ಅಂಗೈನಲ್ಲೇ ಉದ್ಯೋಗ ಮಾಹಿತಿ: ಕೌಶಲ್ಯ ಸಂಪರ್ಕ ವೇದಿಕೆಗೆ ಚಾಲನೆ ಕೊಟ್ಟ ಮುಖ್ಯಮಂತ್ರಿ ಯಡಿಯೂರಪ್ಪನಿರುದ್ಯೋಗ ನಿವಾರಣೆಗೆ ದಿಟ್ಟ ಹೆಜ್ಜೆ ಇಟ್ಟ ಸರಕಾರ

ಬೆಂಗಳೂರು: ಕೋವಿಡ್ 19 ನಂತರದ ಕಾಲದಲ್ಲಿ ರಾಜ್ಯದಲ್ಲಿ ಕುಂಠಿತಗೊಂಡಿರುವ ಆರ್ಥಿಕ, ಕೈಗಾರಿಕಾ ಚಟುವಟಿಕೆಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಉದ್ಯೋಗಾವಕಾಶ ಸೃಷ್ಟಿಸಲು ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದರು.

ಬೆಂಗಳೂರಿನಲ್ಲಿ ಸೋಮವಾರ ಕೌಶಲ್ಯಾಭಿವೃದ್ಧಿ ನಿಗಮವು ಖಾಸಗಿ ಉದ್ಯೋಗದಾತರು ಮತ್ತು ಉದ್ಯೋಗಾಂಕ್ಷಿಗಳನ್ನು ಒಂದೇ ವೇದಿಕೆಗೆ ತಂದು ನಿರುದ್ಯೋಗ ನಿವಾರಿಸುವ ಸಲುವಾಗಿ ರೂಪಿಸಲಾಗಿರುವ ’ಕೌಶಲ್ಯ ಸಂಪರ್ಕ ವೇದಿಕೆ’ ಪೋರ್ಟಲ್ ಉದ್ಘಾಟಿಸಿ ಮಾತನಾಡಿದ ಅವರು, ಇದು ಸರಕಾರದ ಮಹತ್ವಾಕಾಂಕ್ಷೆ ಯೋಜನೆ. ವಲಸೆ ಕಾರ್ಮೀಕರಿಗೆ ಇದು ವರದಾನವಗಲಿದೆ ಮತ್ತು ಅವರಿಗೂ ತರಬೇತಿ ನೀಡಲಾಗುವುದು ಎಂದರು.

ಎಲ್ಲೆಲ್ಲಿ ಉದ್ಯೋಗಾವಕಾಶಗಳು ಲಭ್ಯವಿವೆ, ಯಾರಿಗೆ ಕೆಲಸದ ಅಗತ್ಯವಿದೆ ಎಂಬ ಮಾಹಿತಿ ಈ ಪೋರ್ಟಲ್ ನಲ್ಲಿ ಲಭ್ಯವಿರುತ್ತದೆ. ಲಭ್ಯವಿರುವ ಉದ್ಯೋಗಗಳಿಗೆ ಅಗತ್ಯವಾದ ತರಬೇತಿಯನ್ನು ನೀಡಿ ಆ ಅಭ್ಯರ್ಥಿಗಳನ್ನು ಕೌಶಲಗೊಳಿಸಿ ಸಂಬಂಧಿತ ಕಂಪನಿಗೆ ಕಳಿಸಲಾಗುವುದು ಎಂದು ಸಿಎಂ ನುಡಿದರು.

ಪೋರ್ಟಲ್ ನಲ್ಲಿ ನೋಂದಾಯಿಸಿಕೊಳ್ಳುವ ಅಭ್ಯರ್ಥಿಗಳಿಗೆ ಖಚಿತವಾಗಿ ಕೆಲಸ ದೊರೆಯುತ್ತದೆ. ಅದೇ ರೀತಿ ಕಂಪನಿಗಳಿಗೂ ಈ ಸಂಪರ್ಕ ವೇದಿಕೆ ಮೂಲಕ ಉತ್ತಮ ಗುಣಮಟ್ಟದ ಕೌಶಲಪೂರ್ಣ ಮಾನವ ಸಂಪನ್ಮೂಲ ದೊರೆಯುತ್ತದೆ ಎಂದು ಅಷ್ಟೇ ಖಚಿತವಾಗಿ ಹೇಳಬಲ್ಲೆಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಮಾಹಿತಿ, ಸಂಪರ್ಕದ ಸೇತುವೆ:
ಕೌಶಲ್ಯ ಸಂಪರ್ಕ ವೇದಿಕೆ ಪೋರ್ಟಲ್ ಬಗ್ಗೆ ಮಾಹಿತಿ ನೀಡಿದ ಉಪ ಮುಖ್ಯಮಂತ್ರಿ ಹಾಗೂ ಕೌಶಲಾಭಿವೃದ್ಧಿ ಖಾತೆ ಸಚಿವರೂ ಆದ ಡಾ. ಸಿ.ಎನ್. ಅಶ್ವತ್ಥನಾರಾಯಣ, ರಾಜ್ಯದ ಯುವಜನರಿಗೆ ವರದಾನವಾಗಬಲ್ಲ ಈ ಪೋರ್ಟಲ್ ನಿಂದ ಗಣನೀಯವಾಗಿ ನಿರುದ್ಯೋಗ ಸಮಸ್ಯೆ ತಪ್ಪಲಿದೆ ಎಂದರು.

