
ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟಿಸಿ, ಎಲ್ಲಾ ಸಮುದಾಯದ ನಾಯಕರನ್ನು ಒಗ್ಗೂಡಿಸುವಲ್ಲಿ ಉಪಮುಖ್ಯಮಂತ್ರಿ ಮತ್ತು ಜಲಸಂಪತ್ತು ಸಚಿವರಾದ ಶ್ರೀ ಡಿ.ಕೆ. ಶಿವಕುಮಾರ್ ಅವರ ಪಾತ್ರ ಮಹತ್ವದಾಗಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಗೆಲುವಿನತ್ತ ಕೊಂಡೊಯ್ದ ಅವರ ನಾಯಕತ್ವವನ್ನು ಗಮನದಲ್ಲಿಟ್ಟುಕೊಂಡು, ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕಾಗಿ ಅವರನ್ನು ಆಯ್ಕೆ ಮಾಡಬೇಕು ಎಂದು ರಾಜ್ಯ ಸಂಘಟನೆಯ ಅಧ್ಯಕ್ಷರಾದ ಸುಮಾ ಬಸವಲಿಂಗಯ್ಯ ಮತ್ತು ರಾಜ್ಯಾಧ್ಯಕ್ಷರಾದ ಎಸ್.ಬಿ. ಮಲ್ಲಿಕಾರ್ಜುನಸ್ವಾಮಿ ಪತ್ರಿಕಾ ಹೇಳಿಕೆಯಲ್ಲಿ ಒತ್ತಿ ಹೇಳಿದರು.
ಶಿವಕುಮಾರ್ ಅವರ ನಾಯತ್ವದಲ್ಲಿ ದಲಿತರು ಸೇರಿದಂತೆ ಎಲ್ಲಾ ಸಮುದಾಯಗಳ ಮುಖಂಡರಿಗೆ ಪ್ರೋತ್ಸಾಹ ದೊರೆತಿದೆ. ಅವರು ಪಕ್ಷವನ್ನು ಬಲಪಡಿಸುವ ಕೆಲಸ ಮಾಡಿದ್ದರಿಂದ, ವಿರೋಧ ಪಕ್ಷಗಳಿಗೆ “ಸಿಂಹ ಸಪ್ನ” ಆಗಿದ್ದಾರೆ. ಅವರ ಕಾರ್ಯವೈಖರಿ ಮತ್ತು ಜನಪರ ನಿರ್ಧಾರಗಳಿಂದ ರಾಜ್ಯದ ಮತದಾರರು, ಕಾರ್ಯಕರ್ತರು ಪ್ರಭಾವಿತರಾಗಿದ್ದಾರೆ.
ಸಿದ್ದರಾಮಯ್ಯ ಅವಧಿ ಮುಗಿದ ಬಳಿಕ ಡಿಕೆಶಿ ನಾಯಕತ್ವ
ಹಾಲಿ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರ ಅವಧಿ ಮುಗಿದ ಬಳಿಕ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಅವರ ನೇತೃತ್ವದಲ್ಲಿ ತೀರ್ಮಾನ ಮಾಡಬೇಕು ಎಂದು ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು ಒತ್ತಾಯಿಸಿದ್ದಾರೆ.
ಡಿಕೆ ಶಿವಕುಮಾರ್ ಅವರು ಪ್ರತಿಯೊಬ್ಬ ಸಮುದಾಯದ ನಿಷ್ಠಾವಂತ ನಾಯಕನಾಗಿದ್ದು, ಅವರ ನಾಯತ್ವದಲ್ಲಿ ರಾಜ್ಯ ಇನ್ನಷ್ಟು ಅಭಿವೃದ್ಧಿ ಕಾಣಲಿದೆ ಎಂಬ ವಿಶ್ವಾಸವನ್ನು ನಾಯಕರೂ ವ್ಯಕ್ತಪಡಿಸಿದ್ದಾರೆ.
