ನಾಡಪ್ರಭು ಕೆಂಪೇಗೌಡ ಜಯಂತಿ ಹಾಗೂ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಪುತ್ಥಳಿ ಸ್ಥಾಪನೆ

ಬೆಂಗಳವಾರು ಮಹಾನಗರ ಸಾರಿಗೆ ಸಂಸ್ಥೆಯ ಒಕ್ಕಲಿಗ ಸಮುದಾಯ ನೌಕರರ ಮತ್ತು ಅಧಿಕಾರಿಗಳ ಕ್ಷೇಮಾಭಿವೃದ್ದಿ ಸಂಘ ( ರಿ )ಯಿಂದ ಪತ್ರಿಕಾ ಹೇಳಿಕೆ

ನಾಡಪ್ರಭು ಕೆಂಪೇಗೌಡ ಜಯಂತಿ ಹಾಗೂ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಪುತ್ಥಳಿ ಸ್ಥಾಪನೆ ಪ್ರತಿ ವರ್ಷದಂತೆ ಈ ವರ್ಷವೂ ಸಹ ನಮ್ಮ ಸಂಘದ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿಯ ಮತ್ತು ಸಂಘದ ವಾರ್ಷಿಕೋತ್ಸವವನ್ನು ಆಚರಿಸುತ್ತಿದ್ದು , ಇಂತಹ ಒಂದು ಮಹತ್ವಪೂರ್ಣ ಜಯಂತಿಯ ಆಚರಣೆಯಂದು ನಮ್ಮ ಸಂಘದ ವತಿಯಿಂದ ಸಾಮಾಜಿಕ ಕಳಕಳಿಯನ್ನು ಹೊಂದಿ ನಿಸ್ವಾರ್ಥ ಸಮಾಜ ಸೇವೆಯನ್ನು ಮಾಡುತ್ತಿರುವಂತಹ ಗಣ್ಯರುಗಳಿಗೆ ಯುವಕರ ಆಶಾಕಿರಣ ಪ್ರಶಸ್ತಿಯನ್ನು ನೀಡಲಾಗುತ್ತಿದೆ .

ಸಮುದಾಯದ ಹಿತದೃಷ್ಟಿಯಿಂದ ಮತ್ತು ಸಮುದಾಯವನ್ನು ಕಟ್ಟುವಂತಹ ಹಾಗೂ ನಾಡಪ್ರಭು ಕೆಂಪೇಗೌಡರ ಬಗ್ಗೆ ಸಂಶೋಧನೆ , ಹೋರಾಟ ಮತ್ತು ಕೆಂಪೇಗೌಡರ ಬಗ್ಗೆ ಹೆಚ್ಚಿನ ಗ್ರಂಥಗಳನ್ನು ಹೊರತಂದಿರುವಂತಹ ಗಣ್ಯರಿಗೆ ಕೆಂಪೇಗೌಡ ಸೇವಾರತ್ನ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಹಾಗೂ ಸಾರಿಗೆ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸಿಕೊಂಡು ವಿಭಿನ್ನ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಮತ್ತು ಕಾರ್ಮಿಕರ ಕಷ್ಟಸುಖಗಳಿಗೆ ಸ್ಪಂಧಿಸುತ್ತಿರುವ ಅಧಿಕಾರಿಗಳಿಗೆ , ನೌಕರರಿಗೆ ಕೆಂಪೇಗೌಡ ಸಾರಿಗೆ ರತ್ನ ಪ್ರಶಸ್ತಿಯನ್ನು ನೀಡಲಾಗುತ್ತಿದೆ . ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಮತ್ಥಳಿಯನ್ನು ಸ್ಥಾಪಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳು ಸೇರಿದಂತೆ ಸಂಬಂಧಪಟ್ಟ ಇಲಾಖೆಗಳಿಗೆ ಮನವಿ ಸಲ್ಲಿಸಿದ್ದು ಇಲ್ಲಿಯವರೆಗೆ ಯಾವುದೇ ಸ್ಪಂಧನೆ ಬಂದಿರುವುದಿಲ್ಲ .

City Today News

(citytoday.media)

9341997936

Leave a Reply

Please log in using one of these methods to post your comment:

WordPress.com Logo

You are commenting using your WordPress.com account. Log Out /  Change )

Google photo

You are commenting using your Google account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s

This site uses Akismet to reduce spam. Learn how your comment data is processed.