“ ಪ್ರಮಾಣಪತ್ರದಲ್ಲಿ ಸುಳ್ಳು ಮಾಹಿತಿ ನೀಡಿರುವ ಜಮೀರ್ ಅಹಮದ್ ಖಾನ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕೆಂದು ಕೋರಿ ” ಮನವಿ

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ , 2018ರ ವಿಧಾನಸಭಾ ಚುನಾವಣೆಯಲ್ಲಿ “ ಚಾಮರಾಜಪೇಟೆ ” ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ( ಐ ) ಪಕ್ಷದಿಂದ ಸ್ಪರ್ಧಿಸಿ ವಿಜೇತರಾಗಿರುವ B , Z . ಜಮೀರ್ ಅಹಮದ್ ಖಾನ್ ರವರು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ನಮೂನೆ 26 ರ ಪ್ರಮಾಣಪತ್ರದ ಕ್ರಮ ಸಂಖ್ಯೆ – 08 ರಲ್ಲಿ ತಾವು ಚೆಲುವರಾಯ ಸ್ವಾಮಿಯವರಿಂದ ( 42 , 00 , 000 / – ( ನಲವತ್ತೆರಡು ಲಕ್ಷ ) ಗಳನ್ನು ಸಾಲ ಪಡೆದಿರುವುದಾಗಿ ಘೋಷಿಸಿಕೊಂಡಿದ್ದಾರೆ . ಆದರೆ , ಅದೇ ಚುನಾವಣೆಯಲ್ಲಿ “ ನಾಗಮಂಗಲ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ( ಐ ) ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಚೆಲುವರಾಯ ಸ್ವಾಮಿ ಯವರು ,

ತಾವು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ನಮೂನೆ 26 ರ ಪ್ರಮಾಣಪತ್ರದಲ್ಲಿ ಶಾಸಕ B , Z , ಜಮೀರ್ ಅಹಮದ್ ಖಾನ್ ಅವರಿಗೆ ಯಾವುದೇ ಸಾಲವನ್ನು ನೀಡಿರುವ ಬಗ್ಗೆ ಘೋಷಣೆಯನ್ನೇ ಮಾಡಿಲ್ಲದಿರುವುದು ಸ್ಪಷ್ಟವಾಗಿದೆ . – ಅಂದರೆ , ಶಾಸಕ B . Z . ಜಮೀರ್ ಅಹಮದ್ ಖಾನ್ ರವರು , ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಸುಳ್ಳು ಮಾಹಿತಿ ನೀಡಿರುವುದು ಅತ್ಯಂತ ಸ್ಪಷ್ಟವಾಗಿದೆ . ಆದುದರಿಂದ , B . Z . ಜಮೀರ್ ಅಹಮದ್ ಖಾನ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವ ಸಂಬಂಧ ಕಾನೂನು ರೀತ್ಯಾ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ .

– ರಮೇಶ್ ಎನ್ . ಆರ್ .

City Today News

(citytoday.media)

9341997936

Leave a Reply

Please log in using one of these methods to post your comment:

WordPress.com Logo

You are commenting using your WordPress.com account. Log Out /  Change )

Google photo

You are commenting using your Google account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s

This site uses Akismet to reduce spam. Learn how your comment data is processed.