
” ಸ್ವರಾ ” ಚಿತ್ರವನ್ನು ಬೇರೆ ಭಾಷೆಗಳಲ್ಲಿ ಬಿಡುಗಡೆ ಮಾಡದೆ ಕನ್ನಡದಲ್ಲಿ ಮಾತ್ರ ಬಿಡುಗಡೆ ಮಾಡುವಂತೆ ಮನವಿ . ಮಾನ್ಯರೆ , ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಪರಭಾಷಾ ಚಿತ್ರವಾದ ‘ ಸ್ವಲಾ ‘ ಚಿತ್ರವು ಇನ್ನೇನು ಕೆಲವೇ ದಿನಗಳಲ್ಲಿ ಚಿತ್ರವು ಕರ್ನಾಟಕದಲ್ಲಿ ಸುಮಾರು 800 ಕ್ಕೂ ಹೆಚ್ಚು ಸೀನ್‌ಗಳಲ್ಲಿ ಪರ ಭಾಷೆಯಲ್ಲಿ ಬಿಡುಗಡೆ ಮಾಡುತ್ತಿದ್ದು ಕೇವಲ 20 ರಿಂದ 30 ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವುದು ಹಂಚಿಕೆದಾರರ ಉದ್ದೇಶ ಆದರೆ ನಮ್ಮ ಕರ್ನಾಟಕ ಸಂಘಟನೆಗಳ ಒಕ್ಕೂಟವು ‘ ಸೈರಾ ‘ ಚಿತ್ರವು ಕರ್ನಾಟಕ ರಾಜ್ಯದಾದ್ಯಂತ ಕನ್ನಡದಲ್ಲಿ ಬಿಡುಗಡೆ ಮಾಡಬೇಕು ಎಂದು ವಾಣಿಜ್ಯ ಮಂಡಳಿಗೆ ಮನವಿ ನೀಡುತ್ತಿದ್ದೇವೆ . ಈಗಾಗಲೇ ಸಾಕಷ್ಟು ಚಿತ್ರಗಳು ಬಿಡುಗಡೆಯಾಗುವ ಸಂದರ್ಭದಲ್ಲಿ ವಾಣಿಜ್ಯ ಮಂಡಳಿಗೆ ಮನವಿ ಕೊಟ್ಟರೂ ಯಾವುದೇ ಪ್ರಯೋಜನವಾಗಿಲ್ಲ . ಆದರೆ ಈ ಬಾರಿ ಪರಭಾಷೆಯಾದ ‘ ಸೈರಾ ” ಚಿತ್ರವನ್ನು ಬಿಡುಗಡೆ ಮಾಡಿದ್ದಲ್ಲಿ ಚಿತ್ರಮಂದಿರಗಳಿಗೆ ಮುತ್ತಿಗೆ ಹಾಕಿ ಚಿತ್ರ ಪ್ರದರ್ಶನ ತಡೆಯುವ ಕಾರ್ಯವನ್ನು ಒಕ್ಕೂಟ ಮಾಡುತ್ತದೆಂದು ಈ ಮೂಲಕ ವಾಣಿಜ್ಯ ಮಂಡಳಿಗೆ ಎಚ್ಚರಿಕೆಯನ್ನು ನೀಡುತ್ತಿದ್ದೇವೆ ಎಂದರು.
-ನಾಗೇಶ್
ಕರ್ನಾಟಕ ಸಂಘಟನೆಗಳ ಒಕ್ಕೂಟ
City Today News
(citytoday.media)
9341997936
