
ಬೆಂಗಳೂರು ಮಹಾನಗರದಲ್ಲಿ ಕೋವಿಡ್-19 ತೀವ್ರಗತಿಯಲ್ಲಿ ಏರಿಕೆ ಕಂಡಿರುವ ಹಿನ್ನೆಲೆಯಲ್ಲಿ ಅದನ್ನು ತಡೆಗಟ್ಟಲು ತೆಗೆದುಕೊಂಡ ಕ್ರಮಗಳ ಕುರಿತು ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಬಿಬಿಎಂಪಿ ವಲಯವಾರು ಸಭೆ ಇಂದು ಸಂಜೆ ಗೃಹ ಕಚೇರಿ ಕೃಷ್ಣಾ ದಲ್ಲಿ ನಡೆಸಿದರು.
ಮಹದೇವಪುರ ವಲಯದ ಉಸ್ತುವಾರಿ ನೋಡಿಕೊಳ್ಳುತ್ತಿರುವ ನಗರಾಭಿವೃದ್ಧಿ ಸಚಿವರಾದ ಶ್ರೀ ಬಿ.ಎ.ಬಸವರಾಜ ಅವರು ತಮ್ಮ ವಲಯದಲ್ಲಿ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಮುಖ್ಯ ಕಾರ್ಯದರ್ಶಿ ತ.ಮ ವಿಜಯಭಾಸ್ಕರ್, ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್, ಶಾಸಕರಾದ ಎಂ.ಟಿ.ಬಿ.ನಾಗರಾಜ್, ಬಿಬಿಎಂಪಿ ಆಯುಕ್ತರಾದ ಎನ್.ಮಂಜುನಾಥ್ ಪ್ರಸಾದ್, ನೋಡಲ್ ಅಧಿಕಾರಿ ಎನ್.ಮಂಜಳ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
City Today News
(citytoday.media)
9341997936