Add new colours to your new year as the iconic Vespa introduces 4 new vibrant additions

Pune, 08 December 2022: Piaggio Vehicles Pvt Ltd, the 100% subsidiary of the Italian Piaggio Group and maker of the iconic Vespa and sporty Aprilia range of scooters has announced the launch of four new vibrant colours for the Vespa SXL variants. These new colours are Midnight Desert, Tuscany Sunset, Jade Streak and Sunny Escapade.

A new limited edition Vespa SXL Sport in the new colours of Midnight Desert, Tuscany Sunset and Sunny Escapade is being introduced and the Vespa SXL Racing 60s will flaunt a new colour of Jade Streak in addition to the exiting White. The standard Vespa SXL models will now be available in two more new colours of Midnight Desert and Tuscany Sunset.

Speaking on the new colour launch, Mr. Diego Graffi, Chairman and MD, Piaggio Vehicles Pvt. Ltd., said, “We are excited to introduce the Vespa with refreshed style and vibrancy after receiving overwhelming response from our Indian customers. Vespa is not just a scooter but an icon of Italian lifestyle and legacy which has received great love from India. With the new color portfolio of Vespa, we aim to give our customers a plethora of choices to select the best variant for them which matches their personality and to offer new riding experience which would amaze our riders.”

The new colours of the Vespa SXL varients are available from 1 December 2022 across all dealers in India.

City Today News – 9341997936

DRIFE DRIFE-Auto ಅನ್ನು ಪ್ರಾರಂಭಿಸಲು ಸಿದ್ಧವಾಗಿದೆ

DRIFE ಏಕೇಂದ್ರೀಕೃತ ರೈಡ್-ಹೇಲಿಂಗ್ ಪ್ಲಾಟ್‌ಫಾರ್ಮ್ ಅಗಿದ್ದು, ಬ್ಲಾಕ್‌ಚೈನ್ ತಂತ್ರಜ್ಞಾನದಲ್ಲಿ ನಿರ್ಮಿಸಲಾಗಿದೆ ಮತ್ತು ಇದು ಮೊದಲ ಬಾರಿಗೆ ಬ್ಲಾಕ್‌ಲೈನ್ ಮಾದರಿಯನ್ನು ನೆಲದ ಮೇಲೆ ಅಳವಡಿಸಲಾಗಿದೆ. DRIFE ಅಪ್ಲಿಕೇಶನ್ ಅನ್ನು ೨೦ನೇ ನವೆಂಬರ್ ೨೦೨೧ ರಂದು ಪ್ರಾರಂಭಿಸಲಾಯಿತು ಮತ್ತು ಪ್ರಸ್ತುತ ಕಾರ್ಯನಿರ್ವಹಿಸುತ್ತಿದೆ. ಬೆಂಗಳೂರು,ಕರ್ನಾಟಕದ ಚಾಲಕರನ್ನು ಸವಾರರಿಗೆ ಸಂಪರ್ಕಿಸುತ್ತದೆ.

DRIFE ನೊಂದಿಗೆ, ಪ್ರಯಾಣಿಕರಿಗೆ ಯಾವುದೇ ಏಲಿಕೆ ಬೆಲೆಗಳಲ್ಲ ಮತ್ತು ಚಾಲಕರಿಂದ ಯಾವುದೇ ಕಮಿಷನ್ ಶುಲ್ಕವನ್ನು ತೆಗೆದುಕೊಳ್ಳಲಾಗುವುದಿಲ್ಲ.

ಇದು ನಿಜಮುಕ್ತ ಮಾರುಕಟ್ಟೆ ಸ್ಥಳವಾಗಿದ್ದು, ಚಾಲಕರ ಮತ್ತು ಪ್ರಯಾಣಿಕರ ಸಮುದಾಯದಿಂದ ಶುಲ್ಕವನ್ನು ನಿರ್ದೇಶಿಸಲಾಗುತ್ತದೆ.

