
ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕಿನಿಂದ ತಂದೆ ತಾಯಿಗಳನ್ನು ಕಳೆದುಕೊಂಡ ಮಕ್ಕಳಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಆರ್ಥಿಕ ನೆರವಿನ ಸಹಾಯ ಹಸ್ತ ಚಾಚಿರುವುದು ಸ್ವಾಗತಾರ್ಹವಾಗಿದ್ದು, ದೇಶದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರಿಗೆ ಹಾಗೂ ರಾಜ್ಯದ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಶಶಿಕಲಾ ಜೊಲ್ಲೆ ಅವರು ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಕೊರೊನಾ ಸೋಂಕಿನಿಂದ ಬಹಳಷ್ಟು ಮಕ್ಕಳು ತಂದೆ ತಾಯಿಗಳನ್ನು ಕಳೆದುಕೊಂಡಿದ್ದಾರೆ. ಕೆಲವು ಮಕ್ಕಳಿಗೆ ಪೋಷಕರೂ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಅಂತಹ ಮಕ್ಕಳನ್ನು ನಮ್ಮ ಇಲಾಖೆ ಗುರುತಿಸಿ ಅವರಿಗೆ ನೆರವು ನೀಡಲು ಈಗಾಗಲೇ ತೀರ್ಮಾನ ಮಾಡಲಾಗಿದೆ.
ಕೊರೊನಾ ಸಂಕಷ್ಟದಿಂದ ತಂದೆ ತಾಯಿಗಳನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳ ಭವಿಷ್ಯದ ದೃಷ್ಠಿಯಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದಲ್ಲಿ ಮುಖ್ಯಮಂತ್ರಿ ಬಾಲ ಸೇವಾ ಯೋಜನೆ ಮೂಲಕ ಪ್ರತಿ ತಿಂಗಳು 3500 ರೂ. ಸಹಾಯ ಧನ ನೀಡುವ ಮೂಲಕ ಅನಾಥ ಮಕ್ಕಳ ಬಾಳಿಗೆ ಆಶಾಕಿರಣವಾಗಿ ಹೊಮ್ಮಿದ್ದಾರೆ.
ತಂದೆ ತಾಯಿಗಳನ್ನು ಕಳೆದುಕೊಂಡ 10 ವರ್ಷದ ಒಳಗಿನ ಮಕ್ಕಳಿದ್ದರೆ ಅವರನ್ನು ಆರೈಕೆ ಮಾಡಲು ಯಾವುದೇ ಕುಟುಂಬದ ಸದಸ್ಯರು ಲಭ್ಯವಿಲ್ಲದಿದ್ದರೆ, ಮಕ್ಕಳನ್ನು ನೊಂದಾಯಿತ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ದಾಖಲಿಸಿ ಆರೈಕೆ ನೀಡಲಾಗುವುದು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಮಾದರಿ ವಸತಿ ಶಾಲೆಗಳಾದ ಕಸ್ತೂರಬಾ, ಕಿತ್ತೂರು ರಾಣಿ ಚೆನ್ನಮ್ಮ, ಮೊರಾರ್ಜಿ ದೇಸಾಯಿ ಶಾಲೆಗಳಲ್ಲಿ ಶಿಕ್ಷಣ ನೀಡುವುದು. 10 ನೇ ತರಗತಿ ಪೂರೈಸಿದ ಮಕ್ಕಳಿಗೆ ಉನ್ನತ ಶಿಕ್ಷಣ ಅಥವಾ ಕೌಶಲ್ಯ ಅಭಿವೃದ್ಧಿಗೆ ಲ್ಯಾಾಪ್ಟಾಪ್ ಅಥವಾ ಟ್ಯಾಾಬ್ ನೀಡುವುದು. 21 ವರ್ಷ ಪೂರೈಸಿರುವ ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ, ಮದುವೆ, ಸ್ವಯಂ ಉದ್ಯೋಗಕ್ಕೆ1 ಲಕ್ಷ ರೂ. ಸಹಾಯಧನ ಹಾಗೂ ಕೊವಿಡ್ನಿಂದ ಅನಾಥವಾಗುವ ಮಕ್ಕಳಿಗೆ ಒಬ್ಬ ಮಾರ್ಗದರ್ಶಿ ಅಥವಾ ಹಿತೈಸಿಯನ್ನು ಒದಗಿಸಿ, ಅವರ ಮೂಲಕ ಸಹಾಯ ಹಾಗೂ ಮಾರ್ಗದರ್ಶನ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ.
ಸಂಕಷ್ಟದ ಸಂದರ್ಭದಲ್ಲಿ ಅನಾಥ ಮಕ್ಕಳ ನೆರವಿಗೆ ಧಾವಿಸಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸುತ್ತೇನೆ.
ಅಲ್ಲದೇ, ಕೊರೊನಾ ಸೋಂಕಿನಿಂದ ತಂದೆ ತಾಯಿಗಳನ್ನು ಕಳೆದುಕೊಂಡ ಮಕ್ಕಳನ್ನು ಇಲಾಖೆ ಗುರುತಿಸುವ ಕೆಲಸ ಮಾಡುತ್ತಿದ್ದು, ಅಂತಹ ಮಕ್ಕಳಿಗೆ ಮುಖ್ಯಮಂತ್ರಿಗಳು ಘೋಷಣೆ ಮಾಡಿರುವ ಯೋಜನೆಯನ್ನು ಪ್ರಾಾಮಾಣಿಕವಾಗಿ ತಲುಪಿಸುವ ಕೆಲಸವನ್ನು ನಮ್ಮ ಇಲಾಖೆ ಮೂಲಕ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಾಣ ಸಚಿವರಾದ ಶಶಿಕಲಾ ಜೊಲ್ಲೆಯವರು ತಿಳಿಸಿದ್ದಾರೆ.
City Today News
9341997936