
ಕರುನಾಡ ಜನಸ್ಪಂದನ ವೇದಿಕೆ ವತಿಯಿಂದ ಹೃದಯಸ್ಪರ್ಶಿ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಸಹಯೋಗದೊಂದಿಗೆ ಶಿಕ್ಷಕರ ಹಾಗೂ ಅಭಿಯಂತರರ ದಿನಾಚರಣೆ ಅಂಗವಾಗಿ ಶಿಕ್ಷಕರಿಗೆ, ಅಭಿಯಂತರರಿಗೆ ಹಾಗೂ ಸಮಾಜ ಸೇವೆ ಮಾಡುತ್ತಿರುವ ಹಲವು ಗಣ್ಯರಿಗೆ ಅಭಿನಂದನಾ ಕಾರ್ಯಕ್ರಮವನ್ನು ನಗರದ ಜ್ಞಾನ ಸೌಧ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮವನ್ನು ಬಿಬಿಎಂಪಿ ಮಾಜಿ ಸದಸ್ಯರಾದ ವಾಗೀಶ್, ಸಂಜೆ ಸಮಾಚಾರ್ ಪತ್ರಿಕೆಯ ಸಂಪಾದಕರಾದ ಬಿ.ಎ ಮಹೇಂದ್ರ ಹಾಗೂ ಆರ್ ಆರ್ ಪ್ರಸಾದ್ ರವರು ಉದ್ಘಾಟಿಸಿ ನಂತರ ಸನ್ಮಾನಿತರಿಗೆ ಸನ್ಮಾನಿಸಿ ಅಭಿನಂದಿಸಿದರು.
ಈ ವೇಳೆ ಮಾಜಿ ಬಿಬಿಎಂಪಿ ಸದಸ್ಯರಾದ ವಾಗೀಶ್ ಮಾತನಾಡಿ ಈ ಸಂಸ್ಥೆಗಳು ಹಲವು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಬಂದಿದ್ದು ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚು ಸಮಾಜಮುಖಿ ಕಾರ್ಯಗಳನ್ನು ನಿರ್ವಹಿಸಲು ಈ ಸಂಸ್ಥೆಗಳ ಜೊತೆ ಸದಾ ನಾವು ಕೈಜೋಡಿಸುತ್ತೇವೆ ಎಂದು ಹೇಳಿದರು.
ಬಳಿಕ ಸಂಜೆ ಸಮಾಚಾರ್ ಪತ್ರಿಕೆಯ ಸಂಪಾದಕರಾದ ಬಿ.ಎ. ಮಹೇಂದ್ರ ಮಾತನಾಡಿ ಕರುನಾಡ ಜನಸ್ಪಂದನ ವೇದಿಕೆ ಈ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಂಡು ಶಿಕ್ಷಕರು ಹಾಗೂ ಸಮಾಜಮುಖಿ ಕಾರ್ಯನಿರ್ವಹಿಸುತ್ತಿರುವ ಗಣ್ಯರನ್ನು ಗುರುತಿಸಿ ಸನ್ಮಾನಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ.
ಮುಂಬರುವ ದಿನಗಳಲ್ಲಿ ಈ ಸಂಸ್ಥೆ ಉನ್ನತ ಮಟ್ಟಕ್ಕೆ ಏರಿ ಇನ್ನೂ ಹೆಚ್ಚು ಸಮಾಜಮುಖಿ ಕಾರ್ಯಗಳನ್ನು ನಿರ್ವಹಿಸಲಿ ಎಂದು ಹೇಳಿದರು.
ನಂತರ ಸಮಾಜ ಸೇವಕರಾದ ಆರ್.ಆರ್. ಪ್ರಸಾದ್ ಮಾತನಾಡಿ ಈ ಸಂಸ್ಥೆಗಳ ಕಾರ್ಯವೈಖರಿ ನಿಜಕ್ಕೂ ವಿಭಿನ್ನವಾಗಿದ್ದು ಪರಿಸರ ಸಂರಕ್ಷಣೆ, ಶಿಕ್ಷಣ ಹಾಗೂ ಸಮಾಜಮುಖಿ ಕಾರ್ಯಗಳ ಬಗ್ಗೆ ಒತ್ತು ನೀಡುತ್ತಿರುವುದು ನಿಜಕ್ಕೂ ಸಂತಸದ ವಿಷಯ ಎಂದು ಹೇಳಿದರು.
ಕರುನಾಡ ಜನಸ್ಪಂದನೆ ವೇದಿಕೆಯ ರಾಜ್ಯಾಧ್ಯಕ್ಷರಾದ ನಟರಾಜ್ ಬಿ.ಪಿ ಮಾತನಾಡಿ ಯಾರೇ ಒಬ್ಬ ವ್ಯಕ್ತಿಯ ಹಿಂದೆ ಗುರುವಿನ ಪರಿಶ್ರಮ ಇದ್ದೇ ಇರುತ್ತದೆ ತಾವೇನಾದರೂ ಇಂದು ಸಾಧಿಸುತ್ತಿದ್ದೇವೆ ಎಂದರೆ ಅದಕ್ಕೆ ಮೂಲಕಾರಣ ಶಿಕ್ಷಕರು ಅಂತಹ ಶಿಕ್ಷಕರನ್ನು ಸನ್ಮಾನಿಸಿ ಅಭಿನಂದಿಸುತ್ತಿರುವುದು ನಿಜಕ್ಕೂ ನಮಗೆ ಸಂತೋಷ ತಂದಿದೆ ಎಂದು ಹೇಳಿದರು.
ಹಿರಿಯ ಪತ್ರಕರ್ತರಾದ ಮೋಹನ್ ಕುಲಕರ್ಣಿ ಮಾತನಾಡಿ ಸಂಸ್ಥೆಗಳು ಹಲವು ಒಳ್ಳೆಯ ನಿರ್ವಹಿಸುತ್ತಿದ್ದು ಮುಂಬರುವ ದಿನಗಳಲ್ಲಿ ಈ ಸಂಸ್ಥೆಗಳೊಡನೆ ಕೈಜೋಡಿಸಿ ಕಾರ್ಯ ನಿರ್ವಹಿಸಲು ನಾನು ಸದಾ ಸಿದ್ಧನಾಗಿದ್ದೇನೆ ಎಂದು ಹೇಳಿದರು
ಈ ಕಾರ್ಯಕ್ರಮದಲ್ಲಿ ಕರುನಾಡ ಜನಸ್ಪಂದನ ವೇದಿಕೆ ಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ದಿಲೀಪ್ .ಆರ್, ಹೃದಯಸ್ಪರ್ಶಿ ಎಜುಕೇಷನ್ ಟ್ರಸ್ಟ್ ಅಧ್ಯಕ್ಷರಾದ ಸುರೇಶ್, ಹಿರಿಯ ಪತ್ರಕರ್ತರಾದ ಮೋಹನ್ ಕುಲಕರ್ಣಿ, ಖ್ಯಾತ ವಕೀಲರಾದ ಹರಿಪ್ರಸಾದ್, ಸಮಾಜ ಸೇವಕರಾದ ಗೀತಾ, ಭರತನಾಟ್ಯ ಶಿಕ್ಷಕರಾದ ಕಾವ್ಯ ದಿಲೀಪ್ ಸೇರಿದಂತೆ ಹಲವರು ಭಾಗವಹಿಸಿದ್ದರು.
City Today News
9341997936