ಚಾಲಕರಿಂದ DRIFE 0% ಕಮಿಷನ್ ವಿಧಿಸುತ್ತದೆ, 100% ರೈಡ್ ಶುಲ್ಕ ಗಳಿಸಲು ಇದು ಅವರಿಗೆ ಸಹಾಯ ಮಾಡುತ್ತದೆ, ಅವರಿಗೆ ಉತ್ತಮ ಜೀವನವನ್ನು ಸಕ್ರಿಯಗೊಳಿಸುತ್ತದೆ.

ರೈಡ್-ಹೇಅಂಗ್ ವಲಯವನ್ನು ದುರ್ಬಲಗೊಆಸುವ ಸಮಸ್ಯೆಗಳನ್ನು ಪರಿಹರಿಸುವ ಗುರಿಯನ್ನು ಹೊಂದಿರುವ DRIFE ಅದರ ದಿಗಂತವನ್ನು ಮತ್ತಷ್ಟು ವಿಸ್ತರಿಸಲು ಯೋಜಿಸುತ್ತಿದೆ ಮತ್ತು ಜನರಿಗೆ ಪ್ರಯೋಜನಕಾರಿಯಾಗಲು ಆಟೋ ವಿಭಾಗಕ್ಕೆ ಜಿಗಿತವನ್ನು ತೆಗೆದುಕೊಳ್ಳುವ ಮೂಲಕ, ಜನರ ದೊಡ್ಡ ಸಮೂಹಕ್ಕೆ ಮತ್ತಷ್ಟು ಪ್ರಯೋಜನವನ್ನು ನೀಡುತ್ತದೆ.

ಆಟೋ ರಿಕ್ಷಾ ದರಕ್ಕೆ ಸಂಬಂಧಿಸಿದಂತೆ ಸಾರಿಗೆ ಇಲಾಖೆ ಮತ್ತು ಕ್ಯಾಬ್ ಅಗ್ರಿಗೇಟರ್‌ಗಳ ನಡುವಿನಜಟಾಪಟ ಬೆಂಗಳೂರಿನ ಪ್ರಯಾಣಿಕರನ್ನು ಕಂಗಾಲಾಗಿಸಿದೆ. ಸರ್ಕಾರವು ಆಟೋ ರೈಡ್‌ಗಳಗೆ ಕನಿಷ್ಠ ದರವನ್ನು ನಿಗದಿಪಡಿಸಿದ್ದರೂ, ರೈಡ್ ಹೇಅಂಗ್ ಅಪ್ಲಿಕೇಶನ್‌ಗಳು ಹೆಚ್ಚು ಶುಲ್ಕ ವಿಧಿಸುತ್ತವೆ ಹಾಗೂ ಗರಿಷ್ಠ ಬೇಡಿಕೆಯ ಸಮಯದಲ್ಲಿ ಅವರ ದರಗಳು ಮೊತ್ತಕ್ಕಿಂತ ಎರಡು ಪಟ್ಟು ಹೆಚ್ಚಾಗಿಸುತ್ತವೆ.

ಆಟೋ ಚಾಲಕರು DRIFE ನಿಂದ ಹೆಚ್ಚಿನ ಪ್ರಯೋಜನವನ್ನು ಪಡೆಯುತ್ತಾರೆ, ಮತ್ತು ಅವರ ಮನೆಗಳಿಗೆ ಪೂರ್ಣ ಶುಲ್ಕವನ್ನು ತೆಗೆದುಕೊಳ್ಳಬಹುದು ಏಕೆಂದರೆ ಅವರು ಇನ್ನು ಮುಂದೆ ಕ್ಯಾಬ್ ಅಗ್ರಿಗೇಟರ್‌ಗಳಿಗೆ ಯಾವುದೇ ರೀತಿಯ ಕಮಿಷನ್ ಪಾವತಿಸಬೇಕಾಗಿಲ್ಲ. ಏರಿಕೆ ಬೆಲೆಗಳ ಸಮಸ್ಯೆ ಇನ್ನು ಮುಂದೆ ಸಮಸ್ಯೆಯಾಗುವುದಿಲ್ಲ, ಏರಿಕೆ ಬೆಲೆಗಳ ಬಗ್ಗೆ ಚಿಂತಿಸದ ಸವಾರರಿಗೆ ಒಂದು ಆರ್ಥಿಕ ದರದಲ್ಲಿ ಸವಾರಿ ಮಾಡಲು ಭರವಸೆ ನೀಡುತ್ತದೆ.