ಇದುವರೆಗೂ ರಾಜ್ಯದದಲ್ಲಿ ಊದ್ಯೋಗಾಕಾಂಕ್ಷಿಗಳು ಮತ್ತು ಉದ್ಯೋಗದಾತರ ನಡುವೆ ಮಾಹಿತಿ, ಸಂಪರ್ಕದ ಕೊರತೆ ಇತ್ತು. ಈಗ ಆ ಪರಿಸ್ಥಿತಿ ಬದಲಾಗಿ ಕುಗ್ರಾಮದಲ್ಲಿರುವ ಪ್ರತಿಭಾವಂತರಿಗೂ ಎಲ್ಲೆಲ್ಲಿ ಉದ್ಯೋಗ ಸಿಗಲಿದೆ ಎಂಬ ಮಾಹಿತಿ ಸುಲಭ, ಸರಳವಾಗಿ ಸಿಗಲಿದೆ. ಪ್ರತಿಭೆಗೆ ತಕ್ಕ ಕೆಲಸ ಹಾಗೂ ಉದ್ಯೋಗದಾತರಿಗೆ ತಮ್ಮ ಅಗತ್ಯಕ್ಕೆ ತಕ್ಕ ಮಾನವ ಸಂಪನ್ಮೂಲ ಲಭ್ಯವಾಗಲಿದೆ ಎಂದು ಡಿಸಿಎಂ ಹೇಳಿದರು.

ಈ ಹಿಂದೆ ಎಲ್ಲಿ ಉದ್ಯೋಗ ಲಭ್ಯವಿದೆ ಎಂಬ ಮಾಹಿತಿ ಸಿಗುತ್ತಿರಲಿಲ್ಲ. ಹಾಗೇಯೇ, ಉದ್ಯೋಗಧಾತರಿಗೂ ಎಲ್ಲಿ ಕೌಶಲಪೂರ್ಣ ಸಿಗುತ್ತಾರೆಂಬುದು ಗೊತ್ತಾಗುತ್ತಿರಲಿಲ್ಲ. ಜಾಬ್ ಮಾರುಕಟ್ಟೆಯ ಬೇಡಿಕೆಯನ್ನು ಗಮನಿಸದೇ ತರಬೇತಿ ನೀಡುವ ಅವೈಜ್ಞಾನಿಕ ಪದ್ಧತಿ ಇತ್ತು. ಈಗ ಅಂಥ ವ್ಯವಸ್ಥೆಗೆ ಸಂಪೂರ್ಣವಾಗಿ ತಿಲಾಂಜಲಿ ನೀಡಿ ನಿರುದ್ಯೋಗಿಗಳಿಗೆ ಖಚಿತ ಭರವಸೆ ಮೂಡಿಸಲಾಗುತ್ತಿದೆ ಎಂದು ಅವರು ತಿಳಿದರು.

ಸರಕಾರವು ಕಂಪನಿಗಳ ಜತೆ ಒಪ್ಪಂದ ಮಾಡಿಕೊಳ್ಳಲಿದೆ. ಅವರ ಬೇಡಿಕೆಗೆ ತಕ್ಕಂತೆ ಅಭ್ಯರ್ಥಿಗಳಿಗೆ ತರಬೇತಿ ನೀಡಿ ಕಳಿಸಲಾಗುವುದು. ಇದು ಅತ್ಯಂತ ಪರಿಣಾಮಕಾರಿ. ರಾಜ್ಯದ ಪ್ರಗತಿಗೆ ಇದು ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ಡಿಸಿಎಂ ವಿಶ್ವಾಸ ವ್ಯಕ್ತಪಡಿಸಿದರು.

