“www.ksoumysuru.ac.in” 3 KSOU Admission Portal ಅಧಿಕೃತ ವೆಬ್‌ ಸೈಟ್ ಅರ್ಜಿ ಭರ್ತಿ ಮಾಡಿ ನಂತರ ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ದಾಖಲಾತಿಗಳ ಪರಿಶೀಲನೆ ನಂತರ ಆನ್‌ಲೈನ್ ಮುಖಾಂತರ ಪ್ರವೇಶಾತಿ ಶುಲ್ಕ ಪಾವತಿಸಿ ಸಿದ್ದಪಾಠಗಳನ್ನು ಪಡೆಯಬಹುದು.



ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು “ಉನ್ನತ ಶಿಕ್ಷಣ ಎಲ್ಲರಿಗೂ ಎಲ್ಲೆಡೆ” ಎಂಬ ಧೈಯ ವಾಕ್ಯದೊಂದಿಗೆ 1996ರಲ್ಲಿ ಕರ್ನಾಟಕ ಸರ್ಕಾರದಿಂದ ಶಾಸನಬದ್ಧವಾಗಿ ಸ್ಥಾಪಿತವಾಗಿ ಕರ್ನಾಟಕದ ಸಾಂಸ್ಕೃತಿಕ ಅರಮನೆ ನಗರ ಮೈಸೂರಿನ ಕೇಂದ್ರ ಭಾಗದಲ್ಲಿ ಅತ್ಯಂತ ಸುಂದರವಾದ ಹಚ್ಚ ಹಸಿರಿನ ಪರಿಸರದಲ್ಲಿ ಸುಸಜ್ಜಿತವಾದ ಆಡಳಿತ ಭವನ, ಪರೀಕ್ಷಾ ಭವನ, ವಿಜ್ಞಾನ ಭವನ, ಗ್ರಂಥಾಲಯ, ವಿದ್ಯಾರ್ಥಿ ನಿಲಯಗಳನ್ನು ಒಳಗೊಂಡ “ಮುಕ್ತ ಗಂಗೋತ್ರಿ” ಎಂಬ ಹೆಸರಿನಲ್ಲಿ ವಿವಿಯು ನೆಲೆಗೊಂಡಿದೆ.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು “ಸ್ವಯಂ ಹಣಕಾಸು ವ್ಯವಸ್ಥೆಯನ್ನು” (Self Finance System) ಹೊಂದಿರುವ ಒಂದು ಸಂಸ್ಥೆಯಾಗಿದೆ. UGC ಇಂದಾಗಲೀ, ರಾಜ್ಯ ಸರ್ಕಾರದಿಂದಾಗಲೀ ಅಥವಾ ಇನ್ನಾವುದೇ ಮೂಲದಿಂದ ಅನುದಾನವಿಲ್ಲದೆ, ಪ್ರವೇಶಾತಿ, ಪರೀಕ್ಷಾ ಶುಲ್ಕದ ರೂಪದಲ್ಲಿ ವಿದ್ಯಾರ್ಥಿಗಳಿಂದ ಪಡೆಯುವ ಹಣದಿಂದಲೇ ವಿಶ್ವವಿದ್ಯಾನಿಲಯದ ಸಿಬ್ಬಂದಿಗಳ ವೇತನ ಸೌಲಭ್ಯ, ವಿ.ವಿ.ಯ ಅಭಿವೃದ್ಧಿ ಕಾರ್ಯಗಳನ್ನು ತನ್ನ ಸ್ವಂತ ಸಂಪಾದನೆಯಲ್ಲಿಯೇ ನಿರ್ವಹಿಸಿಕೊಂಡು ಬರುತ್ತಿದ್ದು, ಇದಾಗ್ಯೂ ವಿ.ವಿ.ಯು ಸಮಾಜಕ್ಕೆ ತನ್ನ ಕೈಲಾದ ಸೇವೆಯನ್ನು ಮಾಡಬೇಕೆಂಬ ಉದ್ದೇಶದಿಂದ ಕೆಲವು ಅವಶ್ಯಕ ವರ್ಗಗಳಿಗೆ ಶುಲ್ಕ ಭಾಗಶಃ/ಸಂಪೂರ್ಣ ವಿನಾಯಿತಿ ನೀಡುವಂತಹ ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದೆ.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಉನ್ನತ ಶಿಕ್ಷಣವನ್ನು ವ್ಯಾಪಕವಾಗಿ ವಿಸ್ತರಿಸುವ ದೃಷ್ಟಿಯಿಂದ ಬಹುಸಂಖ್ಯಾತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬೆಂಗಳೂರಿನಲ್ಲಿ 06 (ಬಾಪೂಜಿನಗರ, ಮಲ್ಲೇಶ್ವರಂ, ಯಲಹಂಕ, ಮಡಿವಾಳ, ಕೆ.ಆರ್.ಪುರಂ, ಸುಂಕದಕಟ್ಟೆ.) ಪ್ರಾದೇಶಿಕ ಕೇಂದ್ರಗಳು ಸೇರಿದಂತೆ ರಾಜ್ಯದಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ಒಟ್ಟು 36 ಪ್ರಾದೇಶಿಕ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ, ಜೊತೆಗೆ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿಯೇ ಪರೀಕ್ಷಾ ಕೇಂದ್ರಗಳು, ವಾರಾಂತ್ಯ ಸಂಪರ್ಕ ತರಗತಿಗಳು ಮತ್ತು ವಿಜ್ಞಾನ ವಿಷಯಗಳಿಗೆ ಪ್ರಾಯೋಗಿಕ ತರಗತಿಗಳು ನಡೆಯುತ್ತವೆ.

