ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು -2022

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ದಿನಾಂಕ : 30-31ನೇ ಮೇ ಹಾಗೂ 1 ನೇ ಜೂನ್ -2022 ರವರೆಗೆ ಬೆಂಗಳೂರು ನಗರದ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ‘ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು -2022 ನಡೆಯಲಿವೆ .

ದಿನಾಂಕ : 30-05-2022ರಂದು ಸಂಜೆ 4-30 ಗಂಟೆಗೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಎಸ್ . ಬೊಮ್ಮಾಯಿರವರು ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ . ಈ ಕಾರ್ಯಕ್ರಮದಲ್ಲಿ ನಿಕಟಪೂರ್ವ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವ ಸಂಪುಟದ ಹಲವು ಸಚಿವರು ಭಾಗವಹಿಸಲಿದ್ದಾರೆ .

*ರಾಜ್ಯಾದ್ಯಂತ 10 ಸಾವಿರಕ್ಕೂ ಹೆಚ್ಚಿನ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ . * ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿ ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಂಡಿರುವ ಎಲ್ಲಾ ಕ್ರೀಡಾಪಟುಗಳಿಗೆ ಗುಣಮಟ್ಟದ ಟ್ರಾಕ್ಟ್ ಮತ್ತು ಕ್ಯಾಪ್ ನೀಡಲಾಗುವುದು . *ಉದ್ಘಾಟನಾ ಸಮಾರಂಭದಲ್ಲಿ ಮಾನ್ಯ ಮುಖ್ಯಮಂತ್ರಿಗಳು ಕೆ.ಜಿ.ಐ.ಡಿ. ಇಲಾಖೆಯ Online ಸೇವೆ ಯೋಜನೆ ಹಾಗೂ SMS ಮೂಲಕ ನೌಕರರ ಮಾಸಿಕ ವೇತನ ಭತ್ಯೆಗಳ ಮಾಹಿತಿ ಯೋಜನೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ . * ದಿನಾಂಕ 30-05-2022 ರಂದು ಸಂಜೆ 7.00 ಗಂಟೆಗೆ ಖ್ಯಾತ ಗಾಯಕರಾದ ಶ್ರೀ ವಿಜಯ್ ಪ್ರಕಾಶ್‌ರವರಿಂದ ‘ ಸಂಗೀತ ರಸ ಸಂಜೆ ‘ ಕಾರ್ಯಕ್ರಮ ನಡೆಯಲಿದೆ . *ದಿನಾಂಕ : 31-05-2022 ರಂದು ಸಂಜೆ 7.00 ಗಂಟೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ 15 ಜಾನಪದ ಕಲಾ ತಂಡಗಳಿಂದ ‘ ಜನಪದೋತ್ಸವ ಕಾರ್ಯಕ್ರಮ ನಡೆಯಲಿದೆ .* ರಾಜ್ಯ ಮಟ್ಟದ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪತ್ರ ಹಾಗೂ ಟ್ರೋಫಿ ನೀಡಲಾಗುವುದು . * ದಿನಾಂಕ : 30-05-2022 ರಿಂದ 01-06-2022ರವರೆಗೆ ಮೂರು ದಿನಗಳ ಕಾಲ ಎಲ್ಲಾ ಕ್ರೀಡಾಪಟುಗಳಿಗೆ ರುಚಿ – ಶುಚಿಯಾದ ಊಟೋಪಹಾರ ವ್ಯವಸ್ಥೆ ಮಾಡಲಾಗಿದೆ .

ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿ ಕೇಂದ್ರ ಸಂಘದ Online ನೋಂದಣಿ ಮಾಡಿಕೊಂಡಿರುವ ಎಲ್ಲಾ ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಸಂಘವು ಮನವಿ ಮಾಡುತ್ತದೆ ಎಂದು ಸಿ.ಎಸ್.ಷಡಾಕ್ಟರಿ, ರಾಜ್ಯಾಧ್ಯಕ್ಷರು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು

City Today News

9341997936

Leave a Reply

Please log in using one of these methods to post your comment:

WordPress.com Logo

You are commenting using your WordPress.com account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s

This site uses Akismet to reduce spam. Learn how your comment data is processed.