
ಬೆಂಗಳೂರಿನ ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರಸ್ವಾಮಿಗಳವರ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶ ಅನುಗ್ರಹದೊಂದಿಗೆ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್. ಕೆ. ವಾದೀಂದ್ರಾಚಾರ್ಯರ ನೇತೃತ್ವದಲ್ಲಿ “ಭಾರತ ಹುಣ್ಣಿಮೆ-ವ್ಯಾಸ ಪೌರ್ಣಮಿ” ಪ್ರಯುಕ್ತ ಸಾಮೂಹಿಕ ಶ್ರೀ ಸತ್ಯನಾರಾಯಣ ವ್ರತ ಪೂಜೆಯನ್ನು ಪುರೋಹಿತರಾದ ಶ್ರೀ ನಂದಕಿಶೋರಾಚಾರ್ಯರು ಮತ್ತು ರಾಘವೇಂದ್ರ ಕಟ್ಟಿ ಆಚಾರ್ಯರು ನೆರವೇರಿಸಿದರು. ಈ ಸಂದರ್ಭದಲ್ಲಿ ನೂರಾರು ಭಕ್ತರು ಮತ್ತು ಸೇವಾ ಕರ್ತೃಗಳು ಶ್ರೀ ಸತ್ಯನಾರಾಯಣ ವ್ರತ ಪೂಜೆಯಲ್ಲಿ ಪಾಲ್ಗೊಂಡು ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ತೀರ್ಥ ಪ್ರಸಾದವನ್ನು ಸ್ವೀಕರಿಸಿ ಶ್ರೀ ಹರಿ ವಾಯು ಗುರುಗಳ ಅನುಗ್ರಹಕ್ಕೆ ಪಾತ್ರರಾದರು.
City Today News 9341997936