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ರಾಜ್ಯಾದ್ಯಾಂತ 150 ಕಲಿಕಾರ್ಥಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಿ ವಿದ್ಯಾರ್ಥಿ ಸ್ನೇಹಿ ಉನ್ನತ ಶಿಕ್ಷಣವನ್ನು ದೂರ ಶಿಕ್ಷಣದಲ್ಲಿ ಒದಗಿಸುತ್ತಾ 25 ವರ್ಷಗಳ ಬೆಳ್ಳಿ ಹಬ್ಬದ ಸಂಭ್ರಮಾಚರಣೆಯನ್ನು ಆಚರಿಸಿ ಮುನ್ನಡೆಯುತ್ತಿದೆ. 18 ವರ್ಷದಿಂದ 80 ವರ್ಷ ವಯೋಮಾನದವರೆಗಿನ ಲಕ್ಷಾಂತರ ಮಂದಿಗೆ ವಿದ್ಯೆ ನೀಡಿ, ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಉನ್ನತ ಶಿಕ್ಷಣ ನೀಡುತ್ತಾ ಬರುತ್ತಿದೆ.

10+2/ಪದವಿ ಅನ್ನು ಮುಗಿಸಿ ನಂತರ ತಮ್ಮ ವೈಯಕ್ತಿಕ, ಕೌಟುಂಬಿಕ ಕಾರಣಗಳಿಂದಾಗಿ ತಮ್ಮ ಉನ್ನತ ವಿದ್ಯಾಭ್ಯಾಸದ ಕನಸನ್ನು ಅರ್ಧದಲ್ಲೇ ಮೊಟಕುಗೊಳಿಸಿ ಕೊಂಡಿರುವಂತಹ, ಹಾಗೇಯೇ ಗೃಹಿಣಿಯರು, ಸರ್ಕಾರಿ, ಅರೆ ಸರ್ಕಾರಿ, ಖಾಸಗಿ ಕಂಪನಿಗಳಲ್ಲಿ, ಪ್ಯಾಕ್ಟರಿಗಳಲ್ಲಿ ನೌಕರರಾಗಿ/ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸುತ್ತಿರುವವರು ಕರಾಮುವಿಯಲ್ಲಿ ತಮ್ಮ ಉನ್ನತ(ಸ್ನಾತಕ/ಸ್ನಾತಕೋತ್ತರ) ವಿದ್ಯಾಭ್ಯಾಸದ ಕನಸನ್ನು ನನಸು ಮಾಡಿಕೊಳ್ಳುತ್ತಿದ್ದಾರೆ.

