ದಬ್ಬೇಘಟ್ಟ ಹೋಬಳಿ ಮಟ್ಟದ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ  ಎಲ್.ಮಂಜಯ್ಯಗೌಡ ಆಯ್ಕೆ

ತುರುವೇಕೆರೆ ತಾಲ್ಲೂಕಿನ ದಬ್ಬೇಘಟ್ಟ ಹೋಬಳಿ ಮಟ್ಟದ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾದ  ಎಲ್.ಮಂಜಯ್ಯಗೌಡರನ್ನು  ಹೂ ಗುಚ್ಛನೀಡಿ ಆಯ್ಕೆ ಸಮ್ಮೇಳನಕ್ಕೆ ಸ್ವಾಗತಿಸಲಾಯಿತು. ದಬ್ಬೇಘಟ್ಟ ಹೋಬಳಿ ಘಟಕದ ಅಧ್ಯಕ್ಷ  ಕೆ.ಟಿ.ಸಂಪತ್ತು, ಸೇರಿದಂತೆ ಗಣ್ಯರ ಇದ್ದರು.

ತುರುವೇಕೆರೆ: ತಾಲ್ಲೂಕಿನ ದಬ್ಬೇಘಟ್ಟ ಹೋಬಳಿ ಮಟ್ಟದ ಸಾಹಿತ್ಯ ಸಮ್ಮೇಳನ ನಡೆಸಲು ಅ.26ರಂದು ಉದ್ದೇಶಿಸಿರುವ ಹಿನ್ನೆಲೆಯಲ್ಲಿ ಲಕ್ಷ್ಮಿದೇವರಹಳ್ಳಿ ಗ್ರಾಮದ ಎಲ್.ಮಂಜಯ್ಯಗೌಡರಿಗೆ  ಹೂಗುಚ್ಛ ನೀಡುವ ಮೂಲಕ  ಸಾಂಪ್ರದಾಯಿಕವಾಗಿ ಸ್ವಾಗತ ಮಾಡಲಾಯಿತೆಂದು ದಬ್ಬೇಘಟ್ಟ ಸಾಹಿತ್ಯ ಪರಿಷತ್ತಿನ ಹೋಬಳಿ ಘಟಕದ ಅಧ್ಯಕ್ಷ  ಕೆ.ಟಿ.ಸಂಪತ್ತು ತಿಳಿಸಿದರು.



ಜಿಲ್ಲಾ ಕಸಾಪ ಅಧ್ಯಕ್ಷರ ನಿರ್ದೇಶನದ ಮೇರೆಗೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಹಾಗೂ ದಬ್ಬೇಘಟ್ಟ ಹೋಬಳಿ ಅಧ್ಯಕ್ಷರು, ಪದಾಧಿಕಾರಿಗಳು ಹೋಬಳಿಯ ಪಂಚಾಯಿತಿವಾರು ಸಭೆ ಸೇರಿ ಸಮೀಕ್ಷೆ ನಡೆಸಿ  ಅಧಿಕೃತವಾಗಿ ಸಮ್ಮೇಳನದ ಸರ್ವಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ.



ಸಮ್ಮೇಳನದ ಅಧ್ಯಕ್ಷರಾದ ಎಲ್.ಮಂಜಯ್ಯಗೌಡರು ತಾಲ್ಲೂಕಿನ ವಿವಿಧ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಕನ್ನಡ ಸಹ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದರು. ಅಲ್ಲದೆ ತಾಲ್ಲೂಕು ಕನ್ನಡ ಭಾಷಾ ಬೋಧಕರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿ, ನಿವೃತ್ತರಾಗಿದ್ದಾರೆ. ಇವರು, ಭಾಷೆ, ಸಾಹಿತ್ಯ, ಸಂಸ್ಕೃತಿ, ಸಂಘಟನಾ ಕಲೆಯಲ್ಲಿ ಹೆಚ್ಚು ಆಸಕ್ತಿಯುಳ್ಳವರಾಗಿದ್ದಾರೆ.