City Today News – 9341997936

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ 22-12-2022 ರಂದು ಬೆಳಗಾವಿ ಚಲೋ ಚಳುವಳಿ

ಅಂಗನವಾಡಿ ವ್ಯವಸ್ಥೆಯೊಳಗೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸುವುದನ್ನು ವಿರೋಧಿಸಿ, ಕನಿಷ್ಟ ವೇತನ ಜಾರಿಗೊಳಿಸುವುದು. ಗ್ರಾಚ್ಯುಟಿ ಸೌಲಭ್ಯ, ನಿವೃತ್ತಿ ವೇತನ ಜಾರಿ, ಕಳಪೆ ಮೊಬೈಲ್‌ಗಳ ಬದಲಿಗೆ ಮಿನಿಟ್ಯಾಬ್‌ಗಳನ್ನು ನೀಡುವುದು ಸೇರಿದಂತೆ ಅಂಗನವಾಡಿ ನೌಕರರು ಎದುರಿಸುತ್ತಿರುವ ಮೂಲಭೂತ ಸಮಸ್ಯೆಗಳನ್ನು ಪರಿಹರಿಸುವಂತೆ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ರಾಜ್ಯ ಸರ್ಕಾರವನ್ನು ಒತ್ತಾಯಿಸಲು ಎಐಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ನೇತೃತ್ವದಲ್ಲಿ ದಿನಾಂಕ 22-12-2022 ರಂದು ಬೆಳಗಾವಿ ಚಲೋ ಚಳುವಳಿ”ಯನ್ನು ಹಮ್ಮಿಕೊಳ್ಳಲಾಗಿದೆ .

ಕಳೆದ 46 ವರ್ಷಗಳಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಡಿಯಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಅನುಷ್ಠಾನದ ರೂವಾರಿಗಳಾಗಿ ಕೇವಲ ಗೌರವಧನದ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರುಗಳಿಗೆ ಔಧ್ಯಮಿಕ ಮತ್ತು ಆರ್ಥಿಕ ಭದ್ರತೆ ನೀಡುವ ಕುರಿತು ನಿರ್ಲಕ್ಷ ವಹಿಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೇವಲ ಬಳಕೆಯ ವಸ್ತುಗಳಂತೆ ದುಡಿಸಿಕೊಳ್ಳುವ ಮೂಲಕ ಶೋಷಣೆ ಮಾಡಲಾಗುತ್ತಿದೆ.

ಸೇವಾ ಹಿರಿತನದ ಆಧಾರದ ಮೇಲೆ ಕಾರ್ಯಕರ್ತೆಯರಿಗೆ ನೀಡಲಾಗುತ್ತಿರುವ ಗೌರವಧನದ ಮಾಸಿಕ ಹತ್ತರಿಂದ ಹನ್ನೊಂದುವರೆ ಸಾವಿರ ಹಾಗೂ ಸಹಾಯಕಿಯರಿಗೆ ಐದರಿಂದ ಐದುವರೆ ಸಾವಿರ

ರೂಪಾಯಿ ಸಂಭಾವನೆಯಲ್ಲಿ ಇಂದಿನ ಬೆಲೆ ಏರಿಕೆ ಸೂಚ್ಯಂಕಕ್ಕನುಗುಣವಾಗಿ ಬದುಕು ನಡೆಸುವುದು ಅತ್ಯಂತ ದುಸ್ಥರವಾಗಿದೆ.

ಆದುದರಿಂದ ಅಂಗನವಾಡಿ ವ್ಯವಸ್ಥೆಯನ್ನು ಉಳಿಸಿ-ಬೆಳೆಸಲು ಪೂರಕವಾಗಿ ಈ ಕೆಳಕಂಡ ಬೇಡಿಕೆಗಳನ್ನು ಈಡೇರಿಸಲು ಕ್ರಮ ತೆಗೆದುಕೊಳ್ಳಬೇಕೆಂದು ರಾಜ್ಯ ಸರ್ಕಾರವನ್ನು ಅಗ್ರಹಿಸುತ್ತಿದ್ದೇವೆ.