ಪೋರ್ಟಲ್ ಹೇಗೆ ಕೆಲಸ ಮಾಡುತ್ತದೆ?:
ಇದು ಉದ್ಯೋಗದಾತರು ಮತ್ತು ಉದ್ಯೋಗಾಂಕ್ಷಿಗಳ ಸಂಪರ್ಕ ಕೊಂಡಿ. ಇದರ ಮೂಲಕ ಕಂಪನಿಗಳು ತಮಗೆ ಅಗತ್ಯವಿರುವ ಮಾನವ ಸಂಪನ್ಮೂಲದ ಬಗ್ಗೆ ಬೇಡಿಕೆ ಇಡಬಹುದು. ಅದರನ್ವಯ ಉದ್ಯೋಗಾಂಕ್ಷಿಗಳು ತಮ್ಮ ವಿದ್ಯಾರ್ಹತೆ, ಕೌಶಲಕ್ಕೆ ಅನುಗುಣವಾಗಿ ಅರ್ಜಿ ಸಲ್ಲಿಸಬಹುದು. ಉದ್ಯೋಗದ ಬೇಡಿಕೆಗೆ ಅನುಗುಣವಾಗಿ ತಂತ್ರಾಂಶವನ್ನು ಬಳಸಿ ಉದ್ಯೋಗಿಗಳನ್ನು ಪೋರ್ಟಲ್ ಹೊಂದಾಣಿಕೆ ಮಾಡಲಿದೆ.

ಪೋರ್ಟಲ್ ನಲ್ಲಿ ನೋಂದಾಯಿಸಿಕೊಳ್ಳುವ ಅಭ್ಯರ್ಥಿಗಳಿಗೆ ಕೌಶಲ್ಯಾಭಿವೃದ್ದಿನ ನಿಗಮ ಸೂಕ್ತ ತರಬೇತಿ ನೀಡುತ್ತದೆ. ಇದು ಉದ್ಯೋಗಿಗಳಿಗೆ ಅನುಕೂಲವಾಗಿರುತ್ತದೆ. ಜಾಬ್ ಮಾರುಕಟ್ಟೆಗೆ ಬೇಡಿಕೆ ಅನುಗುಣವಾಗಿ ಯುವಕರು ಕೆಲಸ ಹುಡುಕುವುದು ಸುಲಭ. ಅಂಗೈಯಲ್ಲಿ ಎಲ್ಲ ಮಾಹಿತಯೂ ಅವರಿಗೆ ಸಿಗಲಿದೆ.

ಅದೇ ರೀತಿ ಈ ಪೋರ್ಟಲ್ ಮೂಲಕ ಕಂಪನಿಗಳು ಕೂಡ ಆಕಾಂಕ್ಷಿಗಳ ಮಾಹಿತಿಯನ್ನು ನೋಡಬಹುದು. ತಮಗೆ ಸೂಕ್ತವೆನಿದರೆ ನೇರ ಸಂದರ್ಶನಕ್ಕೆ ಕರೆಯಬಹುದು. ಇಲ್ಲವೇ ತಮಗೆ ಅಗತ್ಯವಾದ ಮಾನವ ಸಂಪನ್ಮೂಲದ ಬಗ್ಗೆ ಕೌಶಲ್ಯಾಭಿವೃದ್ಧಿ ನಿಗಮಕ್ಕೆ ಕೋರಿಕೆ ಸಲ್ಲಿಸಬಹುದು. ಅದೇ ರೀತಿ ಅಭ್ಯರ್ಥಿಗಳು ಕೂಡ ತಮಗೆ ಸೂಕ್ತವಾದ ಉದ್ಯೋಗಗಳನ್ನು ಹುಡುಕಿಕೊಳ್ಳಬಹುದು. ಜತೆಗೆ ತಮ್ಮ ಸಾಮರ್ಥ್ಯದ ಮೌಲ್ಯಮಾಪನವನ್ನೂ ಮಾಡಿಕೊಳ್ಳಬಹುದು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್. ವಿಶ್ವನಾಥ್, ಇಲಾಖೆ ಕಾರ್ಯದರ್ಶಿ ಸೆಲ್ವ ಕುಮಾರ್, ಕೌಶಲ್ಯ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಶ್ವಿನ್ ಗೌಡ, ಎಫ್ ಕೆಸಿಸಿಐ ಮತ್ತು ಕಾಸಿಯಾ ಪ್ರತಿನಿಧಿಗಳು ಹಾಜರಿದ್ದರು.

ಪೋರ್ಟಲ್ ವಿಳಾಸ:
https://skillconnect.kaushalkar.com

City Today News

(citytoday.media)

9341997936

Leave a Reply

Please log in using one of these methods to post your comment:

WordPress.com Logo

You are commenting using your WordPress.com account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s

This site uses Akismet to reduce spam. Learn how your comment data is processed.