16ನೇ ವಿಶ್ವಕನ್ನಡ ಸಂಸ್ಕೃತಿ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್

ಕನ್ನಡ ಸಂಘ, ಮಸ್ಕತ್, ಹೃದಯವಾಹಿನಿ ಮತ್ತು ಮಂಜುನಾಥ್ ಎಜುಕೇಷನ್ ಟ್ರಸ್ಟ್ (ರಿ.) ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 18 ಮತ್ತು 19, 2022ರಂದು ಒಮಾನಿನ ರಾಜಧಾನಿ ಮಸ್ಕತ್‌ನ ಅಲ್-ಫಲಾಝ್ ಸಭಾಂಗಣದಲ್ಲಿ 2 ದಿನಗಳ ಕಾಲ ಅದ್ದೂರಿಯಾಗಿ ಹಮ್ಮಿಕೊಂಡಿರುತ್ತೇವೆ.

ಈ ಎರಡು ದಿನಗಳ ಸಮ್ಮೇಳನದಲ್ಲಿ ಗಣ್ಯರಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶ್ರೀ ಸುನಿಲ್ ಕುಮಾರ್, ಬೃಹತ್ ನೀರಾವರಿ ಖಾತೆ ಸಚಿವರಾದ. ಶ್ರೀ ಗೋವಿಂದ ಕಾರಜೋಳ, ಒಮಾನ್ ಸರಕಾರದ ಗೌರವಾನ್ವಿತ ಸಚಿವರುಗಳು, ಕರ್ನಾಟಕ ಸರಕಾರದ ಅನಿವಾಸಿ ಕನ್ನಡಿಗರ ಕೋಶದ ಮಾಜಿ ಉಪಾಧ್ಯಕ್ಷರಾದ ಡಾ. ಆರತಿ ಕೃಷ್ಣ, ಹಾಗೂ ಖ್ಯಾತ ಚಲನಚಿತ್ರ ನಟ ಉಪೇಂದ್ರ ಮತ್ತು ಗಲ್ಫ್ ರಾಷ್ಟ್ರಗಳ ವಿವಿಧ ಕನ್ನಡ ಸಂಘಗಳ ಅಧ್ಯಕ್ಷರುಗಳು ಪಾಲ್ಗೊಳ್ಳಲಿದ್ದಾರೆ

ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಜಾನಪದ ವಾದ್ಯಗೋಷ್ಠಿ, ಹಾಗು ಹಾಡು, ಜಾನಪದ ಡೊಳ್ಳು ಕುಣಿತ ರಸಮಂಜರಿ, ಭರತನಾಟ್ಯ, ಜಾನಪದ ನೃತ್ಯ ಹಾಸ್ಯ ಗೋಷ್ಠಿ, ಕವಿ ಗೋಷ್ಠಿ, ಹೊರನಾಡು ಕನ್ನಡಿಗರ ಗೋಷ್ಠಿ ಹಾಗು ಒಮಾನ್ ನ ಕನ್ನಡಿಗರ ವಿವಿಧ ಸಂಘ ಸಂಸ್ಥೆ ಗಳಿಂದ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿವೆ.

ನವಂಬರ್ 18ರಂದು, ಮಧ್ಯಾಹ್ನ 4:30ಕ್ಕೆ ಉದ್ಘಾಟದ ಸಮಾರಂಭ. ರಾತ್ರಿ 8.30 ಕ್ಕೆ ಮೊದಲ ದಿನದ ಕಾರ್ಯಕ್ರಮ ಮುಕ್ತಾಯ.

ನವಂಬರ್ 19 ರಂದು. ಬೆಳಿಗ್ಗೆ 10:30ಕ್ಕೆ ಎರಡನೆ ದಿನದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ. ಸಂಜೆ 4:30ಕ್ಕೆ ಸಮಾರೋಪ ಸಮಾರಂಭ.

ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿಗಳಾದ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್ ಅವರನ್ನು ಒಮಾನ್‌ನಲ್ಲಿ ಜರಗಲಿರುವ 16ನೇ ವಿಶ್ವಕನ್ನಡ ಸಂಸ್ಕೃತಿ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಪ್ರೊ. ಮಲ್ಲೇಪುರಂ ಅವರ ವ್ಯಕ್ತಿ ಪರಿಚಯ

ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ 1952 ಜೂನ್ ಐದರಂದು ಬೆಂಗಳೂರು ಗ್ರಾಮಾಂತರ ಹೆಬ್ಬಗೋಡಿಯಲ್ಲಿ ಜನನ, ಪ್ರಾಥಮಿಕ ಮತ್ತು ಪ್ರೌಢಶಾಲೆ ವಿದ್ಯಾಭ್ಯಾಸ ನೆಲಮಂಗಲದ ಸರ್ಕಾರಿ ಮತ್ತು ಹೈಯರ್ ಸೆಕೆಂಡರಿ ಶಾಲೆ, ಮೊದಲ ಸಂಸ್ಕೃತ-ಕನ್ನಡ ಗುರುಗಳು ಎಸ್.ವಿ. ರಾಮಸ್ವಾಮಿ ಅಯ್ಯಂಗಾರ್, ಸಿದ್ದಗಂಗಾ ಮಠದಲ್ಲಿ ಕನ್ನಡ ಪಂಡಿತ್‌ ಮತ್ತು ಸಂಸ್ಕೃತ ಅಲಂಕಾರ ವಿದ್ವತ್‌ ವ್ಯಾಸಂಗ, ವಿದ್ವಾನ್‌ ಬಿ. ವೆಂಕಟರಾಮ ಭಟ್ಟ, ಇವರಲ್ಲಿ ಕಾವ್ಯಾಲಂಕಾರಗಳ ಅಧ್ಯಯನ, ಬೆಂಗಳೂರಿನ ಶ್ರೀರಾಮಕೃಷ್ಣಾಶ್ರಮದಲ್ಲಿ ಸ್ವಾಮಿ ಆದಿದೇವಾನಂದರಿಂದ ಅದೈತ ವೇದಾಂತದ ಅನುಗ್ರಹ, ಮೈಸೂರು ವಿಶ್ವವಿದ್ಯಾನಿಲಯದಿಂದ ಕನ್ನಡ ಎಂ.ಎ., ಮೂರನೇ ಬ್ಯಾಂಕಿನೊಡನೆ ಕುವೆಂಪು ಚಿನ್ನದ ಪದಕ, ಸಂಸ್ಕೃತ ಎಂ.ಎ., ಉನ್ನತ ಶ್ರೇಣಿಯೊಂದಿಗೆ ತೇರ್ಗಡೆ. ಕನಕಪುರದಲ್ಲಿ ಕನ್ನಡ ಶಿಕ್ಷಕರಾಗಿ ವೃತ್ತಿ ಜೀವನ ಪ್ರಾರಂಭ, ಬೆಂಗಳೂರಿನ ಮಹಾನಗರ ಪಾಲಿಕೆಯ ಪ್ರೌಢಶಾಲೆಯಲ್ಲಿ ಕನ್ನಡ ಪಂಡಿತ. 1992ರಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಪ್ರವೇಶ, ಅಲ್ಲಿ ಪ್ರವಾಚಕ, ಅಧ್ಯಯನಾಂಗದ ನಿರ್ದೇಶಕ 1998ರಲ್ಲಿ ಕುಲಸಚಿವ. 2001ರಲ್ಲಿ ಕರ್ನಾಟಕ ಸರ್ಕಾರದ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ. 2004ರಲ್ಲಿ ಕನ್ನಡ ವಿಶ್ವವಿದ್ಯಾಲಯ ಹಂಪಿ, ಡೀನ್ ಮತ್ತು ಪ್ರಸಾರಾಂಗದ ನಿರ್ದೇಶಕ, 2008ರಲ್ಲಿ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶೇಷಾಧಿಕಾರಿಯಾಗಿ ನೇಮಕ, 2010 ಮೇ 26ರಂದು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾನಿಲಯದ ಪ್ರಥಮ ಕುಲಪತಿ, 2015ರಿಂದ ಕಲಬುರಗಿಯ ಪಾಲಿ ಇನ್‌ ಸ್ಟಿಟ್ಯೂಟ್ ಸಂಸ್ಥೆಯ ಗೌರವ ನಿರ್ದೇಶಕ, ತೊಂಬತ್ತಕ್ಕೂ ಹೆಚ್ಚು ಸಾಹಿತ್ಯ, ಸಂಸ್ಕೃತಿ ಮತ್ತು ಭಾಷೆಗೆ ಸಂಬಂಧಿಸಿದಂತೆ ಪುಸ್ತಕಗಳ ಪ್ರಕಟಣೆ, ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ 2008ರಲ್ಲಿ ‘ಗೌರವ ಪ್ರಶಸ್ತಿ’ ಹಾಗೂ 2009ರಲ್ಲಿ ‘ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ’ 2011ರಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ‘ಡಾ. ಬಿ.ಆರ್ ಅಂಬೇಡ್ಕರ್ ಪ್ರಶಸ್ತಿ. 2012ರಲ್ಲಿ ಸಿದ್ಧಗಂಗಾ ಮಠದಿಂದ ‘ಸಿದ್ಧಗಂಗಾಶ್ರೀ ಪ್ರಶಸ್ತಿ 2016 ಶಾಸ್ತ್ರಚೂಡಾಮಣಿಯಾಗಿ ರಾಷ್ಟ್ರೀಯ ಸಂಸ್ಕೃತ ಸಂಸ್ಥಾನ, ನವದೆಹಲಿಯಿಂದ ಆಯ್ಕೆ, 2017ರಲ್ಲಿ ಶಿವಗಂಗೆಯ ಮೇಲಗಣವಿಮಠದಿಂದ `ಶಿವಗಂಗಾಶ್ರೀ ಪ್ರಶಸ್ತಿ ಮತ್ತು ಬೆಂಗಳೂರಿನ ಬಸವ ವೇದಿಕೆ ಸಂಸ್ಥೆಯಿಂದ ‘ವಚನ ಸಾಹಿತ್ಯಶ್ರೀ ಪ್ರಶಸ್ತಿ. 2018ರಲ್ಲಿ ಸಂಸ್ಕೃತಿ ಪ್ರಕಾಶನ ಸೇಡಮ್ ‘ಸಂಸ್ಕೃತಿ ಸಮ್ಮಾನ್ ಪ್ರಶಸ್ತಿ, ಅಮ್ಮೆಂಬಳ ಶಂಕರನಾರಾಯಣ ನಾವಡ ಪ್ರತಿಷ್ಠಾನದಿಂದ ಅಮ್ಮೆಂಬಳ ಸಾಹಿತ್ಯ ಪ್ರಶಸ್ತಿ’, 2020ರಲ್ಲಿ ಹಾವೇರಿಯ ಬಸವಕೇಂದ್ರ, ಶ್ರೀ ಹೊಸಮಠದಿಂದ ‘ಡಾ. ಶಿಮುಶ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯ ಪುರಸ್ಕಾರ’, ಸಾಗರದ ಪ್ರಜ್ಞಾಭಾರತಿ ವಿದ್ಯಾಮಂದಿರದಿಂದ ‘ವಿದ್ವಾನ್ ಎನ್. ರಂಗನಾಥ ಶರ್ಮಾ ಸಂಸ್ಕೃತಿ ಪುರಸ್ಕಾರ. 2021ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನೃಪತುಂಗ ಸಾಹಿತ್ಯ ಪ್ರಶಸ್ತಿ’, 2022ರಲ್ಲಿ ಆರ್ಯಭಟ ಸಾಹಿತ್ಯ ಸಂಘದಿಂದ ಸಂಸ್ಕೃತ ಸೇವೆಗಾಗಿ ‘ಅಂತಾರಾಷ್ಟ್ರೀಯ ಆರ್ಯಭಟ ಪುರಸ್ಕಾರ’ ಮತ್ತು ಗೋವಿಂದ ಪೈ ಸಂಶೋಧನ ಕೇಂದ್ರದಿಂದ ‘ಸೇಡಿಯಾಪು ಕೃಷ್ಣಭಟ್ಟ ಸಾಹಿತ್ಯ ಪ್ರಶಸ್ತಿ.

ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡ ಪದಾಧಿಕಾರಿಗಳು ಮತ್ತು ಗಣ್ಯರು, ಸಮಿತಿಯ ಗೌರವಾಧ್ಯಕ್ಷರು ಹಾಗೂ ಮಾಜಿ ವಿಧಾನಪರಿಷತ್ ಶಾಸಕರು ಶ್ರೀ ಡಿ. ಎಸ್. ವೀರಯ್ಯ, ಗೌರವಾಧ್ಯಕ್ಷರು ಹಾಗೂ ಯುನೈಟೆಡ್ ಲ್ಯಾಂಡ್ ಬ್ಯಾಂಕಿನ ಮ್ಯಾನೇಜಿಂಗ್ ಡೈರೆಕ್ಟರ್ ಶ್ರೀ ಪ್ರದೀಪ್ ಕುಮಾರ್ ಎಸ್., ಪರಿಸರ ಪ್ರೇಮಿ ಕನ್ನಡ ಸುರೇಶ್‌ ಕುಮಾರ್, ಸಹಕಾರ ನಗರ, ಸ್ಥಾಪಕಾಧ್ಯಕ್ಷರಾದ ಕೆ.ಪಿ. ಮಂಜುನಾಥ್ ಸಾಗರ್ ಹಾಗೂ ಜಾನಪದ ಗಾಯಕರಾದ ಗೋ.ನಾ. ಸ್ವಾಮಿ ಉಪಸ್ಥಿತರಿದ್ದರು.

City Today News

9341997936

Leave a Reply

Please log in using one of these methods to post your comment:

WordPress.com Logo

You are commenting using your WordPress.com account. Log Out /  Change )

Facebook photo

You are commenting using your Facebook account. Log Out /  Change )

Connecting to %s

This site uses Akismet to reduce spam. Learn how your comment data is processed.