
ಮೂಲನಿವಾಸಿ ಅಂಬೇಡ್ಕರ್ ಸಂಘದ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಿನಾಂಕ:27-09 2022 ರಂದು ಫ್ರೀಡಂ ಪಾರ್ಕಿನಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಯ ಬಗ್ಗೆ ನಗರದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಬೇಡಿಕೆಗಳ ಬಗ್ಗೆ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಬಿ.ಎಂ.ಮುನಿಮಾರಪ್ಪ ಮಾತನಾಡಿ, ‘ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಇಂದು ಕಮಿಷನ್ ಸರ್ಕಾರವಾಗಿ ಭ್ರಷ್ಟಾಚಾರದ ಕೂಪದಲ್ಲಿಯೇ ಮುಳುಗಿದೆ. ರಾಜ್ಯದ ಶೋಷಿತ ಸಮುದಾಯಗಳ ಬಗ್ಗೆ ಹಾಗೂ ಅವರ ಹೋರಾಟಗಳ ಬಗ್ಗೆ ಕಿಂಚಿತ್ತೂ ಕಾಳಜೀ ಇಲ್ಲದಂತಾಗಿದೆ. ಬಹುಶ: ರಾಜ್ಯ ಸರ್ಕಾರಕ್ಕೆ ಹೋರಾಟಗಳನ್ನು ಗಂಭೀರವಾಗಿ ಪರಿಗಣಿಸಲೂ ಕೂಡ ಕಮಿಷನ್ ನೀಡಿಬೇಕೆನಿಸುತ್ತದೆ. ಸರ್ಕಾರ ಹೀಗೆ ದಲಿತರ ಹೋರಾಟ, ಪ್ರತಿಭಟನೆಗಳನ್ನು ಕಡೆಗಣಿಸಿದರೆ ಮುಂದಿನ ಚುನಾವಣೆಯಲ್ಲಿ ಬುದ್ಧಿ ಕಲಿಸಬೇಕಾಗುತ್ತದೆ. “ಆಪರೇಷನ್ ಕಮಲ” ಮಾಡಿದರೂ ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬರುವುದಕ್ಕೆ ಆಗುವುದಿಲ್ಲ ಎಂಬ ಎಚ್ಚರಿಕೆ ನೀಡಿದರು.
ಇದೇ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ಎಂ.ಮುನಿರಾಜು ಮಾತನಾಡಿ ಇದೇ ತಿಂಗಳ 27ರಂದು ನಾವು ಸುಮಾರು 18 ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಿ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ. ಸ್ಥಳಕ್ಕೆ ಮುಖ್ಯಮಂತ್ರಿಗಳು ಬಂದು ನಮ್ಮ ಮನವಿಯನ್ನು ಸ್ವೀಕರಿಸಿ ಸಭೆ ಕರೆಯದೇ ಹೋದರೆ ರಾಜ್ಯಾದ್ಯಂತ ಮುಖ್ಯಮಂತ್ರಿ ಹಾಗೂ ಮಂತ್ರಿಗಳಿಗೆ ಫೇರಾವ್ ಹಾಕುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
City Today News
9341997936