
ಶ್ರೀ ಜಿ. ಮರಿಸ್ವಾಮಿಯವರು ಸುಮಾರು 40 ವರ್ಷಗಳಿಂದ ಭಾರತೀಯ ಜನತಾ ಪಕ್ಷದ (ಬಿ.ಜೆ.ಪಿ) ನಿಷ್ಠಾವಂತ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಷ್ಟ್ರಪರ ಚಿಂತನೆ ಇರುವಂತಹ ಸ್ವಯಂಸೇವಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಹಲವಾರು ಲೋಕಸಭಾ, ವಿಧಾನಸಭಾ ಮತ್ತು ವಿಧಾನಪರಿಷತ್ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಹಗಲಿರುಳು ಶ್ರಮಿಸಿದ್ದಾರೆ. ಸುಮಾರು 50 ಜಿಲ್ಲಾ ಪಂಚಾಯ್ತಿಗಳನ್ನೊಳಗೊಂಡ ಬೆಂಗಳೂರು ನಗರದ ಜಿಲ್ಲಾ ಪಂಚಾಯ್ತಿಯ ಅಧ್ಯಕ್ಷರಾಗಿ ಪಕ್ಷ ಸಂಘಟನೆ ಮಾಡಿದ್ದು ಗಮನಾರ್ಹ ವಿಷಯ. ಬೆಂಗಳೂರು ನಗರ ಜಿಲ್ಲೆಯ ಅಭಿವೃದ್ಧಿಗಾಗಿ 100 ಕೋಟಿಗೂ ಅಧಿಕ ಅನುದಾನವನ್ನು ಮಂಜೂರು ಮಾಡಿಸುವಲ್ಲಿ ಯಶಸ್ವಿಯಾಗಿದ್ದರು. ಕರ್ನಾಟಕ ವೀರಶೈವ ವಿದ್ಯಾಭಿವೃದ್ಧಿ ಸಂಸ್ಥೆಯ ನಿರ್ದೇಶಕರಾಗಿ ನಾಡಿನ ವಿದ್ಯಾರ್ಥಿಗಳಿಗೆ ಮತ್ತು ಬಡವರ್ಗದವರ ವಿದ್ಯಾರ್ಜನೆಗೆ ಬೆನ್ನೆಲುಬಾಗಿ ನಿಂತಿದ್ದಾರೆ. ಇವರು ಕರ್ನಾಟಕ ರಾಜ್ಯದಲ್ಲಿ ಮತ್ತು ಬೆಂಗಳೂರು ಉತ್ತರ ಜಿಲ್ಲೆಯಲ್ಲಿ ಪ್ರಬಲವಾಗಿರುವಂತಹ ವೀರಶೈವ- ಲಿಂಗಾಯತ ಸಮುದಾಯದ ವಿಶ್ವಾಸವನ್ನು ಗೆದ್ದಿರುವ ಮುಖಂಡರಾಗಿದ್ದಾರೆ. 1989 ರಿಂದ ಅಬ್ಬಿಗೆರೆ ಮತ್ತು ಯಶವಂತಪುರ ಹೋಬಳಿಗಳ ಯುವ ಮೋರ್ಚಾ ಅಧ್ಯಕ್ಷರಾಗಿ ಪಕ್ಷದ ಮೂಲ ಸಂಘಟನೆಯಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.
