
ರಾಜ್ಯದ 224 ವಿಧಾನ ಸಭಾ ಕ್ಷೇತ್ರಗಳಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾ ಅಭ್ಯರ್ಥಿಗಳು ಸ್ಪರ್ದಿಸಲಿದ್ದು.ಚುನಾವಣೆಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಮಹಾಸಭಾದ ಉಪಾಧ್ಯಕ್ಷ ಭಾಸ್ಕರ್ ಪೂಜಾರಿ ತಿಳಿಸಿದರು.
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿಂದು ನಡೆದ ಸುದ್ದಿಗೋಷ್ಢಿಯಲ್ಲಿ ಮಾತನಾಡಿದ ಅವರು, ಅಖಿಲ ಭಾರತ ಹಿಂದೂ ಮಹಾ ಸಭಾ ರಾಷ್ಟ್ರೀಯ ಪಕ್ಷವಾಗಿದ್ದು, ಈ ಬಾರಿ ಕರ್ನಾಟಕದಲ್ಲಿ ನಡೆಯಲಿರುವ ವಿಧಾನ ಸಭಾ ಚುನಾವಣೆಯಲ್ಲಿ ಇರುವ ಎಲ್ಲ ವಿಧಾನ ಸಭಾ ಕ್ಷೇತ್ರಗಳಲ್ಲಿ ಸ್ಪರ್ದೆಗೆ ಇಳಿಯಲಾಗುವುದು. ಅದೇ ರೀತಿ ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿಯೂ ನಮ್ಮ ಅಭ್ಯರ್ಥಿಗಳನ್ನು ಕಣಕಿಳಿಸುವುದಾಗಿ ಇದಕ್ಕೆ ಬೇಕಾದ ಎಲ್ಲ ಕಾರ್ಯವೈಖರಿಯನ್ನು ರಚಿಸಿಕೊಂಡಿರುವುದಾಗಿ ತಿಳಿಸಿದರು.
ಬೆಂಗಳೂರು ಜಿಲ್ಲಾಧ್ಯಕ್ಷ ಶಶಿಕಾಂತ ಪೂಜಾರಿ,ಬೆಂಗಳೂರು ನಗರ ಜಿಲ್ಲೆಯ ಉಪಾಧ್ಯಕ್ಷ ಹರೀಶ್, ಯುವ ಘಟಕ ಅಧ್ಯಕ್ಷ ಎಂ.ನಾಗರಾಜ್ ಮತ್ತಿತರರು ಹಾಜರಿದ್ದರು.
City Today News – 9341997936