ಮಂತ್ರಾಲಯ ಶ್ರೀಗಳಿಂದ ಶ್ರೀಮನ್ ಮೂಲ ರಾಮಚಂದ್ರ ದೇವರ”ಸಂಸ್ಥಾನ ಪೂಜೆ”

ಮಂತ್ರಾಲಯ ಶ್ರೀಗಳಿಂದ ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿಗಳಾದ ಪರಮ ಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರು ತಮ್ಮ ಅಮೃತ ಹಸ್ತದಿಂದ ಶ್ರೀಮನ್ ಮೂಲ ರಾಮಚಂದ್ರ ದೇವರ ಸಂಸ್ಥಾನ ಪೂಜೆಯನ್ನು ನೆರವೇರಿಸಿ ನಂತರ ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಮಹಾಮಂಗಳಾರತಿ ಹಾಗೂ ಶ್ರೀ ರಾಘವೇಂದ್ರ ಸ್ವಾಮಿಗಳ ಸುವರ್ಣ ಪಾದಕ್ಕೆ ಪಾದ ಪೂಜೆಯನ್ನು ನೆರೆವೇರಿಸಿದರು ಎಂದು ಶ್ರೀ ನಂದ ಕಿಶೋರ್ ಆಚಾರ್ಯರು ತಿಳಿಸಿದರು ಈ ಸಂದರ್ಭದಲ್ಲಿ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್,ಕೆ ವಾದಿಂದ್ರಾಚಾರ್ಯರು, ಗಣ್ಯರು, ಹಾಗೂ ಭಕ್ತಾದಿಗಳು ಭಾಗವಹಿಸಿ ತೀರ್ಥ ಪ್ರಸಾದವನ್ನು ಸ್ವೀಕರಿಸಿ ನಂತರ ಪರಮ ಪೂಜ್ಯ ಶ್ರೀಪಾದಂಗಳವರಿಂದ ಫಲಮಂತ್ರಾಕ್ಷತೆಯನ್ನು ಸ್ವೀಕರಿಸಿ ಶ್ರೀ ಹರಿ ವಾಯು ಗುರುಗಳ ಅನುಗ್ರಹಕ್ಕೆ ಪಾತ್ರರಾದರು.

City Today News 9341997936

Leave a Reply

This site uses Akismet to reduce spam. Learn how your comment data is processed.