ಅ.5ರಿಂದ ಮೀಟರ್ ರೀಡರ್‌ಗಳ ಅನಿರ್ದಿಷ್ಟಾವಧಿ ಮುಷ್ಕರ

ಕನಿಷ್ಠ ವೇತನ, ಭದ್ರತೆ ಹಾಗೂ ವಿಮಾ ಸೌಲಭ್ಯಕ್ಕೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ

ಬೆಂಗಳೂರು: ಇಂಧನ ಇಲಾಖೆಯಡಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಮೀಟರ್ ರೀಡರ್‌ಗಳು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಕ್ಟೋಬರ್ 5, 2026ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಗುತ್ತಿಗೆದಾರರು ಅನುಸರಿಸುತ್ತಿರುವ ಪ್ರಸ್ತುತ ವೇತನ ಪದ್ಧತಿಯಿಂದ ಮೀಟರ್ ರೀಡರ್‌ಗಳಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿರುವ ನೌಕರರು, ಮೀಟರ್ ರೀಡಿಂಗ್ ಆಧಾರದ ಮೇಲೆ ‘ಪ್ರತಿ ಮೀಟರ್‌ಗೆ’ ವೇತನ ನೀಡುವ ಪದ್ಧತಿಯನ್ನು ಕೈಬಿಟ್ಟು, ಸರ್ಕಾರ ನಿಗದಿಪಡಿಸುವ ನ್ಯಾಯಯುತ ಕನಿಷ್ಠ ವೇತನವನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಮೀಟರ್ ರೀಡರ್‌ಗಳು ಪ್ರತಿನಿತ್ಯ ಅಪಾಯದ ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅವರ ಸುರಕ್ಷತೆಗೆ ಸೂಕ್ತ ಭದ್ರತಾ ವ್ಯವಸ್ಥೆ ಹಾಗೂ ಸಮರ್ಪಕ ವಿಮಾ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಮುಖ ಬೇಡಿಕೆಗಳು

– ಪ್ರತಿ ಮೀಟರ್ ಆಧಾರದ ವೇತನ ಪದ್ಧತಿಯನ್ನು ರದ್ದುಪಡಿಸಿ ನ್ಯಾಯಯುತ ಕನಿಷ್ಠ ವೇತನ ಜಾರಿಗೊಳಿಸಬೇಕು.
– ಅಪಾಯದ ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸುವ ಮೀಟರ್ ರೀಡರ್‌ಗಳಿಗೆ ಸೂಕ್ತ ಸುರಕ್ಷತೆ ಹಾಗೂ ವಿಮಾ ಸೌಲಭ್ಯ ನೀಡಬೇಕು.
– ರಜಾ ದಿನಗಳಲ್ಲಿ ಕೆಲಸ ಮಾಡಿದರೆ ಎರಡು ಪಟ್ಟು ವೇತನ ನೀಡಬೇಕು.
– ಕೆಲಸಕ್ಕೆ ಸೇರುವಾಗ ಗುತ್ತಿಗೆದಾರರು ಪಡೆದುಕೊಂಡಿರುವ ಮೂಲ ದಾಖಲಾತಿಗಳನ್ನು ನೌಕರರಿಗೆ ಮರಳಿಸಬೇಕು.
– ನೌಕರರ ಇತರ ನ್ಯಾಯಯುತ ಬೇಡಿಕೆಗಳನ್ನು ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು.

ತಮ್ಮ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರಲು ಅಕ್ಟೋಬರ್ 5ರಿಂದ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ. ಈ ಹೋರಾಟದ ಕುರಿತು ಸರ್ಕಾರ ಹಾಗೂ ಸಾರ್ವಜನಿಕರ ಗಮನ ಸೆಳೆಯಲು ಮಾಧ್ಯಮಗಳು ಸುದ್ದಿ ಪ್ರಸಾರ ಮಾಡುವ ಮೂಲಕ ಬೆಂಬಲ ನೀಡಬೇಕು ಎಂದುಮೇಲುಕೋಟೆ ಬೆಟ್ಟಸ್ವಾಮಿಗೌಡ ರಾಜ್ಯ ಗೌರವಾಧ್ಯಕ್ಷರು, ಲೀಲಾ ಸಾಗರ್ ಎಂ.ಎಸ್.ರಾಜ್ಯಾಧ್ಯಕ್ಷರು ಅವರು ಮನವಿ ಮಾಡಿದ್ದಾರೆ.

City Today News 9341997936

Leave a comment

This site uses Akismet to reduce spam. Learn how your comment data is processed.