> ದೂರ ಶಿಕ್ಷಣ ನೀಡುವ ಕರ್ನಾಟಕ ರಾಜ್ಯದ ಏಕ ಮಾತ್ರ ವಿಶ್ವವಿದ್ಯಾನಿಲಯ:

ಕರ್ನಾಟಕ ರಾಜ್ಯದಲ್ಲಿ ಕ.ರಾ.ಮು.ವಿ. ಹೊರತುಪಡಿಸಿ ಬೇರಾವುದೇ ಸಾಂಪ್ರದಾಯಿಕ ವಿ.ವಿ.ಗಳು ದೂರ ಮತ್ತು ಮುಕ್ತ ಶಿಕ್ಷಣ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲವೆಂದು ಕರ್ನಾಟಕ ಘನ ಸರ್ಕಾರವು ದಿನಾಂಕ: 30.12.2020ರ ಕರ್ನಾಟಕ ರಾಜ್ಯ ಪತ್ರದಲ್ಲಿನ ಅಧಿಸೂಚನೆ ಸಂಖ್ಯೆ: ಸಂವ್ಯಶಾಇ43 ಶಾಸನದಲ್ಲಿ ಅಧಿಕೃತವಾಗಿ ಆದೇಶಿಸಿದ್ದು, ಈ ಆದೇಶದನ್ವಯ ಪ್ರಸ್ತುತ ರಾಜ್ಯದಲ್ಲಿ ಕರಾಮುವಿಯು ದೂರಶಿಕ್ಷಣ ನೀಡುವ ರಾಜ್ಯದ ಏಕೈಕ ವಿಶ್ವವಿದ್ಯಾನಿಲಯವಾಗಿರುತ್ತದೆ.

> ಕ.ರಾ.ಮು.ವಿ. ಶಿಕ್ಷಣಕ್ರಮಗಳಿಗೆ ಯು.ಜಿ.ಸಿ. ಮಾನ್ಯತೆ: ಕರಾಮುವಿಯು UGC-DEB ಪತ್ರ ಸಂಖ್ಯೆ 4-1/2023 (DEB- III) (ODL) 2:02.11.2023 & F No: 04-1/2023 (DEB-III), 20:04-12-2023, 5 & ಮಾನ್ಯತೆ ಹೊಂದಿದ ಶಿಕ್ಷಣ ಕಾರ್ಯಕ್ರಮಗಳಿಗೆ ಮಾತ್ರ ಪ್ರವೇಶಾತಿ ನೀಡುತ್ತಿದೆ.

> ಕರಾಮುವಿ ಶೈಕ್ಷಣಿಕ ಗುಣಮಟ್ಟಕ್ಕೆ ನ್ಯಾಕ್ ನಿಂದ A+ ಗ್ರೇಡ್ ದೊರೆತಿದೆ (3.35/5).

> ಸಾಂಪ್ರದಾಯಿಕ ವಿ.ವಿ.ಗಳು ನೀಡುವ ಪದವಿಗಳು ಮತ್ತು ಕರಾಮುವಿ ನೀಡುವ ಪದವಿಗಳು ಸಮಾನ ಅರ್ಹತೆ: .4.4. F. No.3-5/2022(DEB-III), 2:02.09.2022ថ ម ಮುಕ್ತ ವಿಶ್ವವಿದ್ಯಾನಿಲಯಗಳ ದೂರಶಿಕ್ಷಣದ ಪದವಿ ಸಾಂಪ್ರದಾಯಕ ವಿ.ವಿ.ಗಳು ನೀಡುವ ಶಿಕ್ಷಣ ಕ್ರಮಗಳಿಗೆ ಸಮಾನವಾಗಿರುತ್ತದೆ.

