ಜಗಜ್ಯೋತಿ ಬಸವೇಶ್ವರರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಜಲಸಂಪನ್ಮೂಲ ಸಚಿವ ಶ್ರೀ ರಮೇಶ್ ಜಾರಕಿಹೊಳಿ‌

ಬಸವ ಜಯಂತಿ ; ಜಗಜ್ಯೋತಿ ಬಸವೇಶ್ವರರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಜಲಸಂಪನ್ಮೂಲ ಸಚಿವ ಶ್ರೀ ರಮೇಶ್ ಜಾರಕಿಹೊಳಿ‌

ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿರುವ ಜಗಜ್ಯೋತಿ
ಬಸವೇಶ್ವರರ ಪ್ರತಿಮೆಗೆ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಅವರು ಮಾಲಾರ್ಪಣೆ ಮಾಡಿ ಎಲ್ಲರಿಗೂ 887 ನೇ ಬಸವ ಜಯಂತಿ ಶುಭಾಶಯ ತಿಳಿಸಿದರು.

ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳೋಣ : ಸಚಿವರ ಕರೆ.

12 ನೇ ಶತಮಾನದಲ್ಲಿ ಸಾಮಾಜಿಕ ಸಾಮರಸ್ಯ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬಸವಣ್ಣ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಸಾರಿ ವಿಶ್ವಗುರುವಾದರು ಎಂದು ಸಚಿವ ರಮೇಶ್ ಜಾರಕಿಹೊಳಿ‌ ಹೇಳಿದರು.

ಬಸವಣ್ಣನವರ ತತ್ವಗಳನ್ನು ನಾವೆಲ್ಲರೂ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಮತ್ತು ಅವರ ವಚನಗಳ ಸಾರವನ್ನು ಅರಿತು ಒಳ್ಳೆಯ ಜೀವನ ನಡೆಸಬೇಕೆಂದು ಸಚಿವರು ಕರೆ‌ ನೀಡಿದರು.

ಬಸವ ಜಯಂತಿ ಕಾರ್ಯಕ್ರಮದಲ್ಲಿ ಗೋಕಾಕ್ ಮುರುಘಾಮಠದ ಶರಣರು ಸೇರಿದಂತೆ ಅನೇಕ ಬಸವ ತತ್ವ ಅನುಯಾಯಿಗಳು ಉಪಸ್ಥಿತರಿದ್ದರು.

ಲಾಕ್ ಡೌನ್ ಪರಿಣಾಮವಾಗಿ ಬಸವ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು.

City Today News

(citytoday.media)

9341997936

Leave a comment

This site uses Akismet to reduce spam. Learn how your comment data is processed.