ಶೇ.40 ಕಮಿಷನ್ ಭ್ರಷ್ಟಾಚಾರವನ್ನು ಬಿಟ್ ಕಾಯಿನ್ ಲೂಟಿಯನ್ನು ನ್ಯಾಯಾಂಗ ತನಿಖೆಗೊಳಪಡಿಸಿ ಇಲ್ಲವೇ ತೊಲಗಿ ಎಡ ಮತ್ತು ಪ್ರಜಾಸತ್ತಾತ್ಮಕ ಏಳು ಪಕ್ಷಗಳ ಒತ್ತಾಯ.

ಪತ್ರಿಕಾ ಗೋಷ್ಠಿಯ ವಿವರ: ಪ್ರತಿಯೊಂದು ಗುತ್ತಿಗೆ ಕೆಲಸದಲ್ಲಿ ರಾಜ್ಯ ಸರಕಾರದ ಸಚಿವರು , ಶಾಸಕರು , ಅಧಿಕಾರಿಗಳು , ಒಟ್ಟು ಕಾಮಗಾರಿಯ ಶೇ .40 ರಷ್ಟು ಕಮಿಷನ್ ಪಡೆಯುತ್ತಿರುವುದಾಗಿ ಮತ್ತು ಇದರಿಂದ ಕಾಮಗಾರಿ ನಿರ್ವಹಣೆಗೆ , ಗುತ್ತಿಗೆದಾರರಿಗೆ ತೀವ್ರ ತೊಂದರೆಯಾಗಿದೆಯೆಂದು , ಇದನ್ನು ತಡೆಯಲು ಅಗತ್ಯ ಕ್ರಮವಹಿಸುವಂತೆ ಸ್ವತಃ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘವು ದೇಶದ ಪ್ರಧಾನ ಮಂತ್ರಿಗಳಿಗೆ ಕಳೆದ ಐದಾರು ತಿಂಗಳುಗಳ ಹಿಂದೆಯೇ ಬಹಿರಂಗ ಪತ್ರ ಬರೆದು ಒತ್ತಾಯಿಸಿದೆ .

ಬೆಳಗಾವಿಯ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಶ್ರೀ ಸಂತೋಷ ಪಾಟೀಲ್ ಗುತ್ತಿಗೆ ಕಾಮಗಾರಿಯ ಶೇ . 40 ಕಮಿಷನ್ ಒತ್ತಡದಿಂದ ಉಂಟಾದ ಸಾಲದ ಬಾಧೆಯೇ ತನ್ನ ಆತ್ಮಹತ್ಯೆಗೆ ಕಾರಣವೆಂದು ಡೆತ್ ನೋಟ್ ಬರೆದಿದ್ದಾರೆ ಮತ್ತು ಶ್ರೀ ಈಶ್ವರಪ್ಪರವರು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ .

ಇದರ ನಂತರ ಗೋಶಾಲೆಗಳಿಗೆ ಮೇವು ಒದಗಿಸುವ ಗುತ್ತಿಗೆದಾರರು ಮತ್ತು ಮಠಾಧೀಶರುಗಳು ಮಠಗಳಿಗೆ ನೀಡುವ ಅನುದಾನದಲ್ಲೂ ಈ ಕಮಿಷನ್ ವ್ಯವಹಾರವು ದಟ್ಟವಾಗಿರುವುದನ್ನು ಬಹಿರಂಗ ಪಡಿಸಿದ್ದಾರೆ .

ದಶ ಸಾವಿರ ಕೋಟಿ ರೂ . ಮೌಲ್ಯದ ಬಿಟ್ ಕಾಯಿನ್ ಹಣಕಾಸು ಸಂಸ್ಥೆಗಳ ಸರ್ವರ್ ಗಳ ಹ್ಯಾಕಿಂಗ್ ಹಗರಣದಲ್ಲಿ ಪಾಲ್ಗೊಂಡ ಆರೋಪಿಯು , ರಾಜ್ಯ ಸರಕಾರದ ಇಲಾಖೆಗಳು ಮತ್ತು ಸಂಸ್ಥೆಗಳ ಸರ್ವರ್ ಗಳಿಗೆ ಕನ್ನ ಹಾಕಿ ಅಪಾರ ಪ್ರಮಾಣದ ಹಣವನ್ನು ಲಪಟಾಯಿಸಿರುವುದು ಮತ್ತು ಈತನ ಜೊತೆ ರಾಜ್ಯದ ಕೆಲ ಪ್ರಭಾವಿ ರಾಜಕಾರಣಿಗಳು , ಹಿರಿಯ ಅಧಿಕಾರಿಗಳು ಕೈ ಜೋಡಿಸಿ ಪಾಲು ಪಡೆದಿರುವುದು ಈಗಾಗಲೇ ಬಯಲಾಗಿದೆ .

