ಕೃಷಿ ವಿಶ್ವವಿದ್ಯಾಲಯಗಳ ಕುಲಪತಿಗಳ ಜೊತೆ ಕೃಷಿ ಸಚಿವರ ಮಹತ್ವದ ಸಭೆ

ಬೆಂಗಳೂರು,ಏ.13(ಯುಎನ್‌ಐ) ಕೃಷಿ ಸಚಿವರ .ಬಿ ಸಿ ಪಾಟೀಲ್ ರವರು ಕೋವೀಡ್ -೧೯ ನಿರ್ಬಂಧಿತ ಸಮಯದಲ್ಲಿ ಕೃಷಿ ಸಂಬಂಧಿಸಿದಂತೆ ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸಲು ಹಾಗೂ ರೈತರ ಗ್ರಾಹಕರ ನಡುವಿನ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಇಂದು ಕೃಷಿ ಕಾರ್ಯದರ್ಶಿಗಳು ಆಯ್ತುಕರು, ನಿರ್ದೇಶಕರು,ಕೃಷಿ ವಿಶ್ವವಿದ್ಯಾಲಯಗಳ ಉಪಕುಲಪತಿಗಳು,ಹಾಗೂ ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.

ವಿಕಾಸಸೌಧದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮುಂಗಾರು ಹಂಗಾಮಿನ‌ ಜಿಲ್ಲಾವಾರು ಬಿತ್ತನೆ ಬೀಜ, ರಸಗೊಬ್ಬರ ಬೇಡಿಕೆ,ಬಿಟಿ ಹತ್ತಿ ದಾಸ್ತಾನು, ಲಭ್ಯತೆ ಕುರಿತು ಚರ್ಚಿಸಿದ ಸಚಿವರು,ರೈತರಿಗೆ ಯಾವುದೇ ಕಾರಣಕ್ಕೂ ಬಿತ್ತನೆಬೀಜಕ್ಕಾಗಲಿ ರಸಗೊಬ್ಬರಕ್ಕಾಗಲಿ ಕೊರತೆಯಾಗದಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಕೃಷಿ ಪರಿಕರ ಮಾರಾಟ ಮಾಡುವ ಮುನ್ನ ಮುನ್ನೆಚ್ಚರಿಕೆ ಮುಂಜಾಗ್ರತಾ ಕ್ರಮಗಳು ಹಾಗೂ ಅಗ್ರಿ ವಾರ್ ರೂಮ್ ಕಾರ್ಯವೈಖರಿ ಸಂಬಂಧ, ಕಿಸಾನ್ ಸಮ್ಮಾನ್ ನಿಧಿ ಹಾಗೂ ಬೆಳೆ ವಿಮೆ‌ ಯೋಜನೆಯ ಪ್ರಗತಿ ಸಂಬಂಧ ಕೃಷಿ ಅಧಿಕಾರಿಗಳ ಜೊತೆ ಚರ್ಚಿಸಲಾಯಿತು‌.

