ಎನ್.ಡಿ.ಎ ಮೈತ್ರಿ ಕೂಟಕ್ಕೆ (ಬಿ.ಜೆ.ಪಿ. ಪಕ್ಷಕ್ಕೆ) ಅಖಿಲ ಭಾರತ ವಿಶ್ವಕರ್ಮ ಮಹಾ ಸಂಘದ ಸಂಘಟನೆಯ ಬೆಂಬಲ

ಎನ್.ಡಿ.ಎ ಮೈತ್ರಿ ಕೂಟಕ್ಕೆ (ಬಿ.ಜೆ.ಪಿ. ಪಕ್ಷಕ್ಕೆ) ನಮ್ಮ ಸಂಘಟನೆಯ ಬೆಂಬಲ ನೀಡುತ್ತಿರುವ ಬಗ್ಗೆ ಮಾಧ್ಯಮ ಪ್ರಕಟಣೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಡಾ॥ ಜಯಂತ್ ಕೆ.ಎಂ. ದಂತವೈದ್ಯರು ಆದ ನಾನು ಅಖಿಲ ಭಾರತ ವಿಶ್ವಕರ್ಮ ಮಹಾ ಸಂಘದ ರಾಷ್ಟ್ರೀಯ ಅಧ್ಯಕ್ಷನಾಗಿ ಈ ದಿನ ನಮ್ಮ ಸಮಾಜದ ಹಿತದೃಷ್ಟಿ ಎಂದರೆ ನಮ್ಮ ವಿಶ್ವಕರ್ಮ ಸಮಾಜವು ರಾಜಕೀಯ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಕಾರಣ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಜಿಯವರು ನಮ್ಮ ಸಮಾಜವನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ನಮ್ಮ ಸಮಾಜಕ್ಕೆ ಬೆಂಬಲ ನೀಡುತ್ತಾರೆಂಬ ನಂಬಿಕೆ ಇಂದ ನಮ್ಮ ಸಂಘಟನೆ ಬೆಂಬಲವನ್ನು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ನೀಡುವ ತೀರ್ಮಾನ ತೆಗೆದುಕೊಂಡಿದ್ದೇವೆ.

ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜಿಯವರು ವಿಶ್ವಕರ್ಮ ಸಮ್ಮಾನ್ ಯೋಜನೆಯನ್ನು ಕೊಡುವ ಮುಖಾಂತರ ನಮ್ಮ ಸಮಾಜಕ್ಕೆ ಮನ್ನಣೆ ನೀಡಿದ್ದು, ಇದರಿಂದ ನಮ್ಮ ಸಮಾಜದ ಕಾಯಕವನ್ನು ಎತ್ತಿ ಹಿಡಿಯುವ ಕೆಲಸ ಮಾಡಿರುತ್ತಾರೆ.

ಅಯೋಧ್ಯ ಶ್ರೀರಾಮನ ವಿಗ್ರಹವನ್ನು ಕೆತ್ತನೆ ಮಾಡಲು ನಮ್ಮ ಸಮಾಜದ ಶಿಲ್ಪಿ ಅರುಣ್ ಯೋಗಿರಾಜ್ ರವರಿಗೆ ಅವಕಾಶ ನೀಡುವ ಮುಖಾಂತರ ನಮ್ಮ ಸಮಾಜದ ಕೀರ್ತಿಯನ್ನು ರಾಷ್ಟ್ರ ಹಾಗೂ ವಿಶ್ವಕ್ಕೆ ತೋರಿಸುವಲ್ಲಿ ಮೋದಿಜಿರವರ ಸಹಕಾರ ಹೆಚ್ಚಿರುವ ಕಾರಣ ನಮ್ಮ ಸಮಾಜವು ಬಿ.ಜೆ.ಪಿ. ಪಕ್ಷಕ್ಕೆ ಲೋಕಸಭಾ ಚುನಾವಣೆಯಲ್ಲಿ ಬೆಂಬಲ ನೀಡುವ ತೀರ್ಮಾನ ಮಾಡಿರುತ್ತಾರೆ.

ನಮ್ಮ ಸಮಾಜದ ಬಂಧುಗಳಿಗೆ ಮಾಧ್ಯಮದ ಮುಖಾಂತರ ತಿಳಿಸುವುದೇನೆಂದರೆ, ಪ್ರಧಾನ ಮಂತ್ರಿಗಳಾದ ಮಾನ್ಯ ಶ್ರೀ ನರೇಂದ್ರ ಮೋದಿಜಿಯವರು ನಮ್ಮ ಸಮಾಜಕ್ಕೆ ನೀಡಿರುವ ಎಲ್ಲಾ ಸಹಕಾರಗಳಿಗು, ಮನ್ನಿಸಿ ಅತಿ ಹೆಚ್ಚು ಮತಗಳನ್ನು ನೀಡುವ ಮುಖಾಂತರ (ಎನ್.ಡಿ.ಎ) ಬಿ.ಜೆ.ಪಿ ಪಕ್ಷದ ಎಲ್ಲಾ ಅಭ್ಯರ್ಥಿಗಳ ಗೆಲುವಿಗೆ ಸಹಕರಿಸಬೇಕೆಂದು ಕೋರಿಕೊಳ್ಳುತ್ತೇನೆ ಎಂದು ಡಾ॥ ಜಯಂತ್ ಕೆ.ಎಂ. ಬಿ.ಡಿ.ಎಸ್. ಎಂ.ಬಿ.ಎ ರಾಷ್ಟ್ರಾಧ್ಯಕ್ಷರು, ಅಖಿಲ ಭಾರತ ವಿಶ್ವಕರ್ಮ ಮಹಾಸಂಘ, ಮೈಸೂರು, ರವರು ಪ್ರೆಸ್ ಕ್ಲಬ್ ಆಫ್ ಬೆಂಗಳೂರ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿ ಯಲ್ಲಿ ತಿಳಿಸಿದರು.

City Today News 9341997936

Leave a comment

This site uses Akismet to reduce spam. Learn how your comment data is processed.