> ಏಕಕಾಲದಲ್ಲೇ ಎರಡು ಪದವಿ(ದ್ವಿ-ಪದವಿ). ಯುಜಿಸಿ ನಿಯಮಾವಳಿ ಪ್ರಕಾರ ಪೂರ್ಣಾವಧಿಯಲ್ಲಿ (ಭೌತಿಕ ಶಿಕ್ಷಣ) (Regular) ಒಂದು ಕೋರ್ಸ್ ಮತ್ತು ದೂರಶಿಕ್ಷಣದಲ್ಲಿ (Open University) ಇನ್ನೊಂದು ಕೋರ್ಸ್ ಅನ್ನು ಏಕಕಾಲದಲ್ಲೇ ಮಾಡಲು ಅವಕಾಶವಿರುತ್ತದೆ. (UGC Secretary letter No: D.O.No. 1-6/2007 (CPP-II) (New) : 13.04.2022)

> ಸಮಾಜದ ಕೆಲವು ಗಣ್ಯವ್ಯಕ್ತಿಗಳು/ಉನ್ನತ ಅಧಿಕಾರಿಗಳು ಕರಾಮುವಿಯ ವಿದ್ಯಾರ್ಥಿಗಳಾಗಿರುತ್ತಾರೆ. ಕ.ರಾ.ಮು.ವಿ.ಯಲ್ಲಿ ಪದವಿ/ಸ್ನಾತಕೋತ್ತರ ಶಿಕ್ಷಣ ಪಡೆದ ಸಾವಿರಾರು ವಿದ್ಯಾರ್ಥಿಗಳು, ರಾಜ್ಯ, ಕೇಂದ್ರ ಸರ್ಕಾರದ ವಿವಿಧ ಶ್ರೇಣಿಯ ಸರ್ಕಾರಿ ಹುದ್ದೆ ಪಡೆದು ಕಾರ್ಯ ನಿರ್ವಹಿಸುತ್ತಿದ್ದಾರೆ. ಕೆ.ಎ.ಎಸ್., ಐ.ಎ.ಎಸ್., ಪೊಲೀಸ್ ಅಧಿಕಾರಿಗಳಾಗಿ, ಅಧ್ಯಾಪಕರಾಗಿ, ಶಿಕ್ಷಕರಾಗಿ ಕರಾಮುವಿಯ ವಿದ್ಯಾರ್ಥಿಗಳು ಆಯ್ಕೆಯಾಗುತ್ತಿದ್ದಾರೆ. ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ ಶಿವಕುಮಾರ್‌ರವರು, ಮಾನ್ಯ ವಿಧಾನ ಸಭಾಧ್ಯಕ್ಷರಾದ ಶ್ರೀ ಯು.ಟಿ. ಖಾದರ್‌ರವರು, ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್‌ರವರು, ಮಾನ್ಯ ಶಾಸಕರಾದ ಶ್ರೀಮತಿ ರೂಪಕಲಾರವರು, ಮಾಜಿ ಸಚಿವರಾದ ಶ್ರೀ ಸಿ.ಟಿ ರವಿರವರು ಮತ್ತು ಶ್ರೀಮತಿ ಉಮಾಶ್ರೀರವರು, ಮುಂತಾದವರು ಹಾಗೂ ಹಲವಾರು ಕೆ.ಎ.ಎಸ್., ಐ.ಎ.ಎಸ್., ಅಧಿಕಾರಿಗಳು, ನ್ಯಾಯಾಧೀಶರು ಕರಾಮುವಿಯ ವಿದ್ಯಾರ್ಥಿಗಳೆಂದು ಪರಿಚಯಿಸುವುದು ನಮಗೆ ಹೆಮ್ಮೆಯ ಸಂಗತಿಯಾಗಿರುತ್ತದೆ.

