
ಡ್ರಗ್ ಪೆಡ್ಡಿಂಗ್‌ನಲ್ಲಿ ತೊಡಗಿದ್ದ ಒಬ್ಬ ವಿದೇಶಿ ಮತ್ತು ಇಬ್ಬರು ಕೇರಳ ಮೂಲದ ಡ್ರಗ್‌ಪೆಡ್ಲರ್‌ಗಳ ವಶ, ಅಂದಾಜು 1 52.78 ಲಕ್ಷ ಮೌಲ್ಯದ ನಿಷೇಧಿತ ಮಾದಕ ವಸ್ತುಗಳು ಮತ್ತು ವಾಹನಗಳ ವಶ.
ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ನಗರದ ಬೇಗೂರು ಮತ್ತು ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಿಷೇಧಿತ ಮಾದಕವಸ್ತುಗಳನ್ನು ಸಂಗ್ರಹಿಸಿ ಮಾರಾಟ ಮಾಡಲು ಸಿದ್ದತೆ ಮಾಡಿಕೊಂಡಿರುತ್ತಾರೆಂಬ ಬಗ್ಗೆ ನಿಖರ ಮಾಹಿತಿ ಪಡೆದ ಸಿಸಿಬಿಯ ಮಾದಕವಸ್ತು ನಿಗ್ರಹ ದಳದ ಅಧಿಕಾರಿ ಹಾಗೂ ಸಿಬ್ಬಂದಿಗಳ ತಂಡವು, ದಾಳಿ ನಡೆಸಿ ಒಬ್ಬ ವಿದೇಶಿ ಮತ್ತು ಇಬ್ಬರು ಕೇರಳ ಮೂಲದ ಡ್ರಗ್‌ಪೆಡ್ಲರ್‌ಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿರುತ್ತಾರೆ. ಬಂಧಿತರ ವಶದಿಂದ ನಿಷೇಧಿತ ಮಾದಕ ವಸ್ತುಗಳಾದ MDMA Crystal 86.89 g LSD Strips 100 No’s, Ecstasy pills 253 No’s, Cocaine 2.5 g, 3 Mobile phones, Weighing Machine-1, Honda Activa Bike ~ ថថ ដក ផផផ្ស ಇವುಗಳ ಒಟ್ಟು ಮೌಲ್ಯ ₹ 52,78,000/- ಗಳೆಂದು ಅಂದಾಜಿಸಲಾಗಿದೆ. ವಶಕ್ಕೆ ಪಡೆದ ವ್ಯಕ್ತಿಗಳ ವಿರುದ್ಧ ಬೇಗೂರು ಮತ್ತು ಕೋರಮಂಗಲ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಿದ್ದು ತನಿಖೆ ಮುಂದುವರೆದಿದೆ.
ಬೇಗೂರು ಪೊಲೀಸ್ ಠಾಣೆಯಲ್ಲಿ ವರದಿಯಾಗಿರುವ ಪ್ರಕರಣದಲ್ಲಿ ದಸ್ತಗಿರಿಯಾಗಿರುವ ವಿದೇಶಿ ಪ್ರಜೆಯು ಸುಮಾರು ಒಂದು ವರ್ಷದ ಹಿಂದೆ ಬ್ಯುಸಿನೆಸ್ ವೀಸಾ ಪಡೆದು ಭಾರತಕ್ಕೆ ಬಂದಿದ್ದು ಕಳೆದ ಮೂರು ತಿಂಗಳಿನಿಂದ ಬೆಂಗಳೂರಿನಲ್ಲಿ ವಾಸವಾಗಿದ್ದುಕೊಂಡು, ನಗರದಲ್ಲಿ ನೆಲೆಸಿರುವ ಆಫ್ರಿಕಾ ಮೂಲದ ಪ್ರಜೆಗಳಿಂದ ಕಡಿಮೆ ಬೆಲೆಗೆ ನಿಷೇಧಿತ ಮಾದಕ ವಸ್ತುಗಳನ್ನು ಖರೀದಿ ಮಾಡಿ ಅವುಗಳನ್ನು ಪರಿಚಯಸ್ಥ ಗಿರಾಕಿಗಳಿಗೆ ಖುದ್ದಾಗಿ ಸರಬರಾಜು ಮಾಡಿ ಅಕ್ರಮ ಹಣ ಸಂಪಾದನೆ ಮಾಡುತ್ತಿದ್ದನೆಂದು ವಿಚಾರಣೆಯಿಂದ ತಿಳಿದುಬಂದಿರುತ್ತದೆ.
ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಶಕ್ಕೆ ಪಡೆದಿರುವ ಕೇರಳ ಮೂಲದ ಇಬ್ಬರು ಡ್ರಗ್‌ಪೆಡ್ಲರ್‌ಗಳು ಸ್ಥಳೀಯ ಡ್ರಗ್‌ಪೆಡ್ಲರ್‌ನಿಂದ ಕಡಿಮೆ ಬೆಲೆಗೆ ನಿಷೇಧಿತ ಮಾದಕ ವಸ್ತುಗಳನ್ನು ಖರೀದಿಸಿ, ಪರಿಚಯಸ್ಥ ಗಿರಾಕಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿದ್ದರೆಂಬ ಮಾಹಿತಿಯು ವಿಚಾರಣೆಯಿಂದ ತಿಳಿದುಬಂದಿದೆ.
ಈ ಕಾರ್ಯಾಚರಣೆಯನ್ನು ಸಿಸಿಬಿಯ ಮಾದಕದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಯಶಸ್ವಿಯಾಗಿ ಕೈಗೊಂಡಿರುತ್ತಾರೆ.
City Today News 9341997936
