
ಬೆಂಗಳೂರು ಜೂನ್3; ಇದೇ ಹದಿಮೂರರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಈಗಾಗಲೇ ಬಿಡುಗಡೆ ಗೊಳಿಸಿರುವ ಬೆನ್ನಲ್ಲೇ ಸಮುದಾಯ ಪ್ರಾತಿನಿದ್ಯ ಕುರಿತಂತೆ ಅಸಮಾಧಾನ ಭುಗಿಲೆದ್ದಿದೆ. ಕಾಂಗ್ರೆಸ್ ನಲ್ಲಿ ಕ್ರೈಸ್ತ ಸಮುದಾಯದ ಕೋಟಾದಲ್ಲಿ ಕರಾವಳಿ ಭಾಗದ ಐವಾನ್ ಡಿಸೋಜಾ ಅವರನ್ನು ಆಯ್ಕೆ ಮಾಡಲಾಗಿದ್ದು, ಬೆಂಗಳೂರು ಭಾಗದ ಕ್ರೈಸ್ತ ಬಾಂಧವರು ಪಕ್ಷದ ವರಿಷ್ಢರ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಳೆದ ಅನೇಕ ವರ್ಷಗಳಿಂದ ಕರಾವಳಿ ಮತ್ತು ಕೊಡಗು ಭಾಗದ ಕ್ರೈಸ್ತ ಸಮುದಾಯದವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿರುತ್ತದೆ,ಆದರೆ ಅದಕ್ಕಿಂತ ಐದು ಪಟ್ಟು ಹೆಚ್ಚು ಪ್ರಮಾಣದ ಜನಸಂಖ್ಯೆಯನ್ನು ಹೊಂದಿರುವ ಬೆಂಗಳೂರು ಭಾಗದ ಕ್ರೈಸ್ತ ಸಮುದಾಯದವರನ್ನು ಕಡೆಗಣಿಸಲಾಗಿರುತ್ತದೆ.
ಕಳೆದ ಬಾರಿಯೂ ಮಂಗಳೂರಿನ ಐವಾನ್ ಡಿಸೋಜ ಅವರನ್ನು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆ ಮಾಡಲಾಗಿತ್ತು, ಮತ್ತೆ ಅದೇ ಭಾಗದ ಐವಾನ್ ಡಿಸೋಜ ಅವರನ್ನು ನೇಮಕ ಮಾಡಿರುವುದು ಅಸಮಾಧಾನ ತಂದಿದೆ ಎಂದು ಕೆಪಿಸಿಸಿ ಮಾನವ ಹಕ್ಕುಗಳ ವಿಭಾಗದ ಉಪಾಧ್ಯಕ್ಷರು ಡಾ.ಯೂನಸ್ ಜೋನ್ಸ್ ಬೇಸರ ವ್ಯಕ್ತಪಡಿಸಿದ್ದಾರೆ.
ಎಸ್.ಎಂ. ಕೃಷ್ಣ, ಧರ್ಮಸಿಂಗ್ ಅವಧಿಯಲ್ಲಿ ಕೊಡಗು ಭಾಗದ ಟಿ.ಜಾನ್ ಅವರನ್ನು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆ ಮಾಡಲಾಗಿತ್ತು, ಅವರನ್ನು ಸಚಿವರನ್ನಾಗಿ ನೇಮಕ ಮಾಡಲಾಗಿತ್ತು, ಬೆಂಗಳೂರು ಭಾಗದಲ್ಲಿ ವಿಧಾನ ಸಭಾ ಸದಸ್ಯರಾಗಿರುವ ಸಚಿವರಾದ ಕೆ.ಜೆ.ಜಾರ್ಜ್ ಹೊರತು ಪಡಿಸಿದರೆ ಕ್ರೈಸ್ತ ಸಮುದಾಯದವರನ್ನು ಕಡೆಗಣಿಸಲಾಗಿದೆ, ಕಳೆದ ವಿಧಾನ ಸಭಾ,ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು, ಉತ್ತರ ಭಾಗದ ಕ್ರೈಸ್ತರು ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ.ಮುಂಬರುವ ಬಿಬಿಎಂಪಿ ಚುನಾವಣೆಯ ಹಿನ್ನಲೆಯಲ್ಲಿ ಕ್ರೈಸ್ತ ಸಮುದಾಯದವರಿಗೆ ಹಚ್ಚಿನ ಆದ್ಯತೆ ನೀಡುವುದು ಅಗತ್ಯವಾಗಿದೆ.ಇಲ್ಲವಾದರೆ ಕ್ರೈಸ್ತ ಸಮುದಾಯದ ವಿಶ್ವಾಸವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ಸಲಹೆ ನೀಡಿದ್ದಾರೆ.
City Today News 9341997936