2024-25ರ ಜುಲೈ ಆವೃತ್ತಿಯ ಯುಜಿಸಿ ಅನುಮೋದಿತ 64+ODL ಕೋರ್ಸ್‌ಗಳ ಪ್ರವೇಶಾತಿ ಪ್ರಾರಂಭವಾಗಿದೆ:

ಪ್ರಸ್ತುತ 2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ಪ್ರವೇಶಾತಿಯು ದಿನಾಂಕ: 22.07.2024 ರಿಂದ ಪ್ರಾರಂಭವಾಗಿದ್ದು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2024-25ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯಲ್ಲಿ ಯುಜಿಸಿ ಅನುಮೋದಿತ ಸ್ನಾತಕ/ಸ್ನಾತಕೋತ್ತರ ಕೋರ್ಸ್‌ಗಳಾದ ಬಿ.ಎ., ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಎಸ್.ಡಬ್ಲ್ಯು, ಬಿ.ಎಲ್.ಐ.ಎಸ್ಸಿ., ಬಿ.ಎಡ್.(ಸಿ.ಇ.ಟಿ. ಮುಖಾಂತರ) ಹಾಗೂ ಬಿ.ಎಸ್ಸಿ., ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಎಲ್.ಐ.ಎಸ್ಸಿ.,

ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ, ಎಂ.ಎಸ್ಸಿ., ಎಂ.ಬಿ.ಎ., ಪಿ.ಜಿ. ಡಿಪ್ಲೋಮಾ ಪ್ರೋಗ್ರಾಮ್ಸ್., ಡಿಪ್ಲೋಮಾ ಪ್ರೋಗ್ರಾಮ್ಸ್..

ಸರ್ಟಿಫಿಕೇಟ್ ಪ್ರೋಗ್ರಾಮ್ಸ್ ಗಳಿಗೆ ಪ್ರವೇಶಾತಿ ಪ್ರಕ್ರಿಯೆಗಳು ಪ್ರಾರಂಭಗೊಂಡಿರುತ್ತವೆ.

ಕರಾಮುವಿ ಬೆಂಗಳೂರಿನಲ್ಲಿ 06 ಪ್ರಾದೇಶಿಕ ಕೇಂದ್ರಗಳಲ್ಲಿ ಪ್ರವೇಶಾತಿಯನ್ನು ಮಾಡಿಕೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ತಿಳಿಸುವುದೇನೆಂದರೆ ಕರಾಮುವಿಯ “www.ksoumysuru.ac.in” 3 KSOU Admission Portal ಅಧಿಕೃತ ವೆಬ್‌ ಸೈಟ್ ಅರ್ಜಿ ಭರ್ತಿ ಮಾಡಿ ನಂತರ ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ದಾಖಲಾತಿಗಳ ಪರಿಶೀಲನೆ ನಂತರ ಆನ್‌ಲೈನ್ ಮುಖಾಂತರ ಪ್ರವೇಶಾತಿ ಶುಲ್ಕ ಪಾವತಿಸಿ ಸಿದ್ದಪಾಠಗಳನ್ನು ಪಡೆಯಬಹುದು.

➤ M.B.A, M.C.A. & M.Sc Data Science / AICTE ជ ដា ដ໖ (F.No: South: West/2023-24/1-43337817229, Dated: 10.06.2023).

ಶಿಕ್ಷಣ ಕ್ರಮವು NCTE ০

ដ (F.No:SRC/NCTE/A0S00319/B.ED

ODL/KA/2023/143893, dated: 12.12.2023).

> ಲ್ಯಾಟರಲ್ ಪ್ರವೇಶ ಅಥವಾ ನೇರ ಪ್ರವೇಶ:

ಇತರೆ ಕಾಲೇಜಿನಲ್ಲಿ ಅಥವಾ Regular ಆಗಿ ಓದುತ್ತಿರುವ ವಿದ್ಯಾರ್ಥಿಗಳು ಮೊದಲ ವರ್ಷ ವ್ಯಾಸಾಂಗ ಮಾಡಿ ಕಾರಣಾಂತರಗಳಿಂದ ಓದಲು ಆಗದಿದ್ದರೆ ಅಥವಾ Regular ಆಗಿ ವಿದ್ಯಾಭ್ಯಾಸ ಮುಂದುವರೆಸಲು ಸಾಧ್ಯವಾಗದಿದ್ದರೆ, ಅಂತಹ ವಿದ್ಯಾರ್ಥಿಗಳು ಆರ್ಹತಾ ಮಾನದಂಡಗಳನ್ನು ಪೂರೈಸಿ 2ನೇ ಮತ್ತು 3ನೇ ವರ್ಷಕ್ಕೆ ಮುಕ್ತ ವಿವಿಯಲ್ಲಿ ಲ್ಯಾಟರಲ್ ಪ್ರವೇಶ ಅಥವಾ ನೇರ ಪ್ರವೇಶ ಆಯ್ಕೆ ಮಾಡಿಕೊಂಡು ವಿದ್ಯಾಭ್ಯಾಸ ಮುಂದುವರೆಸಬಹುದು.