ಜನಾಧನ ಖಾತೆಯೊಂದರಿಂದಲೇ ಸುಮಾರು 6,000 ಕೋಟಿ ರೂ . ಲಪಟಾಯಿಸಲಾಗಿದೆಯೆನ್ನಲಾಗಿದೆ .

ಇದೇ ಭ್ರಷ್ಠತೆಯ ದುರಾಡಳಿತವನ್ನು ರಾಜ್ಯ ಸರಕಾರದ ವಿವಿಧ ಇಲಾಖೆಗಳು ಮತ್ತು ಅಭಿವೃದ್ಧಿ ನಿಗಮಗಳಲ್ಲಿಯೂ ವ್ಯಾಪಕವಾಗಿ ಕಾಣಬಹುದಾಗಿದೆ . ಇವುಗಳ ಫಲಾನುಭವಿಗಳು ನಿಜವಾದ ಜನತೆಯಾಗದೇ , ಬಹುತೇಕ ಶಾಸಕರುಗಳ ಹಿಂಬಾಲಕರು ಮತ್ತು ಹಣ ಅಥವಾ ದೊಡ್ಡ ಪ್ರಮಾಣದ ಲಂಚ ನೀಡುವವರಾಗಿದ್ದಾರೆ . ನಿಜ ಫಲಾನುಭವಿಗಳು ಶಾಸಕರುಗಳ ಕೃಪೆಯಿಲ್ಲದೇ , ಲಂಚ ನೀಡಲಾಗದೇ ಕಛೇರಿಗಳ ಸುತ್ತ ಗಿರಕಿ ಹೊಡೆದು ಬೇಸ್ತು ಬೀಳುತ್ತಿದ್ದಾರೆ .

ಇತ್ತೀಚೆಗೆ ಗಂಗಾ ಕಲ್ಯಾಣ ಯೋಜನೆಯಲ್ಲಿನ ಸಾವಿರಾರು ಕೋಟಿ ರೂ.ಗಳ ಭಾರಿ ಪ್ರಮಾಣದ ಅವ್ಯವಹಾರ ಮತ್ತು ಭ್ರಷ್ಟಾಚಾರವನ್ನು ಸರಕಾರ ರಚಿಸಿದ ಸದನ ಸಮಿತಿಯೇ ಬಹಿರಂಗ ಪಡಿಸಿದೆ

ಆಸ್ತಿ ಪಾಸ್ತಿಗಳ ವರ್ಗಾವಣೆ ಮತ್ತು ಪಾಲು ವಿಭಾಗದ ಸಂದರ್ಭಗಳಲ್ಲಿಯೂ , ಭೂಮಿಗಳ ಸರ್ವೇ ಮಾಡಿಸುವಾಗಲೂ , ರೈತರೂ ಸೇರಿದಂತೆ ಎಲ್ಲ ನಾಗರೀಕರು ತೀವ್ರ ಆಕ್ರೋಶಗೊಂಡಿದ್ದಾರೆ . ಕಂದಾಯ ಇಲಾಖೆಯು ಗಬ್ಬೆದ್ದು ನಾರುತ್ತಿದೆ . ಪೊಲೀಸ್ ಇಲಾಖೆಯು ಸೇರಿದಂತೆ ಇತರೆಲ್ಲಾ ಇಲಾಖೆಗಳು ಇದರಿಂದ ಹೊರತಲ್ಲ .

ವೃದ್ಧಾಪ್ಯ , ವಿಧವಾ , ಅಂಗವಿಕಲರ ಮತ್ತು ದೇವದಾಸಿ ಮುಂತಾದ ದುರ್ಬಲರಿಗೆ ನೀಡುವ ಪಿಂಚಣಿಗಳಲ್ಲೂ ಭ್ರಷ್ಟತೆಯು ಮುಖಕ್ಕೆ ರಾಚುತ್ತಿದೆ .

ಈ ಎಲ್ಲವೂ ದೇಶದ ಮುಂದೆ ರಾಜ್ಯವನ್ನು ತಲೆ ತಗ್ಗಿಸುವಂತೆ ಮಾಡಿವೆ . ಭ್ರಷ್ಟಾಚಾರದಲ್ಲಿ ರಾಜ್ಯವನ್ನು ಪ್ರಥಮ ಸ್ಥಾನಕ್ಕೆ ದೂಡಿವೆ . ಈ ಎಲ್ಲಾ ಅನುಚಿತ ಬೆಳವಣಿಗೆಗಳಿಗೆ ಕಾರಣವಾದ ರಾಜ್ಯ ಸರಕಾರದ ದುರ್ನಡೆಗಳನ್ನು ನಾವು ಬಲವಾಗಿ ಖಂಡಿಸುತ್ತೇವೆ .