ಬೇಡಿಕೆಗಳು :-

1. ಎಲ್.ಕೆ.ಜಿ-ಯು.ಕೆ.ಜಿ ತರಗತಿಗಳನ್ನು ಅಂಗನವಾಡಿ ಕೇಂದ್ರಗಳಲ್ಲಿಯ ಪ್ರಾರಂಭಿಸಲು ಒತ್ತಾಯಿಸಿ: ಕೇಂದ್ರ ಸರ್ಕಾರ ರೂಪಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿ(NEP)ಯನ್ನು ಅಂಗನವಾಡಿ ವ್ಯವಸ್ಥೆಯೊಳಗೆ ಜಾರಿಗೊಳಿಸಲು ಏಕಪಕ್ಷೀಯವಾಗಿ ಆತುರ ಪಡುತ್ತಿರುವ ರಾಜ್ಯ ಸರ್ಕಾರದ ನಿಲುವು ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ICDS) ಯ ಮೂಲ ಆಶಯಗಳಿಗೆ ಚ್ಯುತಿಯನ್ನುಂಟು ಮಾಡಲಿದೆ . ಆರು ವರ್ಷದ ವಯೋಮಾನದೊಳಗಿನ ಮಕ್ಕಳು ಮತ್ತು ಗರ್ಭಿಣಿ-ಬಾಣಂತಿಯರ ಪೌಷ್ಠಿಕ ಆಹಾರ-ಆರೋಗ್ಯದ ಬಗ್ಗೆ ಕಾಳಜಿವಹಿಸಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳನ್ನು ಎನ್.ಇ.ಪಿ ಅಡಿಯಲ್ಲಿ ಶಾಲಾ ಪ್ರಾಂಗಣಕ್ಕೆ ಒಳಪಡಿಸಿದರೆ ಐ.ಸಿ.ಡಿ.ಎಸ್ ಯೋಜನೆ ಅವಸಾನವಾಗಲಿದೆ. ಮಕ್ಕಳು ಮತ್ತು ಮಹಿಳೆಯರಿಗೆ ದೊರೆಯುತ್ತಿರುವ ಪೂರಕ ಪೌಷ್ಠಿಕ ಆಹಾರಕ್ಕೆ ಕಡಿವಾಣ ಬೀಳಲಿದ್ದು, ಭದ್ರತಾ ಕಾಯ್ದೆಯ ಸವಲತ್ತುಗಳಿಂದ ಮಕ್ಕಳು-ಮಹಿಳೆಯರು ವಂಚಿತರಾಗಲಿದ್ದಾರೆ. ಆದುದರಿಂದ ಈಗಿರುವ ಅಂಗನವಾಡಿ ವ್ಯವಸ್ಥೆಯನ್ನೆ ಮತ್ತಷ್ಟು ಬಲಗೊಳಿಸಲು ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್.ಕೆ.ಜಿ-ಯು.ಕೆ.ಜಿ ಪ್ರಾರಂಭಿಸಲು ಅವಕಾಶ ಮಾಡಬೇಕು ಹಾಗೂ ಮಕ್ಕಳ ಕಲಿಕೆಗೆ ಪೂರಕವಾಗಿ ಅಂಗನವಾಡಿ ಶಿಕ್ಷಕಿಯರಿಗೆ ಸೂಕ್ತ ತರಬೇತಿ ಮತ್ತು ಪಠ್ಯ ಪುಸ್ತಕಗಳನ್ನು ಒದಗಿಸಬೇಕು. ಹಾಗೂ ಮಕ್ಕಳಿಗೆ ಸಮವಸ್ತ್ರ ಹಾಗೂ ವರ್ಗಾವಣೆ ಪತ್ರ ನೀಡುವ ಜವಾಬ್ದಾರಿಯನ್ನು ಅಂಗನವಾಡಿ ಕೇಂದ್ರಗಳಿಗೆ ವಹಿಸಬೇಕೆಂದು ಒತ್ತಾಯಿಸುತ್ತೇವೆ.