> 10 ಆನ್‌ಲೈನ್ ಕೋರ್ಸ್‌ಗಳು: ಬಿ.ಎ-ಸಾಮಾನ್ಯ (ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ), ಬಿ.ಕಾಂ., ಎಂ.ಎ.-ಕನ್ನಡ, ಇಂಗ್ಲಿಷ್, ಹಿಂದಿ, ಸಂಸ್ಕೃತ, ಅರ್ಥಶಾಸ್ತ್ರ, ಎಂ.ಕಾಂ., ಎಂ.ಬಿ.ಎ., ಎಂ.ಎಸ್ಸಿ.-ಗಣಿತಶಾಸ್ತ್ರ., ಸಂಪೂರ್ಣ ಆನ್‌ಲೈನ್ ಕೋರ್ಸ್‌ಗಳು ಇರುತ್ತವೆ.

ಕ.ರಾ.ಮು.ವಿ.ಯು ಪ್ರವೇಶಾತಿಯಲ್ಲಿ ಒದಗಿಸಿರುವ ರಿಯಾಯಿತಿಗಳು

> ಬೋಧನಾ ಶುಲ್ಕದಲ್ಲಿ ಶೇ10 ರಷ್ಟುರಿಯಾಯಿತಿ:

• ಬಿ.ಪಿ.ಎಲ್. ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ.

• ಡಿಫೆನ್ಸ್ ಹಾಗೂ ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ.

• ಆಟೋ/ಕ್ಯಾಬ್ ಚಾಲಕರು ಮತ್ತು ಅವರ ಪತಿ/ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ.

• KSRTC/BMTC/NWKSRTC/KKRTC 0.

> ಪೂರ್ಣ ಶುಲ್ಕವಿನಾಯಿತಿ:

• ತೃತೀಯ ಲಿಂಗದ (Transgender) ವಿದ್ಯಾರ್ಥಿಗಳಿಗೆ.

ದೃಷ್ಟಿಹೀನ ವಿದ್ಯಾರ್ಥಿಗಳಿಗೆ (B.Ed/MBA ಹೊರತುಪಡಿಸಿ).

• ಕೋವಿಡ್-19ರ ಸಾಂಕ್ರಾಮಿಕ ರೋಗದಿಂದ ಮೃತರಾದ ಆ ತಂದೆ/ತಾಯಿಯ ಮಕ್ಕಳಿಗೆ ಅವರು ಅರ್ಹತೆವಿರುವ ಕೋರ್ಸಿಗೆ ಉಚಿತ ಪ್ರವೇಶಾತಿ ನೀಡಲಾಗುವುದು.

ವಿಶೇಷ ಸೂಚನೆ:

ಕರಾಮುವಿಯಲ್ಲಿ ಪ್ರವೇಶಾತಿ ಪಡೆಯುವ SC/ST/OBC ವಿದ್ಯಾರ್ಥಿಗಳಿಗೂ ಅಗತ್ಯ ದಾಖಲೆಗಳನ್ನು ಒದಗಿಸಿದಲ್ಲಿ SSP ಮುಖಾಂತರ ವಿದ್ಯಾರ್ಥಿ ವೇತನವಿರುತ್ತದೆ ಅಥವಾ ಪೂರ್ಣಶುಲ್ಕ ಮರುಭರಿಕೆಯಾಗುತ್ತದೆ.

