ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ 58ನೇ ಘಟಿಕೋತ್ಸವ-2024.

ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ 58ನೇ ಘಟಿಕೋತ್ಸವ-2024. 4 ನೇ ಮಾರ್ಚ್, ಸೋಮವಾರ ಬೆಳಗ್ಗೆ 11.30 ಘಂಟೆಗೆ ಜಿ.ಕೆ.ವಿ.ಕೆ. ಅವರಣದ ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತರಾಷ್ಟ್ರೀಯ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಶೈಕ್ಷಣಿಕ ವರ್ಷ 2022-23ರಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ 58ನೇ ಘಟಿಕೋತ್ಸವದಲ್ಲಿ ಒಟ್ಟಾರೆ 1244 ವಿದ್ಯಾರ್ಥಿಗಳಿಗೆ ವಿವಿಧ ಡಾಕ್ಟೋರಲ್, ಸ್ನಾತಕ ಹಾಗೂ ಸ್ನಾತಕೋತ್ತರ ವಿಷಯಗಳಲ್ಲಿ ಪದವಿ ಪ್ರದಾನ ಮಾಡಲಾಗುತ್ತದೆ. ಅದರಲ್ಲಿ, 870 ವಿದ್ಯಾರ್ಥಿಗಳು ವಿವಿಧ ಸ್ನಾತಕ ಪದವಿಗಳನ್ನು, 291 ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ ಸ್ನಾತಕೋತ್ತರ ಪದವಿಗಳನ್ನು ಹಾಗೂ 83 ವಿದ್ಯಾರ್ಥಿಗಳು ಡಾಕ್ಟೋರಲ್ ಪದವಿಗಳನ್ನು ಪಡೆಯಲಿದ್ದಾರೆ.

ಇದೇ ಸಮಾರಂಭದಲ್ಲಿ, ಡಾಕ್ಟರ್ ಆಫ್ ಫಿಲಾಸೊಫಿ ಪದವಿಯಲ್ಲಿ ಒಟ್ಟು 29 ಚಿನ್ನದ ಪದಕಗಳನ್ನು ಪ್ರದಾನ ಮಾಡಲಿದ್ದು, ಅದರಲ್ಲಿ 12 ವಿದ್ಯಾರ್ಥಿನಿಯರು ಹಾಗೂ 04 ವಿದ್ಯಾರ್ಥಿಗಳು ಕೃಷಿ ವಿಶ್ವವಿದ್ಯಾನಿಲಯದ 15 ಚಿನ್ನದ ಪದಕಗಳನ್ನು, 10 ದಾನಿಗಳ ಚಿನ್ನದ ಪದಕಗಳು ಹಾಗೂ 04 ದಾನಿಗಳ ಚಿನ್ನದ ಪದಕ ಪ್ರಶಸ್ತಿ ಪ್ರಮಾಣ ಪತ್ರಗಳನ್ನು ಹಂಚಿಕೊಂಡಿರುತ್ತಾರೆ.

ಮಾಸ್ಟರ್ ಪದವಿಯಲ್ಲಿ ಒಟ್ಟು 69 ಚಿನ್ನದ ಪದಕಗಳನ್ನು ಪ್ರದಾನ ಮಾಡಲಿದ್ದು, ಅದರಲ್ಲಿ 24 ವಿದ್ಯಾರ್ಥಿನಿಯರು ಹಾಗೂ 06 ವಿದ್ಯಾರ್ಥಿಗಳು ಕೃಷಿ ವಿಶ್ವವಿದ್ಯಾನಿಲಯ ನೀಡುವ 22 ಚಿನ್ನದ ಪದಕಗಳು ಹಾಗೂ 05 ಆವರಣದ ಚಿನ್ನದ ಪದಕಗಳನ್ನು, 31 ದಾನಿಗಳ ಚಿನ್ನದ ಪದಕಗಳು ಹಾಗೂ 11 ದಾನಿಗಳ ಚಿನ್ನದ ಪದಕ ಪ್ರಶಸ್ತಿ ಪ್ರಮಾಣ ಪತ್ರಗಳನ್ನು ಹಂಚಿಕೊಂಡಿರುತ್ತಾರೆ.

ಇದಲ್ಲದೆ, ಸ್ನಾತಕ ಪದವಿಯಲ್ಲಿ ಒಟ್ಟು 58 ಚಿನ್ನದ ಪದಕಗಳನ್ನು ಪ್ರದಾನ ಮಾಡಲಿದ್ದು, ಅದರಲ್ಲಿ 13 ವಿದ್ಯಾರ್ಥಿನಿಯರು ಹಾಗೂ 04 ವಿದ್ಯಾರ್ಥಿಗಳು ಕೃಷಿ ವಿಶ್ವವಿದ್ಯಾನಿಲಯ ನೀಡುವ 06 ಚಿನ್ನದ ಪದಕಗಳು, 04 ಆವರಣದ ಚಿನ್ನದ ಪದಕಗಳು, 40 ದಾನಿಗಳ ಚಿನ್ನದ ಪದಕಗಳು, 01 ಕೃವಿವಿಯ ಕ್ರೀಡಾ ಚಿನ್ನದ ಪದಕ ಹಾಗೂ 07 ದಾನಿಗಳ ಚಿನ್ನದ ಪದಕ ಪ್ರಶಸ್ತಿ ಪ್ರಮಾಣ ಪತ್ರಗಳನ್ನು ಹಂಚಿಕೊಂಡಿರುತ್ತಾರೆ.

