ದೇವಸ್ಥಾನಗಳಿಗೆ ಹೆಚ್ಚೆಚ್ಚು ಹೋಗುವುದರಿಂದ ಆರೋಗ್ಯವರ್ಧಿಸುತ್ತದೆ…!!!ವೈಜ್ಞಾನಿಕ ಸಂಶೋಧನೆಯಿಂದ ದೃಢಪಟ್ಟ ವಿಷಯ..

ದೇವಸ್ಥಾನಕ್ಕೆ ಹೋಗ ಬೇಕೆ ?

ದೇವಸ್ಥಾನಗಳಿಗೆ ಹೆಚ್ಚೆಚ್ಚು ಹೋಗುವುದರಿಂದ ಆರೋಗ್ಯ
ವರ್ಧಿಸುತ್ತದೆ…!!!
ವೈಜ್ಞಾನಿಕ ಸಂಶೋಧನೆಯಿಂದ ದೃಢಪಟ್ಟ ವಿಷಯ..
ಗೆಳೆಯರೇ..
ನಿಜಕ್ಕೂ ಅಚ್ಚರಿಯಾಗಬಹುದು… ದೇವಸ್ಥಾನಗಳಿಗೆ
ಹೋಗುವುದನ್ನು ನಿತ್ಯಜೀವನದಲ್ಲಿ ಅಳವಡಿಸಿಕೊಳ್ಳಿ..
ಇದರಿಂದ ನಿಮ್ಮ ಮಾನಸಿಕ ಹಾಗೂ ದೈಹಿಕ ಆರೋಗ್ಯ
ವೃದ್ಧಿಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ..
ದೇವಸ್ಥಾನಗಳನ್ನು ಕಟ್ಟಿದ ಜಾಗಗಳಲ್ಲಿ ಅಯಸ್ಕಾಂತೀಯ
ತರಂಗಗಳು (Magnetic Waves) ಸದಾ ಪ್ರವಹಿಸುತ್ತಲೇ
ಇರುತ್ತವೆ… ಹೇಗೆ ಗೊತ್ತೇ…?? ದೇವರ ಮೂಲಸ್ಥಾನ
ಗರ್ಭಗುಡಿ… ಆ ಗರ್ಭಗುಡಿಗೆ ಅಥವಾ ಮೇಲ್ಛಾವಣಿಗೆ
ಹೊದೆಸಿರುವ ತಾಮ್ರದ ಹೊದಿಕೆಗಳನ್ನು ನೀವು
ನೋಡಿರಬಹುದು… ಆ ತಾಮ್ರದ ಹೊದಿಕೆಗಳಲ್ಲೇ ಸದಾ
ಸಕಾರಾತ್ಮಕ ಶಕ್ತಿ (Positive energy) ಪ್ರವಹಿಸುತ್ತಲೇ
ಇರುತ್ತದೆ… ನಾವು ದೇವಸ್ಥಾನಕ್ಕೆ ಅಥವಾ ದೇವಸ್ಥಾನದ
ಪ್ರದಕ್ಷಿಣೆ ಹಾಕುವಾಗ ಈ ಶಕ್ತಿ ನಮ್ಮ ಶರೀರದಲ್ಲೂ
ಪ್ರವಹಿಸುತ್ತದೆ… ದೇವಸ್ಥಾನದಲ್ಲಿ ಜಾಸ್ತಿ ಹೊತ್ತು ಕುಳಿತು
ಜಪ ಅಥವಾ ಧ್ಯಾನ ಮಾಡುವುದರಿಂದ ದೇಹದ ಆಯಾಸ
ಕಡಿಮೆಯಾಗಿರುವುದು ನಿಮ್ಮ ಗಮನಕ್ಕೂ ಬಂದಿರಬಹುದು…
ಅದಕ್ಕೆ ಕಾರಣ ಇದೇ Positive energy. ದೇವಸ್ಥಾನದಲ್ಲಿನ
ಶಾಂತತೆಯಿಂದ ನಮ್ಮ ಮನಸ್ಸೂ ಪ್ರಶಾಂತವಾಗುತ್ತದೆ
ಎಂಬುದಕ್ಕೆ ಯಾವುದೇ ಅನುಮಾನವಿಲ್ಲ.
