ಹಿರಿಯ ಐ ಪಿ ಎಸ್ ಅಧಿಕಾರಿ ಮಧುಕರ್ ಶೆಟ್ಟಿ ಇನ್ನಿಲ್ಲ. 🙏ಮೃತರ ಆತ್ಮಕ್ಕೆ ಚಿರ ಶಾಂತಿ ನೆಮ್ಮದಿ ಸಿಗಲಿ🙏

ಹಿರಿಯ ಐ ಪಿ ಎಸ್ ಅಧಿಕಾರಿ ಮಧುಕರ್ ಶೆಟ್ಟಿ ಇನ್ನಿಲ್ಲ

ಹೈದ್ರಾಬಾದ್ ನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ನಿಧನ

ಖಡಕ್ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ವಿಧಿವಶ ಅವರ ಆತ್ಮಕ್ಕೆ ಶಾಂತಿ ಸಿಗಲಿ…
ಹೈದರಾಬಾದ್ ನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಹಿರಿಯ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ (47) ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ರಾತ್ರಿ ಸುಮಾರು 9 ಗಂಟೆಗೆ ನಿಧನರಾಗಿದ್ದಾರೆ. ಹೈದರಾಬಾದ್ ನ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ಉಪನಿರ್ದೇಶಕರಾಗಿದ್ದ ಮಧುಕರ್ ಶೆಟ್ಟಿ ಇತ್ತೀಚಿಗೆ ತೀವ್ರ ಅಸ್ವಸ್ಥರಾಗಿ ಅಲ್ಲಿನ ಕಾಂಟಿನೆಂಟಲ್ ಆಸ್ಪತ್ರೆಗೆ ದಾಖಲಾಗಿದ್ದರು. ಖ್ಯಾತ ಪತ್ರಕರ್ತ ದಿವಂಗತ ವಡ್ಡರ್ಸೆ ರಘುರಾಮ್ ಶೆಟ್ಟಿ ಅವರ ಪುತ್ರ ,1999ರ ಬ್ಯಾಚ್‌ ಐಪಿಎಸ್ ಅಧಿಕಾರಿಯಾಗಿರುವ ಮಧುಕರ್ ಶೆಟ್ಟಿ, ಕರ್ನಾಟಕದ ಉಡುಪಿ ಜಿಲ್ಲೆಯವರು. ಅವರು ಹೊಸದಿಲ್ಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಿಂದ ಸಮಾಜಶಾಸ್ತ್ರದಲ್ಲಿ ಎಂ.ಎ. ಮತ್ತು ನ್ಯೂಯಾರ್ಕ್ ನ ಯೂನಿವರ್ಸಿಟಿಯಲ್ಲಿ ಪಿ.ಎಚ್.ಡಿ ಪದವಿ ಪಡೆದಿದ್ದಾರೆ. ಚಿಕ್ಕಮಗಳೂರು ಎಸ್ಪಿಯಾಗಿ, ಲೋಕಾಯುಕ್ತ ಎಸ್ಪಿಯಾಗಿ ಅವರು ಖಡಕ್ ಹಾಗು ಜನಪರ ಅಧಿಕಾರಿಯಾಗಿ ಖ್ಯಾತಿ ಗಳಿಸಿದ್ದರು.

City Today News

(Tj vision media)

9341997936

Leave a comment

This site uses Akismet to reduce spam. Learn how your comment data is processed.