
ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಅಮೃತ ಮಹೋತ್ಸವ ಹಾಗೂ ಈಡಿಗ ಹಾಗೂ 25 ಪಂಗಡಗಳ ಬೃಹತ್ ಸಮಾವೇಶ ಬೆಂಗಳೂರಿನ ಅರಮನೆ ಮೈದಾನದಲ್ಲಿ ಡಿಸೆಂಬರ್ 10 ಭಾನುವಾರ ನಡೆಯಲಿದೆ.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈಡಿಗ ಸಮಾಜದ ಅಧ್ಯಕ್ಷ ಡಾ.ಎಂ.ತಿಮ್ಮೇಗೌಡ, ಕರ್ನಾಟಕ ಪ್ರದೇಶ ಆರ್ಯ ಈಡಿಗರ ಅಸ್ತಿತ್ವಕ್ಕೆ ಬಂದು ಇಂದಿಗೆ 78 ವರ್ಷಗಳು ಕಳೆದಿವೆ. ಈ ಹಿನ್ನಲೆಯಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ.1995ರಲ್ಲಿ ನಡೆದ ಮೂರನೇ ಬೃಹತ್ ಈಡಿಗ ಸಮಾವೇಶದಲ್ಲಿ ನಿರ್ಧರಿಸಿದಂತೆ ಒಂದು ಸಮುದಾಯ ಒಂದೇ ಜಾತಿ ಎಂಬ ಘೋಷಣೆಯೊಂದಿಗೆ ಇಂದು 26 ಉಪ ಪಂಗಡಗಳು ಒಂದೇ ಎಂದು ತೋರಿಸಲು ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ. ನಮ್ಮ ಸಂಖ್ಯಾ ಬಲವನ್ನು ಸರ್ಕಾರಕ್ಕೆ ತೋರಿಸಿ ಸರ್ಕಾರದ ಸಕಲ ಸೌಲಭ್ಯಗಳನ್ನು ಒದಗಿಸುವ ಹಾಗೂ ನಮ್ಮ ಸಮುದಾಯಕ್ಕೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ಬೃಹತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ನಮ್ಮ ಕುಲ ಕಸುಬನ್ನು ರಾಜ್ಯ ಸರ್ಕಾರ ಕಿತ್ತು ಕೊಂಡಿದೆ.ಆದರೆ ಅದಕ್ಕೆ ಪರ್ಯಾಯವಾಗಿ ಬೇರೆ ವೃತ್ತಿಯನ್ನು ನೀಡುವ ಪ್ರಯತ್ನವನ್ನು ಯಾವುದೇ ಸರ್ಕಾರಗಳು ಮಾಡಿಲ್ಲ, ಹಾಸ್ಟೆಲ್ ನಿರ್ಮಾಣಕ್ಕೆ ಬಿಜೆಪಿ ಸರ್ಕಾರ ಬಿಡುಗಡೆ ಮಾಡಿದ್ದ ಐದು ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡಿಲ್ಲ. ಈ ಹಣ ಬಿಡುಗಡೆ ಸೇರಿದಂತೆ ಅನೇಕ ಬೇಡಿಕೆಗಳನ್ನು ಈಡೇರಿಸುವಂತೆ ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಸುದ್ದಿಗೋಷ್ಢಿಯಲ್ಲಿ ಉಪಾಧ್ಯಕ್ಷರಾದ ಟಿ.ಶಿವಕುಮಾರ್, ಎಸ್.ಹೆಚ್. ಪದ್ಮ ರವೀಂದ್ರ, ಪ್ರಧಾನ ಕಾರ್ಯದರ್ಶಿ ಹೆಚ್.ಟಿ.ಮೋಹನ್ ದಾಸ್, ಜಂಟಿ ಕಾರ್ಯದರ್ಶಿ ರಾಮೋಹಳ್ಳಿ ಪ್ರಕಾಶ್ ಮತ್ತಿತರರು ಹಾಜರಿದ್ದರು.
City Today News 9341997936
