ಕರ್ನಾಟಕದಲ್ಲಿ NPS ರದ್ದತಿ ಒತ್ತಾಯ: ಫ್ರೀಡಂ ಪಾರ್ಕ್‌ನಲ್ಲಿ ಫೆಬ್ರವರಿ 7 ರಂದು ‘OPS ಹಕ್ಕೊತ್ತಾಯ’ ಧರಣಿ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘವು 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ನೂತನ ಪಿಂಚಣಿ ಯೋಜನೆ (NPS) ರದ್ದುಗೊಳಿಸಲು ಒತ್ತಾಯಿಸಿ, ಫೆಬ್ರವರಿ 7, 2025ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ‘OPS ಹಕ್ಕೊತ್ತಾಯ’ ಧರಣಿ ನಡೆಸಲು ತೀರ್ಮಾನಿಸಿದೆ.

ಸಂಘದ ರಾಜ್ಯಾಧ್ಯಕ್ಷ ಶಾಂತರಾಮ ಹಾಗೂ ಪ್ರಧಾನ ಕಾರ್ಯದರ್ಶಿ ಸಿದ್ದಪ್ಪ ಸಂಗಣ್ಣ ಅವರ ನೇತೃತ್ವದಲ್ಲಿ ನಡೆದ ವಿಶೇಷ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. NPS ರದ್ದುಗೊಂಡರೆ, ವರ್ಷಕ್ಕೆ 4,00,34,86,084.00 ಕೋಟಿ ರೂಪಾಯಿ ಅನುದಾನ ಲಭ್ಯವಾಗಲಿದ್ದು, NSDLನಲ್ಲಿ ಶೇಖರಿಸಿರುವ 24,264,33,14,800.00 ಕೋಟಿ ರೂಪಾಯಿಗಳನ್ನು ಅಭಿವೃದ್ಧಿ ಕಾರ್ಯಗಳಿಗೆ ಬಳಸಬಹುದಾಗಿದೆ ಎಂದು ಸಂಘದ ಮುಖಂಡರು ತಿಳಿಸಿದ್ದಾರೆ.

ರಾಜಸ್ಥಾನ, ಛತ್ತಿಸ್ಗಡ, ಜಾರ್ಖಂಡ್ ಹಾಗೂ ಹಿಮಾಚಲ ಪ್ರದೇಶಗಳ ಸರ್ಕಾರಗಳು שכOPS ಅನ್ನು ಮರುಜಾರಿಗೊಳಿಸಿರುವಂತೆ, ಕರ್ನಾಟಕದಲ್ಲಿಯೂ ಹಳೆ ಪಿಂಚಣಿ ಯೋಜನೆ (OPS) ಜಾರಿಗೊಳಿಸಬೇಕೆಂದು ಸಂಘ ಒತ್ತಾಯಿಸಿದೆ. 2024ರ ಜನವರಿಯಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ NPS ಕುರಿತು ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಭರವಸೆ ನೀಡಲಾಗಿತ್ತು. ಆದರೆ, ಕೇಂದ್ರ ಸರ್ಕಾರವು Unified Pension Scheme (UPS) ಜಾರಿಗೆ ತಯಾರಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ತಕ್ಷಣವೇ OPS ಜಾರಿಗೆ ಕ್ರಮ ವಹಿಸಬೇಕೆಂದು ಸಂಘ ಮನವಿ ಮಾಡಿದೆ.

ಸರ್ಕಾರಿ ನೌಕರರ ಪಿಂಚಣಿ ಭದ್ರತೆ ಹಾಗೂ ಅವರ ಕುಟುಂಬಗಳ ಭವಿಷ್ಯದ ದೃಷ್ಟಿಯಿಂದ, OPS ಪುನರಾರಂಭದ ಬೇಡಿಕೆಯನ್ನು ಸರ್ಕಾರ ಒಪ್ಪಿಕೊಳ್ಳಬೇಕೆಂದು ಸಂಘದ ಮುಖಂಡರು ಆಗ್ರಹಿಸಿದ್ದಾರೆ. ಈ ಹಿನ್ನಲೆಯಲ್ಲಿ, ಫೆಬ್ರವರಿ 7ರಂದು ಫ್ರೀಡಂ ಪಾರ್ಕ್‌ನಲ್ಲಿ ಭಾರೀ ಪ್ರಮಾಣದಲ್ಲಿ ಸರ್ಕಾರಿ ನೌಕರರು ಧರಣಿಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

City Today News 9341997936

Leave a comment

This site uses Akismet to reduce spam. Learn how your comment data is processed.