ದಬ್ಬೇಘಟ್ಟ ಗ್ರಾಮದ ಶ್ರೀ ಕಾಲಭೈರವೇಶ್ವರ ದೇವಾಲಯದ  ಆವರಣದಲ್ಲಿ ಶನಿವಾರ ಬೆಳಗ್ಗೆ 8ಕ್ಕೆ  ಸಮ್ಮೇಳನ ಪ್ರಾರಂಭವಾಗಿ ಅಂದೇ ಸಂಜೆ ಮುಕ್ತಾಯವಾಗಲಿದೆ. ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಸುಮ್ನೆ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಿದ್ದಾರೆ. ಶಾಸಕ ಎಂ.ಟಿ.ಕೃಷ್ಣಪ್ಪನವರು ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಎಸ್.ಜಿ.ಸಿದ್ದರಾಮಯ್ಯನವರು ಉದ್ಘಾಟನೆ ನೆರವೇರಿಸಲಿದ್ದಾರೆ. ಗಾಂಧೀ ಸೇವಾ ಪ್ರಶಸ್ತಿ ಪುರಸ್ಕೃತರಾದ ಪ್ರೊ.ಜಿ.ಬಿ.ಶಿವರಾಜ್ ಸಮಾರೋಪದಲ್ಲಿ ಮುಖ್ಯ ಉಪನ್ಯಾಸ ನೀಡಲಿದ್ದಾರೆ.
ಕೃಷಿ ಗೋಷ್ಠಿ ಮತ್ತು ಕವಿ ಗೋಷ್ಠಿ ಹಮ್ಮಿಕೊಳ್ಳಲಾಗಿದ್ದು, ಕಲಾವಿದ ಮಿಮಿಕ್ರಿ ಗೋಪಿ ತಂಡದಿಂದ ಮನರಂಜನ ಕಾರ್ಯಕ್ರಮವಿರಲಿದೆ.



ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿಯವರು ಹಾಗೂ ಪ್ರಧಾನ ಕಾರ್ಯದರ್ಶಿಗಳಾದ  ಪ್ರಸನ್ನನಾಥ  ಸ್ವಾಮೀಜಿಯವರು ಸಮ್ಮೇಳನದಲ್ಲಿ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದಾರೆ.
ಜಿಲ್ಲಾ ಕಸಾಪ ಅಧ್ಯಕ್ಷ ಕೆ. ಎಸ್. ಸಿದ್ದಲಿಂಗಪ್ಪ,
ಮಾಜಿ ಶಾಸಕರಾದ ಮಸಾಲಜಯರಾಮ್,  ಎಚ್.ಬಿ.ನಂಜೇಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಬೆಮೆಲ್ ಕಾಂತರಾಜು, ಎಐಸಿಸಿ ಸದಸ್ಯರಾದ ಸುಬ್ರಹ್ಮಣಿ ಶ್ರೀಕಂಠೇಗೌಡ, ಮಾಜಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಎಂ ಡಿ ರಮೇಶ್ ಗೌಡ, ತಾಲ್ಲೂಕು ಕಸಾಪ ಅಧ್ಯಕ್ಷ  ಡಿ.ಪಿರಾಜು ಸೇರಿದಂತೆ ಗಣ್ಯರು, ಜನಪ್ರತಿನಿಧಿಗಳು, ಸಾಹಿತ್ಯಾಸಕ್ತರು, ವಿವಿಧ ಸಂಘಟನೆಗಳು, ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರು ಕನ್ನಡ ಅಭಿಮಾನಿಗಳು ಮತ್ತು ಗ್ರಾಮಸ್ಥರು ಆಗಮಿಸಲಿದ್ದಾರೆ ಎಂದರು.



ಈ ಸಂದರ್ಭದಲ್ಲಿ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಸುಬ್ರಹ್ಮಣಿ ಶ್ರೀಕಂಠೇಗೌಡರು, ತಾಲ್ಲೂಕು ಕಸಾಪ ಅಧ್ಯಕ್ಷ ಡಿ.ಪಿ.ರಾಜು, ಮುಖಂಡರಾದ ಎಂ ಡಿ ರಮೇಶ್ ಗೌಡರು, ಬಡಗರಹಳ್ಳಿ ತ್ಯಾಗರಾಜು, ಉಗ್ರೇಗೌಡರು,   ಗೌರವಾಧ್ಯಕ್ಷ  ಹೇಮಚಂದ್ರು,   ಕೋಶಾಧ್ಯಕ್ಷರಾದ ರಾಮಕೃಷ್ಣೇಗೌಡ, ಸಂಚಾಲಕರಾದ ಕೆ.ಬಿ.ರಾಮಸ್ವಾಮಿ,  ಹುಲಿಕಲ್ ಕೃಷ್ಣಾಚಾರ್, ಇನ್ನಿತರರು  ಇದ್ದರು.

City Today News 9341997936

Leave a comment

This site uses Akismet to reduce spam. Learn how your comment data is processed.