
ಬೆಂಗಳೂರು : ಪರಮಪೂಜ್ಯ ಶ್ರೀ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಹನುಮ ಜಯಂತಿ ಪ್ರಯುಕ್ತ ಶ್ರೀ ಮುಖ್ಯ ಪ್ರಾಣದೇವರಿಗೆ ವಜ್ರಕವಚ ಧಾರಣೆ ಹಾಗೂ ಹುಣ್ಣಿಮೆ ಹಾಗೂ ಹನುಮ ಜಯಂತಿಯ ಪ್ರಯುಕ್ತ ವೇದ ಪಾರಾಯಣದೊಂದಿಗೆ ಶ್ರೀ ಸತ್ಯನಾರಾಯಣ ಸ್ವಾಮಿವ್ರತ ಪೂಜೆಯು ಪುರೋಹಿತರಾದ ಶ್ರೀ ನಂದಕಿಶೋರಾಚಾರ್ಯರು ಹಾಗೂ ಕಟ್ಟಿ ರಾಘವೇಂದ್ರ ಆಚಾರ್ಯರು ನೆರವೇರಿಸಿದರು. ಈ ಸಂದರ್ಭದಲ್ಲಿ ವಿಶೇಷವಾಗಿ ರಥೋತ್ಸವ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ಕಾರ್ಯಕ್ರಮಗಳು ಜರುಗಿದವು. ಈ ಪೂಜಾ ಸೇವೆಗಳಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರಸಾದವನ್ನು ಸ್ವೀಕರಿಸಿ ಶ್ರೀ ಹರಿ ವಾಯು ಗುರುಗಳ ಅನುಗ್ರಹಕ್ಕೆ ಪಾತ್ರರಾದರು.
City Today News 9341997936
