ್ಕಾಗಿ ಎಂದೂ ಲಾಬಿ ಮಾಡಿದವರಲ್ಲ ಎಂದು ವಿವರಿಸಿದರು.

ಅವರ ಕಾರ್ಯತತ್ಪರತೆ, ಪಕ್ಷನಿಷ್ಠೆ, ಅಪಾರವಾದ ಜನಪರ ಕಾಳಜಿ, ಜನಪ್ರಿಯತೆ ಹಾಗೂ ತಮ್ಮ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ದಿ ಕಾರ್ಯಗಳನ್ನು ಕೈಗೊಂಡು ಸಚಿವ ಸಹೋದ್ಯೋಗಿಗಳಿಗೆ ಪ್ರೀತಿಗೆ ಪಾತ್ರರಾಗಿದ್ದರು ಎಂದರು.

೨೦೧೮ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅನೇಕ ಸಚಿವರುಗಳು ಸೋತಿರುವ ಸಂದರ್ಭದಲ್ಲೂ ಸಹ ರಾಮಲಿಂಗಾ ರೆಡ್ಡಿಯವರು ತಮ್ಮ ಅಪಾರ ಜನಪ್ರಿಯತೆಯಿಂದಾಗಿ ಅಭೂತಪೂರ್ವ ಯಶಸ್ಸಿನೊಂದಿಗೆ ಜಯಶೀಲಾಗಿದ್ದಾರೆ. ಇಂತಹ ಸರಳ, ಸಜ್ಜನಿಕೆಯ ಹಿರಿಯ ರಾಜಕಾರಣಿಯಾದ ರಾಮಲಿಂಗಾ ರೆಡ್ಡಿಯವರಿಗೆ ಸಚಿವ ಸ್ಥಾನ ಕೈ ತಪ್ಪಿರುವುದು ರಾಜ್ಯದಲ್ಲಿರುವ 50 ಲಕ್ಷ ರೆಡ್ಡಿ ಸಮುದಾಯಕ್ಕೆ ಅಘಾತವನ್ನು ಉಂಟುಮಾಡಿದೆ ಎಂದು ಅಸಮದಾನ ವ್ಯಕ್ತಪಡಿಸಿದರು.

ಮುಂದೆ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜಯಗಳಿಸುವ ದೃಷ್ಟಿಯಿಂದ ರಾಮಲಿಂಗಾ ರೆಡ್ಡಿಯವರಿಗೆ ಸಚಿವ ಸ್ಥಾನ ನೀಡುವುದು ಅನಿವಾರ್ಯವಾಗಿರುತ್ತದೆ. ಕೂಡಲೆ ಸಚಿವ ಸ್ಥಾನವನ್ನು ನೀಡುವಂತೆ ಒತ್ತಾಯಿಸಿ ರಾಜ್ಯದ ರೆಡ್ಡಿ ಸಮುದಾಯದ ಪರವಾಗಿ ಕರ್ನಾಟಕ ರೆಡ್ಡಿಜನ ಸಂಘ ಒತ್ತಾಯಿಸುತ್ತಿದೆ ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ಹಾಗೂ ಬೆಂಗಳೂರು ನಗರದಲ್ಲಿ ಪಕ್ಷ ಸಂಘಟನೆ ದೃಷ್ಟಿಯಿಂದ ರಾಮಲಿಂಗಾ ರೆಡ್ಡಿ ಅವರಿಗೆ ಸಚಿವ ಸ್ಥಾನವನ್ನು ನೀಡುವುದು ಒಳಿತೆಂದು ಕಾಂಗ್ರೆಸ್ ಪಕ್ಷದ ಮುಖಂಡರುಗಳು ಮನಗಣಬೇಕೆಂದು ರೆಡ್ಡಿ ಸಂಘ ಆಗ್ರಹಿಸುಲಿದೆ ಎಂದರು.

ಬಿಬಿಎಂಪಿ ಸದಸ್ಯರಾದ ಉದಯಕುಮಾರ್ ರೆಡ್ಡಿ, ಮಾಜಿ ಮೇಯರ್ ಮಂಜುನಾಥ ರೆಡ್ಡಿ, ಚಂದ್ರಪ್ಪ ರೆಡ್ಡಿ, ಅಭಿಲಾಶ್ ರೆಡ್ಡಿ, ಕರ್ನಾಟಕ ರೆಡ್ಡಿಜನ ಸಂಘದ ಅಧ್ಯಕ್ಷರಾದ ವಿಜಯ ರಾಘವರೆಡ್ಡಿ, ಉಪಾಧ್ಯಕ್ಷ ಮುನಿವೆಂಕಟಪ್ಪ, ಡಿ.ಎನ್. ಲಕ್ಷ್ಮಣ ರೆಡ್ಡಿ, ಪ್ರಬಾರ ಕಾರ್ಯದರ್ಶಿ ಎನ್. ಶೇಖರ್ ರೆಡ್ಡಿ ಅವರು ಈ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

City Today News

(Tj vision media)

9341997936

Leave a Reply

Please log in using one of these methods to post your comment:

WordPress.com Logo

You are commenting using your WordPress.com account. Log Out /  Change )

Google photo

You are commenting using your Google account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s