ಡಿ.ಕೆ.ಶಿವಕುಮಾರ್ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಕೊಡ ಮಾಡುವ “ವರ್ಷದ ವ್ಯಕ್ತಿ-ವಿಶೇಷ ವ್ಯಕ್ತಿ” ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ, 2024ರ ಪ್ರೆಸ್ ಕ್ಲಬ್ ಡೈರಿಯನ್ನು ಬಿಡುಗಡೆ ಗೊಳಿಸಿದರು.
ವರ್ಷದ ವ್ಯಕ್ತಿ ಪ್ರಶಸ್ತಿ ಪಡೆದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ವಿಶೇಷ ಪ್ರಶಸ್ತಿ ಪುರಸ್ಕೃತರಾದ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ, ಕಾರ್ಮಿಕ ಸಚಿವರಾದ ಸಂತೋಷ್ ಎಸ್ ಲಾಡ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು ಅವರಿಗೆ ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಲಾಯಿತು.
ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿಗಳಾದ ಶಿವರಾಜ್ ಪಾಟೀಲ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಉಪ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರಾದ ತ್ಯಾಗರಾಜ್ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿದ್ದರು.
City Today News 9341997936