2. ಕನಿಷ್ಠ ವೇತನ: ಇಂದಿನ ಬೆಲೆ ಏರಿಕೆ ಸೂಚ್ಯಂಕಕ್ಕನುಗುಣವಾಗಿ ಅಂಗನವಾಡಿ ಸಿಬ್ಬಂದಿಗಳಿಗೆ ನೀಡಲಾಗುತ್ತಿರುವ ಗೌರವ ಧನದಲ್ಲಿ ಜೀವನ ನಿರ್ವಹಣೆ ಕಷ್ಟ ಸಾಧ್ಯವಾಗಿದ್ದು, ಮಾಸಿಕ ಕನಿಷ್ಠ ವೇತನ 31500 ರೂಪಾಯಿ ನೀಡಲು ಕನಿಷ್ಠ ವೇತನ ಜಾರಿಗೊಳಿಸಬೇಕೆಂದು ಒತ್ತಾಯಿಸುತ್ತೇವೆ.

3. ಗ್ರಾಚ್ಯುಟಿ : ಗ್ರಾಚ್ಯುಟಿ ಸೌಲಭ್ಯ ಪಡೆಯಲು ಅಂಗನವಾಡಿ ಉದ್ಯೋಗಿಗಳು ಅರ್ಹರು ಎಂಬುದಾಗಿ ಗುಜರಾತ್ ಪ್ರಕರಣದ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು,

ಸದರಿ ತೀರ್ಪಿನ ಆಧಾರದಲ್ಲಿ ರಾಜ್ಯದಲ್ಲಿ ಅಂಗವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸೌಲಭ್ಯ ನೀಡಲು ಆಡಳಿತಾತ್ಮಕ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತೇವೆ.

4. ಕಳಪೆ ಗುಣಮಟ್ಟದ ಮೊಬೈಲ್‌ಗಳನ್ನು ವಾಪಸ್ ಪಡೆದು ಮಿನಿಟ್ಯಾಬ್‌ಗಳನ್ನು ನೀಡಬೇಕು: ಅಂಗನವಾಡಿ ಕಾರ್ಯಕರ್ತೆಯರಿಗೆ ಕೇಂದ್ರಗಳಲ್ಲಿ ಫಲಾನುಭವಿಗಳ ದಾಖಲೆಗಳ ಸಂಗ್ರಹಕ್ಕಾಗಿ ನೀಡಲಾಗಿರುವ ಎಲ್.ಜಿ ಮೊಬೈಲ್‌ಗಳು ಅತ್ಯಂತ ಕಳಪೆ ಗುಣಮಟ್ಟದಿಂದ ಕೂಡಿದ್ದಾಗಿದ್ದು, ಕ್ಷಿಪ್ರಗತಿಯಲ್ಲಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಹಾಗೂ ಸಂಗ್ರಹಣ ಸಾಮರ್ಥ್ಯವು ಸಹ ಕಡಿಮೆ ಜಿಬಿಯದಾಗಿದ್ದು ಗ್ರಾಮಾಂತರ ಪ್ರದೇಶಗಳಲ್ಲಿ ನೆಟ್‌ವರ್ಕ್ ಸಮಸ್ಯೆಯು ಎದುರಾಗುತ್ತಿದ್ದು ಸುಲಲಿತವಾಗಿ ಕಾರ್ಯನಿರ್ವಹಿಸಲಾಗುತ್ತಿಲ್ಲ. ಹಾಗೂ ಮೊಬೈಲ್‌ಗಳು ಅತ್ಯಂತ ಚಿಕ್ಕದಾಗಿರುವುದರಿಂದ ಕಣ್ಣಿನ ಸಮಸ್ಯೆಯಿಂದ ಬಳಲುತ್ತಿರುವ ಕಾರ್ಯಕರ್ತೆಯರಿಗೆ ಸಣ್ಣ ಅಕ್ಷರಗಳು ಗೋಚರಿಸದೆ ದಾಖಲೆ ಸಂಗ್ರಹಣೆ ಮಾಡಲು ತೊಡಕುಂಟಾಗುತ್ತಿದೆ. ಅದುದರಿಂದ ವಿತರಿಸಲಾಗಿರುವ ಮೊಬೈಲ್‌ಗಳನ್ನು ಹಿಂಪಡೆದು ಅದರ ಬದಲಿಗೆ ಮಿನಿಟ್ಯಾಬ್‌ಗಳನ್ನು ನೀಡಬೇಕೆಂದು ಒತ್ತಾಯಿಸುತ್ತೇವೆ.

