ಕುಖ್ಯಾತ ಮನೆಗಳನ ಬಂಧನ

ದಿನಾಂಕ:27.04.2023 ರಂದು ಬೆಳಿಗ್ಗೆ 09-30 ಸಮುಯದಲ್ಲಿ ಪಿರಾದುದಾರರು ತಮ್ಮ ಮನೆಗೆ ಬೀಗ ಹಾಕಿಕೊಂಡು ಕೆಲಕ್ಕೆ ಹೋಗಿದ್ದು ಸಂಜೆ ಸುಮಾರು 06-00 ಗಂಟೆಯ ಸಮಯದಲ್ಲಿ ವಾಪಸ್ಸು ಮನೆಗೆ ಬಂದು ನೋಡಲಾಗಿ ಪಿರಾದುದಾರರ ಮನೆಯ ಬಾಗಿಲನ್ನು ಯಾರೋ ಕಳ್ಳರು ಮುರಿದು ರೂಮಿನ ಬೀರುವಿನಲ್ಲಿಟ್ಟಿದ್ದ ಸುಮಾರು 47 ಗ್ರಾಂ ತೂಕದ ಚಿನ್ನಾಭರಣಗಳನ್ನು ಯಾರೋ ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ ಎಂದು ಪಿರಾದುದಾರರು ದೂರು ನೀಡಿದ್ದು ಈ ಬಗ್ಗೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಕಳ್ಳತನ ಹರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಒಬ್ಬ ವ್ಯಕ್ತಿಯನ್ನು ಬಂಧಿಸಿ, ಆತನು ನೀಡಿದ ಮಾಹಿತಿಯ ಮೇರೆಗೆ ಆತನಿಂದ ಸುಮಾರು ರೂ.8,22,000/- ಮೌಲ್ಯದ 137 ಗ್ರಾಂ ತೂಕದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.

ಈತನ ದಸ್ತಗಿರಿಯಿಂದ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಯ ಮೂರು ಪ್ರಕರಣಗಳು ಪತ್ತೆಯಾಗಿರುತ್ತವ

ಈ ಕಾರ್ಯಾಚರಣೆಯನ್ನು ಬೆಂಗಳೂರು ನಗರದ ಪಶ್ಚಿಮ ವಿಭಾಗದ ಉಪ ಪೊಲೀಸ್‌ ಆಯುಕ್ತರಾದ ಶ್ರೀ ಎಸ್. ಗಿರೀಶ್‌, ಐ.ಪಿ.ಎಸ್‌. ರವರ ಸೂಕ್ತ ಮಾರ್ಗದರ್ಶನದಲ್ಲಿ ವಿಜಯನಗರ ಉಪ ವಿಭಾಗದ ಸಹಾಯಕ ಪೊಲೀಸ್ ಕಮೀಷನರ್‌ರವರಾದ ಶ್ರೀ, ಚಂದನ್‌ಕುಮಾರ್. ಎನ್. ರವರ ನಿರ್ದೇಶನದಲ್ಲಿ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಯ ಪೊಲೀಸ್ ಇನ್ಸಪೆಕ್ಟರ್ . ಜಿ.ಎನ್‌. ನಾಗೇಶ್ ರವರ ನೇತೃತ್ವದ ಸಿಬ್ಬಂದಿ ರವರುಗಳು ಈ ಕಾರ್ಯಾಚರಣೆಯನ್ನು ಕೈಗೊಂಡು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

City Today News 9341997936

Leave a comment

This site uses Akismet to reduce spam. Learn how your comment data is processed.