ನ್ಯಾಯಮೂರ್ತಿ ಎಚ್ . ಎನ್ ನಾಗಮೋಹನ ದಾಸ್ ಆಯೋಗದ ವತಿಯಿಂದ ದಿನಾಂಕ : 25 – 02 – 2020 ರಂದು ಬೆಂಗಳೂರು ನಗರದಲ್ಲಿ ಬೆಂಗಳೂರು ವಿಭಾಗ ಮಟ್ಟದ ಜಿಲ್ಲೆಗಳ ಅಹವಾಲು ಸ್ವೀಕೃತಿ ಮತ್ತು ಸಮಾಲೋಚನೆ ಸಭೆ ನಡೆಸುವ ಬಗ್ಗೆ .

ಸರ್ಕಾರದ ಆದೇಶ ಸಂಖ್ಯೆ : ಸಕಇ / 303 / ಪವಯೋ / 2015 , ದಿನಾಂಕ : 11 – 10 – 2019 ರಲ್ಲಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ಹೆಚ್ಚಿಸುವ ಕುರಿತು ವರದಿ ನೀಡಲು ನ್ಯಾಯಮೂರ್ತಿ ಎಚ್ . ಎನ್ ನಾಗಮೋಹನ ದಾಸ್ ಆಯೋಗವನ್ನು ರಚಿಸಿ ಆದೇಶಿಸಲಾಗಿರುತ್ತದೆ . ಅದರಂತೆ ಗೌರವಾನ್ವಿತ ಅಧ್ಯಕ್ಷರಾದ ನ್ಯಾಯಮೂರ್ತಿ ಎಚ್ . ಎನ್ ನಾಗಮೋಹನ ದಾಸ್‌ರವರು ದಿನಾಂಕ : 25 – 02 – 2020 ರಂದು ಡಾ | | ಬಿ . ಆರ್ ಅಂಬೇಡ್ಕರ್ ಭವನದ ಆಡಿಟೋರಿಯಂ , ವಸಂತನಗರ , ಬೆಂಗಳೂರು ನಗರದಲ್ಲಿ ಬೆಳಗ್ಗೆ 10 . 30 ಗಂಟೆಗೆ “ ಬೆಂಗಳೂರು ವಿಭಾಗ ” ದ ಎಲ್ಲಾ ಜಿಲ್ಲೆಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಮುಖಂಡರು ಮತ್ತು ಸಂಘಟನೆಗಳಿಂದ ಅಹವಾಲು ಸ್ವೀಕೃತಿ ಮತ್ತು ಸಮಾಲೋಚನೆ ಸಭೆಯನ್ನು ಆಯೋಜಿಸಲಾಗಿರುತ್ತದೆ . –

1 , ಸದರಿ ಸಭೆಗೆ ಬೆಂಗಳೂರು ನಗರ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಮುಖಂಡರು ಅಥವಾ ಸಂಘಟನೆಗಳು ತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ನೀಡಬಹುದಾಗಿದೆ .

2 . ಸಮಾಲೋಚನಾ ಸಭೆಯಲ್ಲಿ ಮೌಖಿಕವಾಗಿ ವಿಚಾರ ಅಥವಾ ಅಭಿಪ್ರಾಯಗಳನ್ನು ತಿಳಿಸಬಯಸುವವರು . ಕಾರ್ಯಕ್ರಮ ಪ್ರಾರಂಭವಾಗುವ ಒಂದು ಗಂಟೆ ಮೊದಲು ಆಡಿಟೋರಿಯಂ ಹೊರಗಡೆ , ಅದಕ್ಕಾಗಿ ತೆರೆಲಾಗುವ ಕೌಂಟರ್‌ಗಳಲ್ಲಿ ಹೆಸರುಗಳನ್ನು ನೋಂದಾಯಿಸಿಕೊಳ್ಳುವುದು , ಹೆಸರನ್ನು ನೋಂದಾಯಿಸಿಕೊಂಡವರಿಗೆ ಮಾತ್ರ ಸಮಾವೇಶದಲ್ಲಿ ತಮ್ಮ ಅಭಿಪ್ರಾಯವನ್ನು ಮೌಖಿಕವಾಗಿ ತಿಳಿಸಲು ಅವಕಾಶವಿರುತ್ತದೆ ಹಾಗೂ ವಿಷಯಕ್ಕೆ ಸಂಬಂಧಪಟ್ಟಂತೆ ಸಂಕ್ಷಿಪ್ತವಾಗಿ ಹೆಚ್ಚು ಸಮಯ ತೆಗೆದುಕೊಳ್ಳದೆ ತಮ್ಮ ಅಭಿಪ್ರಾಯ ಮಂಡಿಸಬಹುದಾಗಿದೆ ಎಂದು ಜಂಟಿ ನಿರ್ದೇಶಕರಾದ ಲಕ್ಷ್ಮಣ ರೆಡ್ಡಿ ಸಮಾಜ ಕಲ್ಯಾಣ ಇಲಾಖೆ ಬೆಂಗಳೂರು ನಗರ ಜಿಲ್ಲೆ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ .

ಹೆಚ್ಚಿನ ವಿವರಗಳಿಗಾಗಿ ಈ ಕೆಳಕಂಡ ಕಛೇರಿಗಳನ್ನು ಸಂಪರ್ಕಿಸುವುದು

– ಯಶೋಧ. ಪಿ

ಸದಸ್ಯರು – ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ದೌರ್ಜನ್ಯ ನಿಯಂತ್ರಣಾ ಹಾಗೂ ಜಾಗೃತಿ ಉಸ್ತುವಾರಿ ಸಮಿತಿ

City Today News

(citytoday.media)

9341997936

Leave a comment

This site uses Akismet to reduce spam. Learn how your comment data is processed.