ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಸೋಲಿಸಲು ನಿರ್ಣಯಿಸಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ಮಾದಿಗ ಮಹಾಸಭಾದ ರಾಜ್ಯ ಸಂಚಾಲಕ ಮುತ್ತಣ್ಣ ಬೆಣ್ಣೂರಹೇಳಿದರು

ಹುಬ್ಬಳ್ಳಿ : ನ್ಯಾ . ಸದಾಶಿವ ಆಯೋಗದ ವರದಿ ಯನ್ನು ರಾಜ್ಯ ಸರ್ಕಾರ ತಕ್ಷಣ ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿ ಕೊಡಬೇಕು . ಇಲ್ಲವಾದಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಸೋಲಿಸಲು ನಿರ್ಣಯಿಸಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ಮಾದಿಗ ಮಹಾಸಭಾದ ರಾಜ್ಯ ಸಂಚಾಲಕ ಮುತ್ತಣ್ಣ ಬೆಣ್ಣೂರಹೇಳಿದರು . ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು , ವರದಿಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಟ್ಟರೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜತೆ ಇರುತ್ತೇವೆ . ವರದಿ ಬಗ್ಗೆ ಕಾಂಗ್ರೆಸ್ ಪಕ್ಷದ ನಾಯಕರಲ್ಲಿಯೇ ದ್ವಂದ್ವ ನಿಲುವು ಇದೆ ಎಂದರು . ನ್ಯಾ . ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹಿಸಿ ಸಾಕಷ್ಟು ಬಾರಿ ಮನವಿ ಸಲ್ಲಿಸಿ ಬೇಸತ್ತಿರುವುದರಿಂದ ಈ ರೀತಿಯ ನಿರ್ಧಾರ ತೆಗೆದುಕೊಳ್ಳಲಾಗಿದೆ . ವರದಿ ಅಂಗೀಕಾರವಾಗದೇ ಇರಲು ಕಾಂಗ್ರೆಸ್ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರೇ ನೇರ ಕಾರಣ ಎಂದು ಆರೋಪಿಸಿದರು . ಸರ್ಕಾರ ಪರಿಶಿಷ್ಟ ಜಾತಿಯ ಎಲ್ಲರನ್ನು ಒಂದೆಡೆ ಸೇರಿಸಿ ನ್ಯಾ . ಸದಾಶಿವ ಆಯೋಗದ ವರದಿ ಬಗ್ಗೆ ಪರ – ವಿರೋಧ ಚರ್ಚೆ ನಡೆಸಿ ಒಂದು ತೀರ್ಮಾನ ಕೈಗೊಳ್ಳಬೇಕು ಎಂದರು . ಮಹಾಸಭಾದ ರಾಜ್ಯ ಕಾರ್ಯದರ್ಶಿ ಪ್ರೇಮಾ ಕಲಕೇರಿ , ಕಲ್ಲಪ್ಪ ಬ್ಯಾಟನ್ನವರ , ಶಿವಾನಂದ ಬಿಸನಾಳ , ರಾಯಪ್ಪ ಬಿರಕಟ್ಟಿ , ಇತರರು ಇದ್ದರು .

City Today News

(citytoday.media)

9341997936

Leave a Reply

Please log in using one of these methods to post your comment:

WordPress.com Logo

You are commenting using your WordPress.com account. Log Out /  Change )

Google photo

You are commenting using your Google account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s

This site uses Akismet to reduce spam. Learn how your comment data is processed.