ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದರಾದ ಕು . ಶೋಭಾ ಕರಂದ್ಲಾಜೆ ಅವರು 25 . 10 . 2019ರಂದು ಬಿಡುಗಡೆ ಮಾಡಿದ ಮಾಧ್ಯಮ ಹೇಳಿಕೆ

ಕೇಂದ್ರ ಸರ್ಕಾರದ ಪ್ರಾಯೋಜಿತ ಯೋಜನೆಯಡಿ ಕರ್ನಾಟಕ್ಕೆ ಮೂರು ಹೊಸ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಮಂಜೂರಾಗಿದ್ದು , ಇದಕ್ಕಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾ . ಹರ್ಷವರ್ಧನ್ ಹಾಗೂ ಮುಖ್ಯಮಂತ್ರಿಗಳಾದ ಶ್ರೀ ಬಿ . ಎಸ್ . ಯಡಿಯೂರಪ್ಪನವರಿಗೆ ಧನ್ಯವಾದಗಳು . ಚಿಕ್ಕಮಗಳೂರು , ಹಾವೇರಿ ಮತ್ತು ಯಾದಗಿರಿಯಲ್ಲಿ ತಲಾ 325 ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ವೈದ್ಯಕೀಯ ಕಾಲೇಜುಗಳಿಗೆ ಶೇ . 60 ರಷ್ಟು ಅನುದಾನವನ್ನು ಕೇಂದ್ರ ಸರ್ಕಾರ ಒದಗಿಸಲು ಸಮ್ಮತಿಸಿದೆ .

ಚಿಕ್ಕಮಗಳೂರು ಜೊತೆಗೆ ಉತ್ತರ ಕರ್ನಾಟಕದ ಎರಡು ಜಿಲ್ಲೆಗಳಿಗೆ ಕೇಂದ್ರ ಸರ್ಕಾರದಿಂದ ಇಂತಹ ಗಮನಾರ್ಹ ನೆರವು ದೊರೆತಿರುವುದು ಸ್ವಾಗತಾರ್ಹ . ಕರ್ನಾಟಕದ ಅಭಿವೃದ್ಧಿಯ ವಿಷಯದಲ್ಲಿ ಕೇಂದ್ರ ಸರ್ಕಾರ ಹೊಂದಿರುವ ಕಾಳಜಿಯ ದ್ಯೋತಕವಿದು . ಕೇಂದ್ರ ಸರ್ಕಾರ ಮೂರು ಕಾಲೇಜುಗಳ ಸ್ಥಾಪನೆಗಾಗಿ ಒಟ್ಟು 975 ಕೋಟಿ ರೂ . ಗಳಿಗೆ ಮಂಜೂರಾತಿ ನೀಡಿದ್ದು ಇದರಲ್ಲಿ 390 ಕೋಟಿ ರೂಪಾಯಿಗಳನ್ನು ರಾಜ್ಯ ಸರ್ಕಾರ ಒದಗಿಸಬೇಕಿದೆ . ರಾಜ್ಯದ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಕೇಂದ್ರ ಸರ್ಕಾರದ ಈ ಕ್ರಮವು ಮಹತ್ವದ ಪಾತ್ರ ವಹಿಸಲಿದೆ . ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೂ ಧನ್ಯವಾದಗಳು .

ಸಂಚಾಲಕ

ಎಸ್ . ಶಾಂತಾರಾಮ್

ರಾಜ್ಯ ಬಿಜೆಪಿ ಮಾಧ್ಯಮ

City Today News

(citytoday.media)

9341997936

Leave a Reply

Please log in using one of these methods to post your comment:

WordPress.com Logo

You are commenting using your WordPress.com account. Log Out /  Change )

Google photo

You are commenting using your Google account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s

This site uses Akismet to reduce spam. Learn how your comment data is processed.