
ಬೆಂಗಳೂರು:
ಹೆಸರಾಂತ ಸಾಮಾಜಿಕ ಕಾರ್ಯಕರ್ತರು ಮತ್ತು ದಾರೀ ಆಂಜನೇಯ ಸ್ವಾಮಿ ದೇವಸ್ಥಾನದ ಧರ್ಮದರ್ಶಿಗಳಾಗಿರುವ ಡಾ. ಅಂಬರೀಶ್ ಅವರನ್ನು ರಾಷ್ಟ್ರಮಟ್ಟದ “ಬುದ್ಧ ಪ್ರಶಸ್ತಿ”ಗೆ ಆಯ್ಕೆ ಮಾಡಲಾಗಿದೆ. ಆಧ್ಯಾತ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಅವರ ನಿಷ್ಠಾವಂತ ಸೇವೆ, ಮತ್ತು ಕನ್ನಡ ನಾಡು-ನುಡಿಗಾಗಿ ಅವರು ಹಗಲಿರುಳು ನಡೆಸುತ್ತಿರುವ ಶ್ರಮವನ್ನು ಗೌರವಿಸುವ ಉದ್ದೇಶದಿಂದ ಈ ಪ್ರಶಸ್ತಿ ಘೋಷಿಸಲಾಗಿದೆ.
ಪ್ರಶಸ್ತಿಯನ್ನು ರಂಗೋತ್ರಿ ಸಾಂಸ್ಕೃತಿಕ ಸಂಸ್ಥೆ ನೀಡಲಿದ್ದು, ಹಿರಿಯ ಸಾಂಸ್ಕೃತಿಕ ಚಿಂತಕ ಡಾ. ಸಿ. ಸೋಮಶೇಖರ್, ಖ್ಯಾತ ಸಂಗೀತ ನಿರ್ದೇಶಕ ಹಾಗೂ ಜಾನಪದ ಗಾಯಕ ಗುರುರಾಜ್ ಹೊಸಕೋಟೆ ಸೇರಿ ಏಳು ಮಂದಿ ಆಯ್ಕೆ ಸಮಿತಿಯ ಮೂಲಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸಂಸ್ಥೆಯ ಕಾರ್ಯದರ್ಶಿ ಕೆ. ಹೆಚ್. ಕುಮಾರ್ ಅವರ ನೇತೃತ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾರಥ್ಯದ ರಂಗೋಲಿ ಮಕ್ಕಳ ರಂಗ ಶಾಲೆ ವತಿಯಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ಈ ಪ್ರಶಸ್ತಿಯ ಪ್ರದಾನ ಸಮಾರಂಭವು 2025ರ ಮೇ 12, ಸೋಮವಾರ ಸಂಜೆ 5:30ಕ್ಕೆ ಬುದ್ಧ ಪೂರ್ಣಿಮೆಯ ಪ್ರಯುಕ್ತ ನಡೆಯಲಿದ್ದು, ಅನೇಕ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅವರ ಸಮ್ಮುಖದಲ್ಲಿ ಡಾ. ಅಂಬರೀಶ್ ಅವರಿಗೆ ಬುದ್ಧ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.
City Today News 9341997936
