
ಚಾಲಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದ ಫ್ರೀಡಂ ಪಾರ್ಕ್ ನಲ್ಲಿ ಸೆಪ್ಟೆಂಬರ್ 30 ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿರುವ ಬಗ್ಗೆ ಸುದ್ದಿಗೋಷ್ಟಿ ನಡೆಸಲಾಯಿತು. ನಮ್ಮ ಚಾಲಕರ ಸಂಘದ ಅಧ್ಯಕ್ಷ ಕೆ.ಸೋಮಶೇಖರ್, ರಾಷ್ಟ್ರೀಯ ಚಾಲಕರ ಒಕ್ಕೂಟದ ಅಧ್ಯಕ್ಷ ಗಂಡಸಿ ಸದಾನಂದಸ್ವಾಮಿ,ವರುಣ್ ಕುಮಾರ್ ಹಾಗೂ ಕಾಂತರಾಜು ಉಪಸ್ಥಿತರಿದ್ದರು.
ಹೊರ ರಾಜ್ಯಗಳಾದ ಮುಂಬೈ, ಕೋಲ್ಕತ್ತಾ, ದೆಹಲಿ, ಚೆನೈ, ಕೇರಳ ಇನ್ನೂ ಹಲವಾರು ರಾಜ್ಯಗಳು ವಾಣಿಜ್ಯ ಬಳಕೆಗೆ ಬಳಸುವ ಮ್ಯಾಕ್ಸಿ ಕ್ಯಾಬ್ ಗಳಾದ ಟ್ಯಾಕ್ಸಿಗಳಿಗೆ ಮೀಟರ್ ಅಳವೀಕಡಯ ವ್ಯವಸ್ಥೆ ಇದೆ. ಆದರೆ ನಮ್ಮ ಸರ್ಕಾರದಿಂದಲೇ ಮೀಟರ್ ಅಳವಡಿಸಿಕೊಡಬೇಕೆಂದು ಸಂಘಟನೆ ಆಗ್ರಹಿಸಿದೆ.
ರಾಷ್ಟ್ರೀಯ ಚಾಲಕರ ಒಕ್ಕೂಟದ ಗಂಡಸಿ ಸದಾನಂದ ಸ್ವಾಮಿ ಮಾತನಾಡಿ ಹಿಂದಿನ ಸಮ್ಮಿಶ್ರ ಸರ್ಕಾರ ಮಂಡಿಸಿರುವ ಬಜೆಟ್ ನಲ್ಲಿ ಚಾಲಕರ ದಿನಾಚರಣೆ, ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಗುಂಪುವಿಮೆ, ಬೆಂಗಳೂರು ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ 50 ಕೋಟಿ ರೂ. ವೆಚ್ಚದಲ್ಲಿ ಸಾರಥಿ ಸೂರು ಯೋಜನೆ ಘೋಷಿಸಲಾಗಿದೆ. ಆದರೆ ಇದುವರೆಗೂ ಈ ಕುರಿತು ಯಾವ ಸಭೆಯನ್ನೂ ಕರೆದಿಲ್ಲ. ಈ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದಿನಾಂಕ : 30.00.2019 ರಂದು ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.
City Today News
(citytoday.news)
9341997936
