ಶಾಸಕ ಸುರೇಶ್ ಗೌಡರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಜೊತೆ ಎಸ್.ಎಸ್.ಎಲ್.ಸಿ ಪರೀಕ್ಷಾ ಪೂರ್ವ ಸಿದ್ಧತಾ ಸಭೆ.

ನಾಗಮಂಗಲ: ತಾಲೂಕಿನ ಪ್ರವಾಸಿ ಮಂದಿರದಲ್ಲಿ ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಲಾಕ್ ಡೌನ್ ನಿಂದ ಸ್ಥಗಿತಗೊಂಡಿದ್ದ ಎಸ್.ಎಸ್.ಎಲ್.ಸಿ ಪರೀಕ್ಷೆಯು ಜೂನ್ 25 ರಿಂದ ಜುಲೈ 3ರ ವರೆಗೆ ನಡೆಯಲಿದ್ದು. ಸುರಕ್ಷತಾ ಕ್ರಮಗಳ ಪೂರ್ವಸಿದ್ಧತೆ ಸಂಬಂಧ ತಹಶೀಲ್ದಾರ್ ಅವರ ಅಧ್ಯಕ್ಷತೆಯಲ್ಲಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಮ್ಮುಖದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಜೊತೆ ಪರೀಕ್ಷಾ ಪೂರ್ವಸಿದ್ಧತೆ ಸಂಬಂಧ ಸಭೆ ನಡೆಸಲಾಯಿತು.

ಪರೀಕ್ಷಾ ಪೂರ್ವಸಿದ್ಧತಾ ಸಂಬಂಧ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಜಗದೀಶ್ ರವರು ತಾಲೂಕಿನಲ್ಲಿ 10 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಿದ್ದು ಒಟ್ಟು 2326 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ತಿಳಿಸಿದರು.
ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದು ಪ್ರತಿ ಕೊಠಡಿಯಲ್ಲಿ 18 ರಿಂದ 20 ಮಕ್ಕಳು ಮಾತ್ರ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದ್ದು.
ಪರೀಕ್ಷಾ ಕೇಂದ್ರಗಳನ್ನು ಸಂಪೂರ್ಣವಾಗಿ ಸ್ಯಾನಿಟೈಸರ್ ದ್ರಾವಣದಿಂದ ಸ್ವಚ್ಛಗೊಳಿಸಿ. ಪರೀಕ್ಷೆ ಬರೆಯುವ ವಿದ್ಯಾರ್ಥಿಯನ್ನು ಥರ್ಮಲ್ ಸ್ಕ್ರೀನಿಂಗ್ ಒಳಪಡಿಸಿ. ಎಲ್ಲಾ ವಿದ್ಯಾರ್ಥಿಗಳಿಗೂ ಮಾಸ್ಕ್ ಗಳನ್ನು ನೀಡಲಾಗುವುದು ಹಾಗೂ ಕೈಗೆ ಸ್ಯಾನಿಟೈಸರ್ ಹಾಕಲಾಗುವುದು. ಹಾಗೂ ಪರೀಕ್ಷಾ ಕೇಂದ್ರದಲ್ಲಿ ಸೇರುವ ಎಲ್ಲಾ ವಿದ್ಯಾರ್ಥಿಗಳನ್ನು ಸಾಮಾಜಿಕ ಅಂತರವನ್ನು ಕಾಯ್ದಿರಿಸಿ. ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ತಾಲ್ಲೂಕು ಆಡಳಿತ ವತಿಯಿಂದ ಬಹಳ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದರು. ಹಾಗೂ ಪರೀಕ್ಷಾ ಕೇಂದ್ರಕ್ಕೆ ಬರುವ ವಿದ್ಯಾರ್ಥಿಗಳಿಗೆ ಸುರಕ್ಷತಾ ದೃಷ್ಟಿಯಿಂದ ಪ್ರತ್ಯೇಕವಾಗಿ ಕೆ.ಎಸ್.ಆರ್.ಟಿ.ಸಿ ಸಂಸ್ಥೆ ವತಿಯಿಂದ ಪ್ರತ್ಯೇಕವಾದ ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು. ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.

