
ಗುರು ರಾಯರ ಸನ್ನಿಧಿಯಲ್ಲಿ ರಾಯರ ಬೃಂದಾವನಕ್ಕೆ “ಲಕ್ಷ ಪುಷ್ಪಾರ್ಚನೆ”ಗೆ ಸಿದ್ಧತೆ
ಜಯನಗರ ಐದನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮ ಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಅನುಗ್ರಹ ಆಶೀರ್ವಾದದೊಂದಿಗೆ ಶ್ರೀ ಮಠದ ಹಿರಿಯ ವ್ಯವಸ್ಥಾಪಕ ರಾದ ರಾಜಾ, ಕೆ ವಾದೀಂದ್ರಾ ಚಾರ್ ಅವರ ನೇತೃತ್ವದಲ್ಲಿ ಶ್ರೀ ಗುರುರಾಯರ ಜನ್ಮದಿನದ ಮಹೋತ್ಸವದ ಅಂಗವಾಗಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದಂಗಳವರ ಅಮೃತಹಸ್ತದಿಂದ 26-2-2023 ಭಾನುವಾರ ಬೆಳಗ್ಗೆ 10.30 ಕ್ಕೆ “ಲಕ್ಷ ಪುಷ್ಪಾರ್ಚನೆ” ಪ್ರಾರಂಭವಾಗಲಿದೆ ಈ ಸೇವೆಯಲ್ಲಿ ಭಾಗವಹಿಸುವಂತಹ ಭಕ್ತರು ಆನ್ಲೈನ್ ಈ 9449133929 ನಂಬರ್ ಮುಖಾಂತರ ಸೇವೆ ಸಲ್ಲಿಸಬಹುದು ಎಂದು ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದರು, ಈ ಸಂದರ್ಭದಲ್ಲಿ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಲಿದೆ, ಶ್ರೀ ಗುರು ಸೇವೆಯಲ್ಲಿ ಭಾಗವಹಿಸಿ ಶ್ರೀ ಹರಿವಾಯು ಗುರುಗಳ ಅನುಗ್ರಹಕ್ಕೆ ಪಾತ್ರರಾಗಬಹುದು.
City Today News – 9341997936