ಆತ್ಮಹತ್ಯೆ ಮಾಡಿಕೊಂಡ ಚಾಲಕ ಮಧು ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರಕ್ಕೆ ರಾಷ್ಟ್ರೀಯ ಚಾಲಕರ ಒಕ್ಕೂಟ ಒತ್ತಾಯ -ಒಕ್ಕೂಟದ ಅಧ್ಯಕ್ಷ ಗಂಡಸಿ ಸದಾನಂದಸ್ವಾಮಿ.

ಬೆಂಗಳೂರು: ಚಾಲಕರು ತೀವ್ರ ಸಂಕಷ್ಟದಲ್ಲಿದ್ದು ಮುಖ್ಯಮಂತ್ರಿಗಳು ಕಳೆದ ವಾರ 7.75 ಲಕ್ಷ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ 5 ಸಾವಿರ ರೂ. ಪರಿಹಾರ ನೀಡಿದ್ದರು. ಇದುವರೆಗೂ ಸೇವಾಸಿಂಧು ಆಪ್‍ನಲ್ಲಿ ಚಾಲಕರಿಗೆ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದರು. ಇದುವರೆಗೂ ಆಪ್ ಸಕ್ರಿಯವಾಗಿಲ್ಲ. ಚಾಲಕರು ಸಂಕಷ್ಟದಲ್ಲಿರುವ ಬೆನ್ನಲ್ಲೇ ಕೊರಟಗೆರೆ ತಾಲ್ಲೂಕಿನಲ್ಲಿ ಚಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ತಳಿದುಬಂದಿದ್ದು. ಈ ಕೂಡಲೇ ಈತನ ಕುಟುಂಬಕ್ಕೆ ಸರ್ಕಾರ 10 ಲಕ್ಷ ರೂ. ಹಣವನ್ನು ಪರಿಹಾರವಾಗಿ ಒದಗಿಸಬೇಕೆಂದು ಚಾಲಕರ ಒಕ್ಕೂಟದ ಅಧ್ಯಕ್ಷ ಗಂಡಸಿ ಸದಾನಂದಸ್ವಾಮಿ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಚಾಲಕರ ಸಂಕಷ್ಟಕ್ಕೆ ಸ್ಪಂಧಿಸುವಂತೆ ರಾಜ್ಯ ಸರ್ಕಾರದ ಬಳಿ ಮನವಿ ಮಾಡಿದ್ದೆವು. ಅದಕ್ಕೆ ಸ್ಪಂಧಿಸುವಂತೆ ಖಾಲಿ ಪಾತ್ರೆ ಖಾಲಿ ತಟ್ಟೆ ಚಳುವಳಿ ಅಭಿಯಾನ ಮಾಡಿ ಸರ್ಕಾರದ ಗಮನ ಸೆಳೆದಿದ್ದರು. ಇವುಗಳನ್ನು ಗಮನಿಸಿದ ಮುಖ್ಯಮಂತ್ರಿ ಅವರು ಚಾಲಕರಿಗೆ 5 ಸಾವಿರ ರೂ. ಪರಿಹಾರ ನೀಡುವುದಾಗಿಯೂ ಘೋಷಿಸಿದ್ದರು.
ಸೇವಾಸಿಂಧು ಆಪ್ ಮೂಲಕ 5 ಸಾವಿರ ರೂ. ಹಣವನ್ನು ಪರಿಹಾರವಾಗಿ ನೀಡುವುದಾಗಿ ಹೇಳಿತ್ತಾದರೂ ಇನ್ನೂ ಸೇವಾಸಿಂಧು ಆಪ್ ಮತ್ತು ವೆಬ್‍ಸೈಟ್‍ನಲ್ಲಿ ಹಣ ಪಡೆಯುವ ಯಾವ ಲಿಂಕ್‍ಗಳನ್ನೂ ನೀಡಿಲ್ಲ. ಆದ್ದರಿಂದ ಸಾವಿರಾರು ಚಾಲಕರು ಒಕ್ಕೂಟಗಳಿಗೆ ಕರೆ ಮಾಡಿ ತಮ್ಮ ಸಂಕಷ್ಟಗಳನ್ನು ಹೇಳುತ್ತಿದ್ದಾರೆ. ಹಾಗಾಗಿ ಸರ್ಕಾರ ಸಾರಿಗೆ ಅಧಿಕಾರಿಗಳಿಗೆ ಕೂಡಲೇ ಹಣ ನೀಡುವ ಕಾರ್ಯದ ಬಗ್ಗೆ ಕ್ರಮವಹಿಸಬೇಕು.
ಈಗಾಗಲೇ ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಹೊಳವನಹರ್ಳಳಿಯ ಕ್ಯಾಮೇನಹಳ್ಳಿಯಲ್ಲಿ ಅರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದ ಚಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮುಂದಾಗುವ ಅನಾಹುತವನ್ನು ತಪ್ಪಿಸುವ ಸಲುವಾಗಿ ಈ ಕೂಡಲೇ ಚಾಲಕರಿಗೆ ಹಣ ನೀಡಬೇಕು ಹಾಗೂ ಮೃತ ಚಾಲಕನ ಕುಟುಂಬಕ್ಕೆ 10 ಲಕ್ಷ ರೂ. ಹಣವನ್ನು ಪರಿಹಾರವಾಗಿ ನೀಡಬೇಕು ಎಂದು ರಾಷ್ಟೀಯ ವಾಹನ ಚಾಲಕರ ಒಕ್ಕೂಟದ ಅಧ್ಯಕ್ಷ ಗಂಡಸಿ ಸದಾನಂದಸ್ವಾಮಿ ತಿಳಿಸಿದರು.

City Today News

(citytoday.media)

9341997936

Leave a Reply

Please log in using one of these methods to post your comment:

WordPress.com Logo

You are commenting using your WordPress.com account. Log Out /  Change )

Google photo

You are commenting using your Google account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s

This site uses Akismet to reduce spam. Learn how your comment data is processed.