
ಬೆಂಗಳೂರು: ರಾಜ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ ನಿವೃತ್ತಿ ಭತ್ಯೆ ಜಾರಿಗೊಳಿಸಿದ್ದು, 2023ರಲ್ಲಿ ನಿವೃತ್ತರಾದವರಿಗೆ ಮಾತ್ರ ಈ ಸೌಲಭ್ಯ ನೀಡಲು 39.81 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ. ಆದರೆ, ಈ ನಿರ್ಧಾರ ಸುಪ್ರಿಂ ಕೋರ್ಟ್ ಆದೇಶ ಉಲ್ಲಂಘನೆಯಾಗಿದೆ ಎಂದು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸತಂತ್ರ ಸಂಘಟನೆಯ ಪ್ರಧಾನ ಕಾರ್ಯಧರ್ಶಿ ಉಮಾಮಣಿ ಕೆ.ಎಲ್ ರವರು ಆರೋಪಿಸಿದ್ದಾರೆ.
ಸುಪ್ರಿಂ ಕೋರ್ಟ್ ಆದೇಶ ಪಾಲನೆಯಿಲ್ಲ?
1997ರಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ನಿವೃತ್ತಿ ಭತ್ಯೆ ನೀಡಬೇಕೆಂದು ಹೋರಾಟ ನಡೆಯುತ್ತಿದ್ದು, ಕೊನೆಗೂ ಸುಪ್ರಿಂ ಕೋರ್ಟ್ 2011ರ ಬಳಿಕ ನಿವೃತ್ತರಾದ ಎಲ್ಲರಿಗೂ ಗ್ರಾಜ್ಯುತಿ ಭತ್ಯೆ ನೀಡಬೇಕೆಂದು ಆದೇಶಿಸಿತ್ತು. ಆದರೆ, ರಾಜ್ಯ ಸರ್ಕಾರ 2023ರಲ್ಲಿ ನಿವೃತ್ತರಾದವರಿಗೆ ಮಾತ್ರ ಭತ್ಯೆ ನೀಡುವ ನಿರ್ಧಾರ ತೆಗೆದುಕೊಂಡಿದ್ದು, ಹಿಂದಿನ ವರ್ಷಗಳಲ್ಲಿ ನಿವೃತ್ತರಾದವರಿಗೆ ಇದು ಅನ್ಯಾಯಕಾರಿಯಾಗುತ್ತದೆ ಎಂದು ಸಂಘಟನೆ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೋರಾಟ ಮುಂದುವರಿಯಲಿದೆ!
ಸರ್ಕಾರದ ಈ ನಿರ್ಧಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗೆ ಸಂಘಟನೆಗಳು ಸಜ್ಜಾಗಿದ್ದು, 2011 ರಿಂದ 2023ರ ವರೆಗೆ ನಿವೃತ್ತರಾದ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ನಿವೃತ್ತಿ ಭತ್ಯೆ ನೀಡುವವರೆಗೆ ಹೋರಾಟ ಮುಂದುವರೆಯಲಿದೆ ಎಂದು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸತಂತ್ರ ಸಂಘಟನೆಯ ಪ್ರಧಾನ ಕಾರ್ಯಧರ್ಶಿ ಉಮಾಮಣಿ ಕೆ.ಎಲ್ ರವರು ಎಚ್ಚರಿಸಿದ್ದಾರೆ.
ಈ ಬಗ್ಗೆ ರಾಜ್ಯ ಸರ್ಕಾರ ಇನ್ನೂ ಸ್ಪಷ್ಟನೆ ನೀಡದೆ ಇರುವುದರಿಂದ, ಮುಂದಿನ ದಿನಗಳಲ್ಲಿ ಈ ವಿಚಾರ ರಾಜಕೀಯ ಹಾಗೂ ಕಾನೂನು ಹಾದಿ ಹಿಡಿಯುವ ಸಾಧ್ಯತೆ ಇದೆ.
City Today News 9341997936
