
07-04-2323 ರಂದು ರಾಜ್ಯದಲ್ಲಿ ರಾಷ್ಟ್ರೀಯ ಜನಹಿತ ಪಾರ್ಟಿ (ಆರ್.ಜೆ.ಪಿ) ಒಂದು ರಾಜಕೀಯ ಪಕ್ಷವನ್ನು ಪ್ರಾರಂಭ ಮಾಡುತ್ತಿದ್ದು, ಹಾಗು ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡುತ್ತಿದ್ದೇವೆ. ರಾಜ್ಯದಲ್ಲಿ ಪ್ರತಿಯೊಬ್ಬ ಸಾಮಾನ್ಯ ಜನರಿಗೂ ಆರ್ಥಿಕ ಸೌಲಭ್ಯದ ಹಕ್ಕು ನೀಡುವುದು ರಾಜ್ಯದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡುವುದು, ರಾಜಕೀಯ ಶುದ್ದೀಕರಣ ಮತ್ತು ಸ್ವಚ್ಛ ಹಾಗೂ ಸ್ವಚ್ಚಾ ಸುರಕ್ಷಿತ ಮತ್ತು ಪಾರದರ್ಶಕ ಆಡಳಿತ ನೀಡುವುದು, ವಿಶೇಷವಾಗಿ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಸುರಕ್ಷತೆ ಮತ್ತು ಭದ್ರತೆ ಕಲ್ಪಿಸುವುದು. ರಾಜ್ಯದ ನೆಲ,ಜಲ, ಭಾಷೆ ಮತ್ತು ಪರಿಸರ ಸಂರಕ್ಷಣೆ ಮತ್ತು ನಿರ್ವಹಣೆಗೆ ಆದ್ಯತೆ ನೀಡುವುದು. ರಾಜ್ಯದಲ್ಲಿರುವ ಹಿಂದುಳಿದ, ಅಲ್ಪ ಸಂಖ್ಯಾತರ, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಭದ್ರತೆ ಮತ್ತು ಪ್ರೋತ್ಸಾಹ ನೀಡುವುದು ರೈತರು ತಾವು ಬೆಳೆದ ಬೆಳೆಗೆ ಬೆಂಬಲ ಬೆಲೆ ನಿಗಧಿಪಡಿಸುವುದು, ರಾಜ್ಯದ ಎಲ್ಲಾ ಜಾತಿ, ಪಂಗಡಗಳಿಗೆ ಸಮಾನತೆಯ ಮೀಸಲಾತಿಯನ್ನು ಅನುಷ್ಠಾನಗೊಳಿಸುವುದು, ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರು, ಉತ್ತಮವಾದ ರಸ್ತೆ ಮತ್ತು ದಿನದ 24 ಗಂಟೆಗಳ ಕಾಲ ವಿದ್ಯುತ್ ನೀಡುವುದು. ಕೃಷಿ, ನೀರಾವರಿ, ಹೈನುಗಾರಿಕೆ, ತೋಟಗಾರಿಕೆ ಚಟುವಟಿಕೆಗಳಿಗೆ ಆದ್ಯತೆ ನೀಡುವುದು. ಖಾಸಗಿ ಶಾಲೆಗಳಲ್ಲಿ ಡೊನೇಷನ್ ಇಲ್ಲದೆ ಮಕ್ಕಳಿಗೆ ವಿದ್ಯಾಭ್ಯಾಸ ನೀಡುವಂತೆ ಪ್ರೇರೇಪಿಸುವುದು. ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಎಲ್ಲಾ ವರ್ಗದವರಿಗೂ ಹೈಟೆಕ್ ಆಸ್ಪತ್ರೆ ಸೌಲಭ್ಯ ಕಲ್ಪಿಸುವುದು.

ಈ ಎಲ್ಲಾ ಕಾರ್ಯಕ್ರಮಗಳನ್ನು ಅನುಷ್ಠಾನ ಕ್ಕೆ ಮತ್ತು ನಮ್ಮ ರಾಜ್ಯದ ಭ್ರಷ್ಟಾಚಾರ ನಿರ್ಮೂಲನೆ ಮಾಡುವುದು, ಜನರಿಗೆ ಪ್ರಾಮಾಣಿಕ ಮತ್ತು ಪಾರದರ್ಶಕ ಆಡಳಿತ ಕೊಡುವುದು ನಮ್ಮ ಉದ್ದೇಶವಾಗಿರುತ್ತದೆ ಎಂದು ಕೆ.ಮಂಜುನಾಥ್ ರಾಷ್ಟ್ರಾಧ್ಯಕ್ಷರು, ರಾಷ್ಟ್ರೀಯ ಜನಹಿತ ಪಾರ್ಟಿ, ಇಂದು ಪ್ರೆಸ್ಸ್ ಕ್ಲಬ್ ಆಫ್ ಬೆಂಗಳೂರಿನಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.
City Today News – 9341997936