ಕ.ರಾ.ಮು.ವಿ.ಯ ವೈಶಿಷ್ಟ್ಯತೆಗಳು/ಸೌಲಭ್ಯಗಳು

• ಪ್ರತಿ ಜಿಲ್ಲೆಯಲ್ಲಿ ಪರೀಕ್ಷಾ ಕೇಂದ್ರ, ಪ್ರತಿ ತಾಲೂಕಿನಲ್ಲಿ ಅಧ್ಯಯನ ಕೇಂದ್ರಗಳ ಸ್ಥಾಪನೆ.

ಎಲ್ಲಾ ಶೈಕ್ಷಣಿಕ ಕ್ರಮಗಳ ಕಲಿಕಾ ಅಧ್ಯಯನ ಸಾಮಗ್ರಿ ಡಿಜಿಟಲೀಕರಣ, ಪ್ರತ್ಯೇಕ “KSOU ACADEMIC PLAT FORM App” ನ ಮುಖಾಂತರ ವಿದ್ಯಾರ್ಥಿಗಳು ತಮ್ಮ ಕೋರ್ಸ್‌ಗೆ ಸಂಬಂಧ ಪಟ್ಟ LESSON SOFT COPY, ASSIGNMENT UPLOAD, LIVE CLASSES, VERTUAL CLASSES, OLD QUESTION PAPER, EXAMINATION FEE, ಹೀಗೆ ಎಲ್ಲಾ ಇನ್ನಿತರ ಮಾಹಿತಿಗಳನ್ನು ಒಂದೇ App ನಲ್ಲಿ ಒದಗಿಸಲಾಗಿದೆ.

• ಆನ್‌ಲೈನ್‌ನಲ್ಲಿ ವಿದ್ಯಾರ್ಥಿಗಳು ಬಿಡುವಿನ ಸಮಯದಲ್ಲಿ ಅಭ್ಯಸಿಸಲು ಅನುಕೂಲವಾಗುವಂತೆ ಕರಾಮುವಿ ದೃಶ್ಯವಾಹಿನಿ ಎಂಬ ಹೆಸರಿನ ಯೂಟ್ಯೂಬ್ ಚಾನೆಲ್ ಕಾರ್ಯನಿರ್ವಹಿಸುತ್ತಿದೆ, ಇದರಲ್ಲಿ ಅಧ್ಯಾಪಕರ ಬೋಧನಾ ವಿಡಿಯೋಗಳು ವಿದ್ಯಾರ್ಥಿಗಳಿಗೆ ಲಭ್ಯವಿರುತ್ತವೆ.

• ಕೌಶಲ್ಯಾಭಿವೃದ್ಧಿಗೆ ಪ್ರತ್ಯೇಕ ವಿಭಾಗ ರಚನೆ, ರಾಜ್ಯದ ಎಲ್ಲೆಡೆ ಕೌಶಲ್ಯಾಭಿವೃದ್ಧಿ ತರಬೇತಿ ಶಿಬಿರಗಳ ಆಯೋಜನೆ.

• ಕ.ರಾ.ಮು.ವಿ. ‘ಪ್ರಸಾರಾಂಗ, ರೇಡಿಯೋ ಸ್ಥಾಪನೆ.

• ಕ.ರಾ.ಮು.ವಿ. ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಮೂಲಕ ಅತ್ಯಂತ ಕನಿಷ್ಠ ಶುಲ್ಕದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳು ವಸತಿಯೊಂದಿಗೆ ತರಬೇತಿ ನೀಡಲಾಗುತ್ತಿದೆ.

• ಡಿಜಿಟಲ್ ಮೌಲ್ಯಮಾಪನದ ಮೂಲಕ ಗುಣಮಟ್ಟದ ಮೌಲ್ಯಮಾಪನ, ಶೀಘ್ರ ಫಲಿತಾಂಶ ಪ್ರಕಟಣೆಗೆ ಅನುಕೂಲ ಮಾಡಲಾಗಿದೆ.