ಸಭೆ ಬಳಿಕ ಕೃಷಿ ಸಚಿವರು ಮಾತನಾಡಿ,‌ಏ.6ರಿಂದ 11ರವರೆಗೆ 19 ಜಿಲ್ಲೆಗಳಿಗೆ ಭೇಟಿ ನೀಡಿ‌,‌ ಕೃಷಿ ಚಟುವಟಿಕೆಗಳು ರೈತರ ಸಮಸ್ಯೆಗಳ ಬಗ್ಗೆ ಸಭೆ ನಡೆಸಿ ಮಾಹಿತಿ ಪಡೆದಿದ್ದೇನೆ.ಕೋವಿಡ್-೧೯ ಲಾಕ್ಡೌನ್ ನಿಂದ ಕೃಷಿ ಚಟುವಟಿಕೆಗಳ ಮೇಲಿನ ಪರಿಣಾಮ ಪ್ರವಾಸದ ಬಗ್ಗೆ ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಸಲಾಗಿದೆ ಎಂದರು.
ಇಂದು ರಾಜ್ಯದ ನಾಲ್ಕು ಕೃಷಿ ವಿಶ್ವವಿದ್ಯಾಲಯಗಳ ಉಪಕುಲಪತಿಗಳ ಜೊತೆ ಸಭೆ ನಡೆಸಿ,‌ಕೋವಿಡ್-೧೯
ಹಿನ್ನಲೆಯಲ್ಲಿ ರೈತರಿಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಸಲಹೆಗಳನ್ನು ಪಡೆಯಲಾಗಿದೆ‌ ಹಾಗೂ ಪ್ರಸ್ತುತ ಸಂದರ್ಭದಲ್ಲಿ ಕೃಷಿ ವಿಶ್ವವಿದ್ಯಾಲಯಗಳು ಯಾವ ರೀತಿ ಕೆಲಸ ನಿರ್ವಹಿಸಬಹುದೆಂಬ ನಿಟ್ಟಿನಲ್ಲಿ‌ ಚರ್ಚಿಸಲಾಗಿದೆ.ಮುಂಗಾರು ಹಂಗಾಮಿಗೆ ಬೀಜ ರಸಗೊಬ್ಬರದ ಕೊರತೆಯಾಗುವುದಿಲ್ಲ.ಈ ಬಗ್ಗೆ ರೈತರಿಗೆ ಯಾವುದೇ ಸಂಶಯ ಬೇಡ. ಸರ್ಕಾರ ರೈತರ ಪರವಾಗಿದ್ದು, ರೈತರ ಕೃಷಿ ಚಟುವಟಿಕೆಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಬದ್ಧವಾಗಿದೆ.ರೈತರು ಎದೆಗುಂದುವ ಆತಂಕಕ್ಕೊಳಗಾಗುವ ಅವಶ್ಯಕತೆಯಿಲ್ಲ .

ಲಾಕ್ಡೌನ್ ಇನ್ನೂ ಮುಂದುವರೆದರೂ ಸಹ ಕೃಷಿ ಚಟುವಟಿಕೆಗಳನ್ನು ನಿಲ್ಲಿಸುವುದಿಲ್ಲ.ಕರೊನಾ ಲಾಕ್ಡೌನ್ ಯಾರ ತಪ್ಪಿನಿಂದ ಆದದ್ದಲ್ಲ. ನೈಸರ್ಗಿಕವಾಗಿ ಸೃಷ್ಟಿಯಾದ ವಿಪತ್ತು ಇದು.ಇದನ್ನು ಯಾರೂ ನಿರೀಕ್ಷಿಸಿಯೂ ಇರಲಿಲ್ಲ.ಕೃಷಿ ಚಟುವಟಿಕೆ ನಿಲ್ಲಿಸಿದರೆ ದೇಶಕ್ಕೆ ಅನ್ನ ಸಿಗದ ಪರಿಸ್ಥಿತಿ ಬರಬಹುದು. ಹೀಗಾಗಿ ಯಾವುದೇ ಕಾರಣಕ್ಕೂ ಕೊರೊನಾ ಲಾಕ್ಡೌನ್‌ ನಿಂದ ಕೃಷಿ ಚಟುವಟಿಕೆಗೆ ನಿರ್ಬಂಧವಿಲ್ಲ. ಸಾಮಾಜಿಕ ಅಂತರ ಕಾಯ್ದುಕೊಂಡು ಕೃಷಿ ಚಟುವಟಿಕೆ ನಡೆಸಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಭೆಯಲ್ಲಿ ಕೃಷಿ‌ಇಲಾಖೆಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯ,‌ಕೃಷಿ ನಿರ್ದೇಶಕ ಶ್ರೀನಿವಾಸ್ ಸೇರಿದಂತೆ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

City Today News

(citytoday.media)

9341997936

Leave a comment

This site uses Akismet to reduce spam. Learn how your comment data is processed.