ಕೋವಿಡ್ ವೈರಾಣು ವಿಕೋಪ ಪರಿಸ್ಥಿತಿಯಲ್ಲಿ 65,000 ರೇಷನ್ ಮತ್ತು ಮೆಡಿಕಲ್ ಕಿಟ್‌ಗಳನ್ನು ಬೆಂಗಳೂರಿನ ದಾಸರಹಳ್ಳಿ ಮತ್ತು ಅರಸೀಕೆರೆ ವಿಧಾನಸಭಾ ವ್ಯಾಪ್ತಿಯಲ್ಲಿ ವಿತರಿಸಿದ್ದರು. ಬೆಂಗಳೂರು ಜಿಲ್ಲೆಯಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ 500ಕ್ಕೂ ಹೆಚ್ಚು ಹೊಲಿಗೆ ಯಂತ್ರಗಳನ್ನು ವಿತರಣೆ ಮಾಡಿದ್ದಾರೆ. ಕೇಂದ್ರ ಸರ್ಕಾರದ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಯಶವಂತಪುರ, ದಾಸರಹಳ್ಳಿ, ಕೆ.ಆರ್.ಪುರಂ, ಮಹಾಲಕ್ಷ್ಮೀಲೇಔಟ್, ಮಲ್ಲೇಶ್ವರಂ, ಬ್ಯಾಟರಾಯನಪುರ, ಪುಲಿಕೇಶಿನಗರ ಮತ್ತು ಹೆಬ್ಬಾಳ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಶ್ರೀಯುತ 23 ಮರಿಸ್ವಾಮಿಯವರು ಚಿರಪರಿಚಿತರು. ದಕ್ಷಿಣ ಭಾರತದಲ್ಲಿ ಪ್ರಪ್ರಥಮವಾಗಿ ಬಿಜೆಪಿ ಬಾವುಟ ಹಾರಿಸಲು ಶ್ರಮಿಸಿದ ರೈತ ನಾಯಕರಾದ ಶ್ರೀ ಬಿ.ಎಸ್.ಯಡಿಯೂರಪ್ಪಾಜೀ ಮತ್ತು ಹಿರಿಯ ಮುಖಂಡರಾದಂತಹ ದಿವಂಗತ ಶ್ರೀ ಅನಂತ್ ಕುಮಾರ್‌ಜೀ ಅವರ ಬಹುಕಾಲದ ಒಡನಾಡಿಯಾಗಿ ಪಕ್ಷದ ಸಂಘಟನೆಯಲ್ಲಿ ಸಕ್ರಿಯರಾಗಿದ್ದಾರೆ.
ಇಂತಹ ಸರ್ವತೋಮುಖ ಸಮಾಜಮುಖಿ ಚಿಂತನೆಗಳುಳ್ಳ ಮತ್ತು ರಾಷ್ಟ್ರೀಯ ತತ್ವ-ಸಿದ್ಧಾಂತಗಳ ಗುಣಾತ್ಮಕ ವ್ಯಕ್ತಿತ್ವವಿರುವಂತಹ ಶ್ರೀಯುತ ಜಿ. ಮರಿಸ್ವಾಮಿಯವರಿಗೆ ಭಾರತೀಯ ಜನತಾ ಪಕ್ಷದಿಂದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಿದಲ್ಲಿ ಹೆಚ್ಚಿನ ಮತಗಳ ಅಂತರದಿಂದ ಆರಿಸಿ ಬರುತ್ತಾರೆಂಬ ವಿಶ್ವಾಸವಿದೆ.
2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕರ್ನಾಟಕ 104 ವಿಧಾನಸಭಾ ಕ್ಷೇತ್ರಗಳ ಪೈಕಿ ಯಾವೊಂದು ಕ್ಷೇತ್ರದಿಂದಲೂ ವೀರಶೈವ- ಲಿಂಗಾಯತ ಅಭ್ಯರ್ಥಿಗಳಿಗೆ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ನೀಡಿರುವುದಿಲ್ಲ. ಬಹುಮುಖ್ಯವಾಗಿ ಬೆಂಗಳೂರು ನಗರದ 28 ವಿಧಾನಸಭಾ ಮತ್ತು 04 ಲೋಕಸಭಾ ಕ್ಷೇತ್ರಗಳಲ್ಲಿಯೂ ಸಮುದಾಯವನ್ನು ಕಡೆಗಣಿಸಿರುವುದು ಬೇಸರದ ಸಂಗತಿ.
ಆದ್ದರಿಂದ ಮೇಲಿನ ಅಂಶಗಳನ್ನು ಪರಿಗಣಿಸಿ ಶ್ರೀ ಜಿ. ಮರಿಸ್ವಾಮಿಯವರಿಗೆ 2024ರ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದಿಂದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡುವಂತೆ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭೆಯ ಬೆಂಗಳೂರು ನಗರ ಜಿಲ್ಲಾ ಘಟಕವು ಪಕ್ಷದ ರಾಜ್ಯಾಧ್ಯಕ್ಷರನ್ನು ಹಾಗೂ ಪಕ್ಷದ ಮುಖಂಡರನ್ನು ಒತ್ತಾಯಿಸುತ್ತದೆ ಎಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.
City Today News 9341997936
