ಹಿಂದೂಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡುವ ಮೂಲಕ ವಿವಾದ ಸೃಷ್ಟಿಸಿದ್ದ  ಪಾಕಿಸ್ತಾನದ ಪಂಜಾಬ್ ಸಚಿವ ಫಯಾಜ್ ಉಲ್ ಹಸ್ಸನ್ ಚೋಹನ್ರನ್ನು ಸಂಪುಟದಿಂದ ವಜಾ ಮಾಡಲಾಗಿದೆ.

ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಫಯ್ಯಾಜುಲ್ ಹಿಂದುಗಳ ಭಾವನೆಗೆ ಧಕ್ಕೆ ತರುವಂತ ಹೇಳಿಕೆ ನೀಡಿದ್ದರು.

ಲಾಹೋರ್ (ಮಾ.6): ಹಿಂದೂಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡುವ ಮೂಲಕ ವಿವಾದ ಸೃಷ್ಟಿಸಿದ್ದ ಪಾಕಿಸ್ತಾನದ ಪಂಜಾಬ್ ಸಚಿವ ಫಯಾಜ್ ಉಲ್ ಹಸ್ಸನ್ ಚೋಹನ್ರನ್ನು ಸಂಪುಟದಿಂದ ವಜಾ ಮಾಡಲಾಗಿದೆ.
ಪಂಜಾಬ್ ಸರ್ಕಾರದಲ್ಲಿ ಮಾಹಿತಿ ಹಾಗೂ ಸಾಂಸ್ಕೃತಿ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ಫಯಾಜ್ ಹಿಂದೂಗಳ ವಿರುದ್ಧ ಹೇಳಿಕೆ ನೀಡಿದ್ದರು. ಇದಕ್ಕೆ ತೀವ್ರ ಟೀಕೆಗಳು ಕೇಳಿ ಬಂದಿದ್ದವು. ಈ ಬಗ್ಗೆ ಕ್ಷಮೆ ಕೇಳಿದ ಹೊರತಾಗಿಯೂ ಪಕ್ಷದ ಹಿರಿಯ ನಾಯಕರೇ ಫಯಾಜ್ ವಿರುದ್ಧ ಅಪಸ್ವರ ಎತ್ತಿದ್ದರು. ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಪಂಜಾಬ್ ಮುಖ್ಯಮಂತ್ರಿ ಉಸ್ಮಾನ್ ಬುಜ್ದಾರ್ಗೆ ಸೂಚನೆ ನೀಡಿದ್ದರು.

ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಫಯಾಜ್ ಹಿಂದುಗಳ ಭಾವನೆಗೆ ಧಕ್ಕೆ ತರುವಂಥ ಹೇಳಿಕೆ ನೀಡಿದ್ದರು. ಇದಾದ ನಂತರ ಹೇಳಿಕೆಗೆ ಸಮರ್ಥನೆ ನೀಡುವ ಕೆಲಸವನ್ನೂ ಮಾಡಿದ್ದರು. “ನಾನು ನನ್ನ ಹೇಳಿಕೆಗೆ ಕ್ಷಮೆ ಕೇಳುತ್ತೇನೆ. ಪಾಕಿಸ್ತಾನದಲ್ಲಿರುವ ಹಿಂದು ಸಮುದಾಯ ಉದ್ದೇಶಿಸಿ ನಾನು ಈ ಹೇಳಿಕೆ ನೀಡಿಲ್ಲ. ನಾನು ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಲ್ಲಿನ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದೆ. ಪಾಕ್ನಲ್ಲಿರುವ ಹಿಂದುಗಳನ್ನು ಉದ್ದೇಶಿಸಿ ಈ ಹೇಳಿಕೆ ನೀಡಿಲ್ಲ. ದೇಶಕ್ಕೋಸ್ಕರ ಸೇವೆ ಸಲ್ಲಿಸಲು ನಾನು ಸದಾ ಸಿದ್ಧ,” ಎಂದಿದ್ದರು. ಅವರ ಕ್ಷಮಾಪಣಾ ಹೇಳಿಕೆ ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿತ್ತು.

ಭಾರತದಲ್ಲಿ ಹಿಂದೂಗಳ ವಿರುದ್ಧ ಸರ್ವೇಸಾಮಾನ್ಯವಾಗಿ ಅವಹೇಳನಕಾರಿ ಹೇಳಿಕೆ ನೀಡುವ ನಾಯಕರುಗಳ ವಿರುದ್ಧ ಕ್ರಮ ಇಲ್ಲ ಏಕೆ?

City Today News

(citytoday.media)

9341997936

Leave a comment

This site uses Akismet to reduce spam. Learn how your comment data is processed.