
ನಂಜನಗೂಡು – ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯ ಶಿಫಾರಸ್ಸು ಪ್ರಕಾರ ಪರಿಶಿಷ್ಟ ಜಾತಿ ಮೀಸಲಾತಿಯನ್ನು ಶೇ.15 ರಿಂದ ಶೇ.17 ಕ್ಕೆ ಮತ್ತು ಪರಿಶಿಷ್ಟಪಂಗಡದ ಮೀಸಲಾತಿಯನ್ನು ಶೇ.3 ರಿಂದ ಶೇ.7 ಕ್ಕೆ ಹೆಚ್ಚಿಸಲು ಐತಿಹಾಸಿಕ ನಿರ್ಣಯ ತೆಗದುಕೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿರ್ಧಾರ ಪ್ರಶಂಸನೀಯವಾಗಿದ್ದು, ಅವರಿಗೆ ಸಮಗ್ರ ಜನತೆಯ ಪರವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ನಂಜನಗೂಡು ಶಾಸಕ ಬಿ. ಹರ್ಷವರ್ಧನ್ ಅವರು ತಿಳಿಸಿದರು.
ನಂಜನಗೂಡು ತಾಲ್ಲೂಕು ಕಛೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಶ್ರೀ ಮಹಷಿ೯ ವಾಲ್ಮೀಕಿ ಜಯಂತಿ ಮಹೋತ್ಸವ ಕಾಯ೯ಕ್ರಮದಲ್ಲಿ ಭಾಗಿವಹಿಸಿ ಮಾತನಾಡಿದ ಅವರು, ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿಗಳು ನಡೆಸುತ್ತಿದ್ದ ಧರಣಿಯಲ್ಲಿ ತಾವು ಕೂಡ ಪಾಲ್ಗೊಂಡು ಅವರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದನ್ನು ಈ ಸಂದಭ೯ದಲ್ಲಿ ಸ್ಮರಿಸಿದರು, ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ, ಶ್ರೀರಾಮುಲು ಅವರು ಸಚಿವರಾಗಿದ್ದ ಸಂದಭ೯ದಲ್ಲಿ ಶ್ರೀ ಮಹಷಿ೯ ವಾಲ್ಮೀಕಿ ಜಯಂತಿಗೆ ಸಕಾ೯ರಿ ರಜೆ ಘೋಷಣೆ ನಿಧಾ೯ರ ಮಾಡಲಾಗಿತ್ತು ಎಂದು ತಿಳಿಸಿದರು.
ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಹೆಚ್ಚಿಸಲು ರಚಿಸಿರುವ ನ್ಯಾ. ನಾಗಮೋಹನ್ ದಾಸ್ ಸಮಿತಿ ನೀಡಿರುವ ವರದಿ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಅವರ ಗೃಹ ಕಚೇರಿ ಕೃಷ್ಣಾದಲ್ಲಿ ವಿಧಾನಮಂಡಲದ ಉಭಯ ಸದನಗಳ ವಿವಿಧ ಪಕ್ಷಗಳ ನಾಯಕರ ಸಭೆ ಕರೆದು ಐತಿಹಾಸಿಕ ನಿಧಾ೯ರ ಕೈಗೊಂಡಿದ್ದಾರೆ. ಮೀಸಲಾತಿ ಪ್ರಮಾಣ ಹೆಚ್ಚಿಸುವಂತೆ ಬಹು ದಿನಗಳಿಂದ ನಡೆಯುತ್ತಿದ್ದ ಹೋರಾಟಕ್ಕೆ ರಾಜ್ಯ ಸರ್ಕಾರ ಸ್ಪಂದಿಸಿದ್ದು, ಈ ಸಮುದಾಯದ ಜನರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.
ನಂಜನಗೂಡು ತಾಲ್ಲೂಕು ಸಮುದಾಯ ಭವನಗಳ ಉದ್ಘಾಟನೆಯನ್ನು ನಾಯಕರಾದ ವಿ. ಶ್ರೀನಿವಾಸ ಪ್ರಸಾದ್ ಹಾಗೂ ಶ್ರೀರಾಮುಲು ಅವರುಗಳ ಅಮೃತ ಹಸ್ತದಿಂದ ಉದ್ಘಾಟಿಸಲು ಅತೀ ಶ್ರೀಘ್ರದಲ್ಲೇ ದಿನಾಂಕ ನಿಗಧಿಗೊಳಿಸಲಾಗುವುದು ಎಂದು ಸಭೆಯಲ್ಲಿ ತಿಳಿಸಿದರು.
ತಾಲ್ಲೂಕು ದಂಡಾಧಿಕಾರಿ ಶಿವಮೂತಿ೯, ನಗರಸಭೆ ಅಧ್ಯಕ್ಷರಾದ ಮಹದೇವಸ್ವಾಮಿ, ಮುಖಂಡರಾದ ಕುಂಬ್ರಳ್ಳಿ ಸುಬ್ಬಣ್ಣ, ಚಿಕ್ಕರಂಗನಾಯಕ, ಬಂಗಾರಸ್ವಾಮಿ, ಹುಲ್ಲಹಳ್ಳಿ ಶಿವಣ್ಣ, ನಾಗೇಂದ್ರ ಸೇರಿದಂತೆ ವಿವಿಧ ಪಕ್ಷಗಳ ಪರಿಶಿಷ್ಟ ಸಮುದಾಯದ ನೂರಾರು ಮುಖಂಡರು ಉಪಸ್ಥಿತರಿದ್ದರು.
City Today News
9341997936