ಇನ್ನೂ ಇದೆ… ಪವಿತ್ರವಾದ ಗರ್ಭಗೃಹ ಮೂರೂ ಕಡೆಯಿಂದ
ಮುಚ್ಚಲಾಗಿರುತ್ತದೆ… ಮುಖ್ಯದ್ವಾರವೊಂದೇ
ತೆರೆದಿರುತ್ತದೆ… ಗರ್ಭಗುಡಿಯಲ್ಲಿ ಪ್ರವಹಿಸುವ ಅಯಸ್ಕಾಂತೀಯ
ತರಂಗಗಳು (Magnetic Waves) ಮುಖ್ಯದ್ವಾರದ ಮೂಲಕ
ಜೋರಾಗಿ ಚಿಮ್ಮುತ್ತದೆ… ಆದ್ದರಿಂದ ಮುಖ್ಯದ್ವಾರದ
ಮುಂದೆ ನಿಂತಷ್ಟೂ ನಮಗೆ ಸಮಾಧಾನವಾಗುತ್ತದೆ… ಒಂದೆಡೆ
ದೇವರ ದರ್ಶನ , ಇನ್ನೊಂದೆಡೆ ಆಯಾಸ ಪರಿಹಾರ… ಹೇಗಿದೆ
ನೋಡಿ..!!
ಹಾಗೇ ದೀಪಗಳಿಂದ ಬೆಳಕಿನ ಶಕ್ತಿ (Light energy),
ಘಂಟಾನಾದದಿಂದ ಹಾಗೂ ಮಂತ್ರಘೋಷಗಳಿಂದ ಶಬ್ದ ಶಕ್ತಿ
(Sound Energy), ಹೂಗಳ ಪರಿಮಳದಿಂದ, ಕರ್ಪೂರದ
ಸುವಾಸನೆಯಿಂದ ರಾಸಾಯನಿಕ ಶಕ್ತಿ (Chemical Energy),
ಇವೆಲ್ಲಕ್ಕಿಂತಲೂ ಪ್ರಮುಖವಾದದ್ದು ದೇವರ ಪ್ರತಿಮೆಯಿಂದ
ಹಾಗೂ ಗರ್ಭಗುಡಿಯಲ್ಲಿ ಇಟ್ಟಿರುವ ತಾಮ್ರದ ಹರಿವಾಣ,
ತಾಮ್ರದ ಪೂಜಾಸಾಮಗ್ರಿಗಳಿಂದ ಬರುವ, ಉತ್ತರ ದಕ್ಷಿಣ
ಧೃವಗಳಿಂದ (South north pole) ಪ್ರವಹಿಸುವ ಸಕಾರಾತ್ಮಕ
ಶಕ್ತಿ..!!
ಇನ್ನು ತೀರ್ಥಸೇವನೆ…
ತೀರ್ಥವನ್ನು ಮಾಡುವುದು ಹೇಗೆ…???
ಯಾಲಕ್ಕಿ , ತುಳಸಿ , ಲವಂಗ ಮುಂತಾದವುಗಳಿಂದ…
ಇವುಗಳನ್ನು ನೀರಿಗೆ ಹಾಕುವುದರಿಂದ ನೀರಿನಲ್ಲಿಯೂ
ಸಕಾರಾತ್ಮಕ ಶಕ್ತಿಯ ಉದ್ಭವವಾಗುತ್ತದೆ…
ತೀರ್ಥಸೇವನೆಯಿಂದ ದೇಹ ಆಹ್ಲಾದವಾಗುತ್ತದೆ… ಚೈತನ್ಯ
ಮೂಡುತ್ತದೆ… ಆರೋಗ್ಯಕರವೂ ಹೌದು… ಹೇಗೆಂದರೆ, ಲವಂಗ
ನಮ್ಮ ಹಲ್ಲುಗಳ ಆರೋಗ್ಯವನ್ನು ವರ್ಧಿಸುತ್ತದೆ, ತುಳಸಿ ನೆಗಡಿ,
ಕೆಮ್ಮು, ಬರದಂತೇ ತಡೆಯುತ್ತದೆ, ಯಾಲಕ್ಕಿ ಅಥವಾ
ಪಂಚಕರ್ಪೂರ ಬಾಯಿಯನ್ನು ಶುದ್ಧವಾಗಿಸುತ್ತದೆ… ಇನ್ನೂ
