ಕರ್ನಾಟಕ ಇತಿಹಾಸ ಪರಿಷತ್ತಿನ 34ನೇ ವಾರ್ಷಿಕ ಮಹಾ ಅಧಿವೇಶನ

ಕರ್ನಾಟಕ ಇತಿಹಾಸ ಪರಿಷತ್ತಿನ 34ನೇ ವಾರ್ಷಿಕ ಮಹಾ ಅಧಿವೇಶನ

ಬೆಂಗಳೂರಿನ ಸರ್ಕಾರಿ ಕಲಾ ಕಾಲೇಜಿನ ಬಾಪೂಜಿ ಸಭಾಂಗಣದಲ್ಲಿ ಮಾರ್ಚ್ 15. 16 ಹಾಗೂ 17ರಂದು ದೆಹಲಿಯ ಭಾರತೀಯ ಇತಿಹಾಸ ಅನುಸಂಧಾನ ಪರಿಷತ್ತು ಹಾಗೂ ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆ – ಇವರ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಇತಿಹಾಸ ಪರಿಷತ್ತಿನ 34ನೇ ವಾರ್ಷಿಕ ಮಹಾಧಿವೇಶನವನ್ನು ಏರ್ಪಡಿಸಲಾಗಿದೆ.

ಖ್ಯಾತ ಸಾಹಿತಿಗಳು ಮತ್ತು ಸಂಸ್ಕೃತಿ ಚಿಂತಕರಾದ ಪ್ರೊ. ಬರಗೂರು ರಾಮಚಂದ್ರಪ್ಪ ಅವರು ಅಧಿವೇಶನವನ್ನು ಉದ್ಘಾಟಿಸುವರು. ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್, ಶಾಸಕರಾದ ಶ್ರೀ ರಿಜ್ವಾನ್ ಅರ್ಷದ್, ಶಾಸಕರಾದ ಶ್ರೀ ಪುಟ್ಟಣ್ಣ ಮತ್ತು ಶ್ರೀ ಎನ್. ಶ್ರೀನಿವಾಸ್, ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರಾದ ಶ್ರೀ ಜಗದೀಶ್ ಹಾಗೂ ಇತರರು ಮುಖ್ಯ ಅತಿಥಿಗಳಾಗಿ ಆಗಮಿಸುವರು. ಬೆಂಗಳೂರು ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ವಿಶ್ರಾಂತ ಪ್ರಾಧ್ಯಾಪಕರಾದ ಪ್ರೊ. ಅಶ್ವತ್ಥನಾರಾಯಣ ಅವರು ಸಮ್ಮೇಳನದ ಸರ್ವಾಧ್ಯಕ್ಷರಾಗಿರುತ್ತಾರೆ. ಮೂರು ದಿನಗಳ ಕಾಲ ನಡೆಯುವ ಮಹಾ ಅಧಿವೇಶನದಲ್ಲಿ ರಾಷ್ಟ್ರಮಟ್ಟದ ವಿದ್ವಾಂಸರು, ಸಂಶೋಧಕರು, ಇತಿಹಾಸ ತಜ್ಞರು ಪ್ರಬಂಧಗಳನ್ನು ಮಂಡಿಸುವರು. ಕಲಬುರ್ಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ವಿಶ್ರಾಂತ ಸಮ ಕುಲಪತಿಗಳಾದ ಪ್ರೊ. ಎಸ್. ಚಂದ್ರಶೇಖರ್ ಅವರು ಸಮಾರೋಪ ಭಾಷಣ ಮಾಡುವರು ಎಂದು ಪತ್ರಿಕಾ ಗೋಷ್ಠಿ ಯಲ್ಲಿ ತಿಳಿಸಿದರು.

City Today News 9341997936

Leave a comment

This site uses Akismet to reduce spam. Learn how your comment data is processed.