• ಕರಾಮುವಿಯ ವಾರ್ಷಿಕ/ಸೆಮಿಸ್ಟರ್ ಪರೀಕ್ಷೆಗಳು ಬೆಂಗಳೂರಿನ ಅಧ್ಯಯನ ಕೇಂದ್ರದಲ್ಲಿಯೇ ನಡೆಯುತ್ತವೆ. ವಾರಾಂತ್ಯ ಸಂಪರ್ಕ ತರಗತಿಗಳನ್ನು ಮತ್ತು ವಿಜ್ಞಾನ ವಿಷಯಗಳಿಗೆ ಪ್ರಯೋಗಿಕ ತರಗತಿಗಳನ್ನು ಕಲಿಕಾರ್ಥಿ ಸಹಾಯ ಕೇಂದ್ರದಲ್ಲಿ ನಡೆಸಲು ಕ್ರಮವಹಿಸಲಾಗುವುದು.

• ವಿದ್ಯಾರ್ಥಿಗಳಿಗೆ ಗ್ರಂಥಾಲಯ ವ್ಯವಸ್ಥೆ ಇರುತ್ತದೆ.

ವಿದ್ಯಾರ್ಥಿಗಳ ಗೊಂದಲಗಳನ್ನು ಬಗೆಹರಿಸುವ ಸಲುವಾಗಿ ವಿಭಾಗವಾರು ಸಹಾಯವಾಣಿಗಳನ್ನು ಸ್ಥಾಪಿಸಲಾಗಿದೆ.

• ಅಂಕಪಟ್ಟಿಗಳು ವಿದ್ಯಾರ್ಥಿಗಳ ವಿಳಾಸಕ್ಕೆ ರಿಜಿಸ್ಟರ್ ಅಂಚೆಯ ಮೂಲಕ ಕಳುಹಿಸಲಾಗುವುದು.

ರಾಜ್ಯಾದ್ಯಾಂತ 50ಕ್ಕೂ ಹೆಚ್ಚು ಪರೀಕ್ಷಾ ಕೇಂದ್ರಗಳಿವೆ.

ಕರ್ನಾಟಕದಾದ್ಯಂತ ವಿದ್ಯಾರ್ಥಿಗಳು/ಆಸಕ್ತರು ಹತ್ತಿರದ ಜಿಲ್ಲಾ ಪ್ರಾದೇಶಿಕ ಕೇಂದ್ರಗಳಿಗೂ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಗೌರವಾನ್ವಿತ ಪ್ರೊ. ಶರಣಪ್ಪ, ವಿ ಹಲಸೆ, ರವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಪತ್ರಿಕಾಗೋಷ್ಠಿಯಲ್ಲಿ ಶ್ರೀಮತಿ. ಪ್ರಾಚಿ ಗೌಡ, ಕರಾಮುವಿ ವ್ಯವಸ್ಥಾಪನಾ ಮಂಡಳಿ ಸದಸ್ಯರು ಹಾಗೂ ಮಾನ್ಯ ಡೀನ್ (ಅಧ್ಯಯನ ಕೇಂದ್ರ) ರವರಾದ ಪ್ರೊ.ಎಂ. ರಾಮನಾಥಂ ನಾಯ್ಡು., ಶ್ರೀ ದಿಲೀಪ ಡಿ, ಪ್ರಾದೇಶಿಕ ನಿರ್ದೇಶಕರು, ಬಾಪೂಜಿನಗರ, ಬೆಂಗಳೂರು, ಶ್ರೀ ರೋಹಿತ್ ಹೆಚ್.ಎಸ್., ಪ್ರಾದೇಶಿಕ ನಿರ್ದೇಶಕರು, ಯಲಹಂಕ, ಬೆಂಗಳೂರು, ಇವರ ಜೊತೆಗೆ ಬೆಂಗಳೂರು ಹಾಗೂ ಬೆಂಗಳೂರು ವಲಯ ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಪ್ರಾದೇಶಿಕ ಕೇಂದ್ರಗಳ ಪ್ರಾದೇಶಿಕ ನಿರ್ದೇಶಕರುಗಳು ಹಾಜರಿದ್ದರು.

City Today News 9341997936

Leave a comment

This site uses Akismet to reduce spam. Learn how your comment data is processed.