ಇದೇ ವೇಳೆ ಮಾತನಾಡಿದ ತಾಲೂಕು ಆರೋಗ್ಯಾಧಿಕಾರಿ ಧನಂಜಯ್, ನಮ್ಮ ತಾಲೂಕಿನಲ್ಲಿ ಹೊರರಾಜ್ಯದಿಂದ ಬಂದ್ ಅಂಥವರಿಗೆ ಮಾತ್ರ ಕೋವಿಡ್-19 ಕಂಡುಬಂದಿದ್ದು ಸಮುದಾಯದಲ್ಲಿ ಇದುವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ. ಹಾಗಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರು ಭಯಪಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು. ಆರೋಗ್ಯ ಇಲಾಖೆ ವತಿಯಿಂದ ಪ್ರತಿ ಪರೀಕ್ಷಾ ಕೇಂದ್ರದಲ್ಲಿ ವೈದ್ಯರನ್ನು ನೇಮಿಸಿದ್ದು. ಮಕ್ಕಳಿಗೆ ಏನಾದರೂ ಆರೋಗ್ಯದ ಸಮಸ್ಯೆ ಉಂಟಾದರೆ ತುರ್ತು ವ್ಯವಸ್ಥೆಗಾಗಿ ಪ್ರತಿ ಹೋಬಳಿಯಲ್ಲಿ ಒಂದು ಅಂಬುಲೆನ್ಸ್ ಸಹ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಸುರೇಶ್ ಗೌಡ ತಾಲ್ಲೂಕು ಆಡಳಿತ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಎಲ್ಲಾ ತರಹದ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡಿದ್ದು. ಯಾವುದೇ ವಿದ್ಯಾರ್ಥಿ ಯಾಗಲಿ ಪೋಷಕರಾಗಲು ಭಯಪಡುವ ಅವಶ್ಯಕತೆ ಇಲ್ಲ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ನಿರ್ಭೀತಿಯಿಂದ ಪರೀಕ್ಷೆಯನ್ನು ಬರೆಯಬೇಕು ಹಾಗೂ ತಾಲೂಕಿಗೆ ಒಳ್ಳೆಯ ಅಂಕವನ್ನು ತರಬೇಕೆಂದು ಶುಭ ಹಾರೈಸಿದರು.

ಸಭೆಯಲ್ಲಿ ತಾಹಶೀಲ್ದಾರ್ ಕುಂಞಿ ಅಹಮದ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಅನಂತರಾಜು, ತೋಟಗಾರಿಕಾ ಇಲಾಖೆ ಮುಖ್ಯಅಧಿಕಾರಿ ಶಾಂತಮ್ಮ, ಪುರಸಭೆ ಮುಖ್ಯಾಧಿಕಾರಿ ಕೃಷ್ಣಪ್ರಸಾದ್, ಬೆಳ್ಳೂರು ಪಟ್ಟಣ ಮುಖ್ಯ ಅಧಿಕಾರಿ ಆರ್.ವಿ ಮಂಜುನಾಥ್, ಡಿವೈಎಸ್ಪಿ ವಿಶ್ವನಾಥ್, ಪಿಎಸ್ಐ ರವಿಕಿರಣ್, ಕ್ಷೇತ್ರ ಸಮನ್ವಯಾಧಿಕಾರಿ ಕುಮಾರ್, ಕೆ.ಎಸ್.ಆರ್.ಟಿ.ಸಿ ಡಿಪೋ ಮ್ಯಾನೇಜರ್ ಮಹೇಶ್, ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು

ವರದಿ: ದೇ.ರಾ .ಜಗದೀಶ ನಾಗಮಂಗಲ

City Today News

(citytoday.media)

9341997936

Leave a Reply

Please log in using one of these methods to post your comment:

WordPress.com Logo

You are commenting using your WordPress.com account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s

This site uses Akismet to reduce spam. Learn how your comment data is processed.