ಅನೇಕ ಔಷದೀಯ ಗುಣಗಳು ತೀರ್ಥದಲ್ಲಿರುತ್ತವೆ…
ದೀಪಾರಾಧನೆ, ವಿಶೇಷಪೂಜೆಗಳ ದಿನಗಳಲ್ಲಿ ದೇವಾಲಯಗಳಲ್ಲಿ
ಹೆಚ್ಚು – ಹೆಚ್ಚು ಸಕಾರಾತ್ಮಕಶಕ್ತಿಯ ಸಂಚಾರವಾಗುತ್ತಿರು
ತ್ತದೆ…
ಇನ್ನು ದೇವಸ್ಥಾನಗಳಲ್ಲಿ ಶುದ್ಧಿಗಾಗಿ ನೀರನ್ನು ದೇಹದ
ಮೇಲೆ ಚಿಮುಕಿಸುತ್ತಿರುವುದನ್ನು ನೋಡಿರಬಹುದು…
ಇದರಿಂದ ನಮ್ಮ ಶರೀರದ ಶುದ್ಧಿ ಹಾಗೂ ಆಯಾಸದ
ನಿವಾರಣೆಯಾಗುತ್ತದೆ… ಆ ಕಾರಣದಿಂದಲೇ ಪುರುಷರು
ದೇವಸ್ಥಾನಕ್ಕೆ ಹೋಗುವಾಗ ಅಂಗಿಯನ್ನು ಕಳಚಿಟ್ಟು
ಹೋಗುವುದು ಒಳ್ಳೆಯದು… ಮಹಿಳೆಯರು ಜಾಸ್ತಿ ಒಡವೆಗಳನ್ನು
ಹಾಕಿಕೊಂಡು ಹೋಗುವುದು ಒಳ್ಳೆಯದು… ಏಕೆಂದರೆ
ಲೋಹಗಳಿಂದ ಶಕ್ತಿಯ ಸಂಚಾರ ದೇಹದಲ್ಲಾಗುತ್ತದೆ..
ಸಾಕಲ್ಲವೇ ಇಷ್ಟು ವೈಜ್ಞಾನಿಕ ಆಧಾರ…??

ಆದ್ದರಿಂದ ಸ್ನೇಹಿತರೇ ದೇವಸ್ಥಾನಗಳಿಗೆ ಹೆಚ್ಚೆಚ್ಚು ಭೇಟಿ
ನೀಡಿ…

ಕಡ್ಡಾಯವಾಗಿ ಓದಿ ನಿಮ್ಮ ಗೆಳೆಯರಿಗೂ ತಿಳಿಸಿ….

ಹಿಂದೂ ಸಂಸ್ಕ್ರತಿಯಲ್ಲಿ ಪ್ರತಿಯೊಂದಕ್ಕೂ ಕಾರಣ ಇದೆ ಸ್ನೇಹಿತರೇ….

City Today News

(citytoday.media)

9341997936

Leave a Reply

Please log in using one of these methods to post your comment:

WordPress.com Logo

You are commenting using your WordPress.com account. Log Out /  Change )

Google photo

You are commenting using your Google account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s

This site uses Akismet to reduce spam. Learn how your comment data is processed.