
ಯಂಗ್ ಸ್ಟರ್ ಎಂಪವರ್ಮೆಂಟ್ ಪಾರ್ಟಿ (ವೈಇಪಿ ಪಾರ್ಟಿ) ಯಿಂದ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದ್ದು, ಇಂದು 24 ವಿಧಾನಸಭಾ ಕ್ಷೇತ್ರಗಳ ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸಿ.ಎಂ.ಶಹಭಾಶ್ ಖಾನ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರದ ಯಾವುದೇ ಯೋಜನೆಗಳ ಉಪಯೋಗವನ್ನು ಯಂಗ್ ಸ್ಟರ್ ಪಾರ್ಟಿ ಆ್ಯಪ್ ಮೂಲಕ ಮನೆಯಲ್ಲೇ ಕುಳಿತು ಸೌಲಭ್ಯವನ್ನು ಪಡೆಯಬಹುದಾಗಿದೆ. ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗುವುದಲ್ಲದೇ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವುದರ ಜೊತೆಗೆ ತಪ್ಪಿಸಬಹುದಾಗಿದೆ ಎಂದು ತಿಳಿಸಿದರು. ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನು
ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಯುವ ಸರ್ಕಾರವನ್ನು ರಚಿಸುವ ಸಂಕಲ್ಪವನ್ನು ಯಂಗ್ ಸ್ಟರ್ ಎಂಪವರ್ಮೆಂಟ್ ಪಾರ್ಟಿ ತೊಟ್ಟಿದೆ. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಮೂಲಕ ಈ ಪಕ್ಷವನ್ನು ಬೆಂಬಲಿಸಿ ಈ ಭಾರಿ ಅಧಿಕಾರಕ್ಕೆ ತರಬೇಕೆಂದು ಮನವಿ ಮಾಡಿದರು.
ಸುದ್ದಿಗೋಷ್ಟಿಯಲ್ಲಿ ರಾಜ್ಯಾಧ್ಯಕ್ಷ ನರೇಶ್ ಪಾಟೀಲ್, ರಾಜ್ಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಸಲ್ಮಾನ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಲಿಯಾಸ್ ಷರೀಫ್, ಮಾಗಡಿ ತಾಲ್ಲೂಕು ಘಟಕದ ಅಧ್ಯಕ್ಷ ರಫಿವುಲ್ಲ, ಚನ್ನಪಟ್ಟಣ ತಾಲ್ಲೂಕು ಅಧ್ಯಕ್ಷ ಫಯಾಝ್ ಅಹಮದ್ ಹಾಗೂ ರಾಮನಗರ ಘಟಕದ ಅಧ್ಯಕ್ಷ ಸಯ್ಯದ್ ಹೈದರ್ ಮತ್ತಿತರರು ಹಾಜರಿದ್ದರು.
City Today News – 9341997936