
ಕೋಮುವಾದಿ ಶಕ್ತಿಗಳು ಅಧಿಕಾರಕ್ಕೆ ಬರುವುದನ್ನು ತಡೆಗಟ್ಟಲು ಮತ್ತು ಜಾತ್ಯಾತೀತ ಮತಗಳು ವಿಭಟನೆಯಾಗದಂತೆ ತಡೆಯಲು ಬಹುಜನ ಸಮಾಟ ಪಾರ್ಟಿ ಈ ಬಾರಿ 130 ಕ್ಷೇತ್ರಗಳಲ್ಲಿ ಸ್ಪರ್ದಿಸುತ್ತಿದೆ. ಜೊತೆಗೆ ಭಾರತದ ಸಂವಿಧಾನದ ಆಶಯಗಳನ್ನು ಜನರಿಗೆ ತಲುಪಿಸಲು ಈ ಬಾರಿ ವಿಧಾನಸಭೆಯಲ್ಲಿ ಬಹುಜನ ಸಮಾಜ ಪಾಯ ಶಾಸಕರು ಆರಿಸಿ ಬರಬೇಕಾಗಿರುವುದು ಹಿಂದೆಂದಿಗಿಂತಲೂ ಈಗ ಅತ್ಯಂತ ಅಗತ್ಯವಾಗಿದೆ.
ಕರ್ನಾಟಕದಲ್ಲಿ ಕಳೆದ 40-50 ವರ್ಷಗಳಿಂದ ಬಗೆಹರಿಯದ ಬಗಹುಕುಂ ಸಾಗುವಳ ಸಕ್ರಮ, ವಸತಿ ಸಮಸ್ಯೆ ಕುಡಿಯುವ ನೀರಿನ ಸಮಸ್ಯೆ, ರೈತ ವಿದ್ಯಾರ್ಥಿಗಳ ಸಮಸ್ಯೆ ಮತ್ತು ವಿಶೇಷವಾಗಿ ನಿರುದ್ಯೋಗ ಸಮಸ್ಯೆ, ಬೆಲೆಏರಿಕೆಯಿಂದಾಗಿ ಜನಸಾಮಾನ್ಯರ ಬದುಕು ಮೂರಾ ಬಟ್ಟೆಯಾಗಿದೆ. ಇವುಗಳ ಪರಿಹಾರಕ್ಕಾಗಿ ಕರ್ನಾಟಕ ವಿಧಾನಸಭೆಯಲ್ಲಿ ಬಹುಜನ ಸಮಾಜ ಶಾಸಕರು ಗೆದ್ದುಬರಬೇಕಾಗಿದೆ. ಆದ್ದರಿಂದ ಕರ್ನಾಟಕದ ಮತಬಾಂಧವರು ಬಹುಜನ ಸಮಾಜ ಪಾರ್ಟಿಯ ಅಭ್ಯರ್ಥಿಗಳನ್ನು ಆರಿಸಬೇಕೆಂದು ವಿನಮ್ರ ಮನವಿ.
ಈಗಾಗಲೇ ನಮ್ಮ ಪಕ್ಷಕ್ಕೆ ಸೇರ್ಪಡೆಯಾಗಿರುವ ಕಾಂಗ್ರೇಸ್ ಶಾಸಕರಾಗಿದ್ದ ಮಾನ್ಯ ಅಖಂಡ ಶ್ರೀನಿವಾಸಮೂರ್ತಿಯವರನ್ನು ಪುಲಕೇಶಿನಗರದ ಅಭ್ಯರ್ಥಿಯಾಗಿ ಕಣಕ್ಕೆ ಇಳಸಲಾಗಿದೆ. ಗಾಂಧಿನಗರ ಕ್ಷೇತ್ರದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುತ್ತಿರುವ ಮಾಜಿ ಸಚಿವರಾದ ಮಾನ್ಯ ಕೃಷ್ಣಯ್ಯಶೆಟ್ಟಿಯವರು ಬಹುಜನ ಸಮಾಜ ಪಾರ್ಟಿ ಬೆಂಬಲಿತ ಅಭ್ಯರ್ಥಿಯಾಗಿದ್ದಾರೆ.
ಅಕ್ಕ ಮಾಯಾವತಿಯವರು ‘ಚುನಾವಣಾ ಪ್ರಚಾರಕ್ಕೆ ಬೆಂಗಳೂರಿಗೆ ಆಗಮನ: ದಿನಾಂಕ: 05.05.2023 .ಶುಕ್ರವಾರದಂದು ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಬೃಹತ್ ಚುನಾವಣಾ ಪ್ರಚಾರಕ್ಕೆ ಆಗಮಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಕಾರ್ಯಕರ್ತರು, ಅಭ್ಯರ್ಥಿಗಳು ಮತ್ತು ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಬಹುಜನ ಸಮಾಜ ಪಾರ್ಟಿ ವತಿಯಿಂದ ಪ್ರೆಸ್ಸ್ ಕ್ಲಬ್ ವತಿಯಿಂದ ನಡೆದ ಪತ್ರಿಕಾ ಗೋಷ್ಥಿಯಲ್ಲಿ ತಿಳಿಸಿದರು.
City Today News – 9341997936