ಪ್ರೆಸ್ ಕ್ಲಬ್ ಆಫ್ ಬೆಂಗಳೂರ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿ

58ನೆ ಘಟಿಕೋತ್ಸವ ಸಮಾರಂಭದಲ್ಲಿ ಒಟ್ಟಾರೆ 156 ಚಿನ್ನದ ಪದಕ ಹಾಗೂ ಪ್ರಶಸ್ತಿ ಪ್ರಮಾಣ ಪತ್ರಗಳನ್ನು ವಿದ್ಯಾರ್ಥಿಗಳು ಪಡೆಯಲಿದ್ದು ಅದರಲ್ಲಿ 49 ವಿಧ್ಯಾರ್ಥಿನಿಯರಿಗೆ ವಿಶ್ವವಿದ್ಯಾನಿಲಯದ 45 ಚಿನ್ನದ ಪದಕ, 66 ದಾನಿಗಳ ಚಿನ್ನದ ಪದಕ ಹಾಗೂ 19 ದಾನಿಗಳ ಚಿನ್ನದ ಪದಕ ಪ್ರಶಸ್ತಿ ಪ್ರಮಾಣ ಪತ್ರಗಳನ್ನು ಅದರಂತೆ 14 ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾನಿಲಯದ 08 ಚಿನ್ನದ ಪದಕ, 15 ದಾನಿಗಳ ಚಿನ್ನದ ಪದಕ ಹಾಗೂ 03 ದಾನಿಗಳ ಚಿನ್ನದ ಪದಕ ಪ್ರಶಸ್ತಿ ಪ್ರಮಾಣ ಪತ್ರಗಳನ್ನು ವಿತರಿಸಲಾಗುವುದು.

ಒಟ್ಟು 63 ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾನಿಲಯದ 53 ಚಿನ್ನದ ಪದಕಗಳನ್ನು, 81 ದಾನಿಗಳ ಚಿನ್ನದ ಪದಕಗಳನ್ನು (53+81=134) ಹಾಗೂ 22 ದಾನಿಗಳ ಚಿನ್ನದ ಪದಕ ಪ್ರಶಸ್ತಿ ಪ್ರಮಾಣ ಪತ್ರಗಳನ್ನು ವಿತರಿಸಲಾಗುವುದು.

ಗೌರವ ಡಾಕ್ಟರೇಟ್:-

ಶ್ರೀ. ಎಂ. ಸಿ. ರಂಗಸ್ವಾಮಿ, ಪ್ರಗತಿ ಪರ ರೈತ, ದೊಡ್ಡಮಗೆ ಗ್ರಾಮ, ಅರಕಲಗೂಡು ತಾ., ಹಾಸನ ಜಿಲ್ಲೆ ಇವರ ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಕೆ ಮತ್ತು ಸಮಗ್ರ ಕೃಷಿ ಬೇಸಾಯವನ್ನು ಗುರುತಿಸಿ ಇವರಿಗೆ ಕೃವಿವಿ, ಬೆಂಗಳೂರು ತನ್ನ 58ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗುತ್ತಿದೆ ಎಂದು ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ಪತ್ರಿಕಾ ಗೋಷ್ಠಿ ಯಲ್ಲಿ ತಿಳಿಸಲಾಯಿತು.

ಪ್ರೆಸ್ ಕ್ಲಬ್ ಆಫ್ ಬೆಂಗಳೂರ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿ ಯಲ್ಲಿ ಡಾ.ವಿ.ಎಲ್.  ಮಧುಪ್ರಸಾದ್ – ವಿಸ್ತರಣಾ ನಿರ್ದೇಶಕರು, ಯುಎಎಸ್, ಜಿಕೆವಿಕೆ, ಬೆಂಗಳೂರು,ಡಾ.ಎಸ್.ವಿ.  ಸುರೇಶ -ಉಪಕುಲಪತಿಗಳು, ಯುಎಎಸ್, ಜಿಕೆವಿಕೆ, ಬೆಂಗಳೂರು,ಡಾ.ಕೆ.ಸಿ.  ನಾರಾಯಣಸ್ವಾಮಿ – ಶಿಕ್ಷಣ ನಿರ್ದೇಶಕರು ಮತ್ತು ಡಾ.ಬಸವೇಗೌಡ -ರಿಜಿಸ್ಟ್ರಾರ್ ರವರುಗಳು ಉಪಸ್ಥಿತರಿದ್ದರು.

City Today News 9341997936

Leave a comment

This site uses Akismet to reduce spam. Learn how your comment data is processed.