ಆದಾಗಲೂ ಕರ್ನಾಟಕ ಸರಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ , ಸ್ವತಂತ್ರ ನ್ಯಾಯಾಂಗ ತನಿಖೆಗೊಳಪಡಿಸಿ ನಿಯಂತ್ರಿಸಲು ಕ್ರಮವಹಿಸಬೇಕೆಂದು ಒತ್ತಾಯವನ್ನು ರಾಜ್ಯದ ಜನತೆ , ರಾಜಕೀಯ ಶಕ್ತಿಗಳು ನಿರಂತರವಾಗಿ ಮಾಡುತ್ತಿದ್ದರೂ , ಆ ಕುರಿತು ಏನೊಂದು ಗಂಭೀರ ಕ್ರಮವಹಿಸದೇ ಮುಂದುವರೆಯುತ್ತಿರುವುದು ತೀವ್ರ ನಾಚಿಕೆ ಗೇಡಿನ ವಿಚಾರವಾಗಿದೆ .

ಆದ್ದರಿಂದ , ಈ ಕೂಡಲೇ ಸದರಿ ಈ ಎಲ್ಲ ಭ್ರಷ್ಟಾಚಾರದ ವಿಚಾರಗಳನ್ನು ಉನ್ನತ ನ್ಯಾಯಾಂಗದ ಸುಪರ್ಧಿಯಲ್ಲಿ ಸ್ವತಂತ್ರ ನ್ಯಾಯಾಂಗದ ತನಿಖೆಗೆ ಒಳಪಡಿಸಬೇಕು .

ಇಲ್ಲವೇ ಈ ಎಲ್ಲದಕ್ಕೂ ತಮ್ಮದೇ ಸರಕಾರ ಮತ್ತು ಮಂತ್ರಿಮಂಡಲವೇ ನೇರ ಹೊಣೆಗಾರನಾಗಿರುವುದರಿಂದ ತಕ್ಷಣವೇ ರಾಜಿನಾಮೆ ನೀಡಿ ಜನರಿಂದ ಮರಳಿ ಆದೇಶ ಪಡೆಯಲು ಚುನಾವಣೆಗೆ ಮುಂದಾಗಬೇಕೆಂದು ಮುಖ್ಯಮಂತ್ರಿ ‘ ಶ್ರೀ ಬಸವರಾಜ ಬೊಮ್ಮಾಯಿಯವರನ್ನು ಮತ್ತೊಮ್ಮೆ ನಾವು ಬಲವಾಗಿ ಒತ್ತಾಯಿಸುತ್ತೇವೆ ಎಂದು ಪತ್ರಿಕಾ ಗೋಷ್ಠಿಯಲ್ಲಿ ಅಂದರು.

ಪತ್ರಿಕಾ ಗೋಷ್ಠಿಯಲ್ಲಿ
ಯು . ಬಸವರಾಜ, ಕಾರ್ಯದರ್ಶಿ-CPIM,  ಸಾತಿ ಸುಂದರೇಶ್ ಕಾರ್ಯದರ್ಶಿ-CPI,  ಅಪ್ಪಣ್ಣ, ಕಾರ್ಯದರ್ಶಿ – CPI ( ML ),  ಎಂ.ಎನ್. ಶ್ರೀ ರಾಮ್ ಕಾರ್ಯದರ್ಶಿ SUCI ( C ),  ಜಿ.ಆರ್‌ ಶಿವಶಂಕರ್ ಕಾರ್ಯದರ್ಶಿ-AIFB,  ಚಾಮರಸ ಮಾಲೀ ಪಾಟೀಲ,ಅಧ್ಯಕ್ಷರು-ಸ್ವರಾಜ್ ಇಂಡಿಯಾ ಮತ್ತು ಮೋಹನ್ ರಾಜ್, ಅಧ್ಯಕ್ಷರು-RPI  ಉಪಸ್ತಿತರಿದ್ದರು

City Today News

9341997936

Leave a Reply

Please log in using one of these methods to post your comment:

WordPress.com Logo

You are commenting using your WordPress.com account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s

This site uses Akismet to reduce spam. Learn how your comment data is processed.