5. ಮಾರಣಾಂತಿಕ ಕಾಯಿಲೆ ಹೊಂದಿರುವವರಿಗೆ ಸ್ವಯಂ ನಿವೃತ್ತಿಗೆ ಅವಕಾಶ ಮಾಡಿಕೊಡುವ ಮೂಲಕ ಅವರಿಗೆ ಪರಿಹಾರ ಒದಗಿಸಬೇಕು ಹಾಗೂ ಅಂಗನವಾಡಿ ನೌಕರರನ್ನು ಸಾಮಾಜಿಕ ಸುರಕ್ಷ ಯೋಜನೆಯಾದ ಇ.ಎಸ್‌.ಐ ಸೌಲಭ್ಯ ಹಾಗೂ ಸರ್ಕಾರಿ ನೌಕರರಿಗಾಗಿ ರೂಪಿಸಿರುವ ನೌಕರ ಸ್ನೇಹಿ ಉಚಿತ ವೈದ್ಯಕೀಯ ಯೋಜನೆಯ ಸೌಲಭ್ಯ ಒದಗಿಸಲು ಕ್ರಮ ವಹಿಸಬೇಕೆಂದು ಒತ್ತಾಯಿಸಿ, ದಿನಾಂಕ 22.12.2022 ರಂದು ಗುರುವಾರ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಸರ್ಕಾರದ ಗಮನ ಸೆಳೆದು ಸಮಸ್ಯೆಗಳ ಪರಿಹಾರಕ್ಕಾಗಿ “ಬೆಳಗಾವಿ ಚಲೋ” ಚಳುವಳಿ ನಡೆಸುವ ಮೂಲಕ ಬೆಳಗಾವಿಯ ಸುವರ್ಣ ವಿಧಾನಸೌಧದ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು. ಬಿ.ಅಮ್ಜದ್ – ರಾಜ್ಯಾಧ್ಯಕ್ಷರು & ಜಯಮ್ಮ – ರಾಜ್ಯ ಪ್ರಧಾನ ಕಾರ್ಯದರ್ಶಿ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು

City Today News – 9341997936

ಪ್ರತಿನಿತ್ಯ ಶ್ರೀ ರಾಘವೇಂದ್ರ ಸ್ವಾಮಿಗಳ ಮೂಲ ಪಾದುಕೆ ಗಳನ್ನು ಪೂಜಿಸುತ್ತಿರುವ ಪರಮ ಪೂಜ್ಯ ಶ್ರೀ 108 ಶ್ರೀ ಶ್ರೀಸುಬುಧೇಂದ್ರತೀರ್ಥ ಶ್ರೀಪಾದರು!

ಪ್ರತಿನಿತ್ಯ ಶ್ರೀ ರಾಘವೇಂದ್ರ ಸ್ವಾಮಿಗಳ ಮೂಲ ಪಾದುಕೆ ಗಳನ್ನು ಪೂಜಿಸುತ್ತಿರುವ ಪರಮ ಪೂಜ್ಯ ಶ್ರೀ 108 ಶ್ರೀ ಶ್ರೀಸುಬುಧೇಂದ್ರತೀರ್ಥ ಶ್ರೀಪಾದರು!
ಇತ್ತೀಚೆಗೆ ಕಲ್ಯಾಣಿ ನಗರ ವಾದ ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮ ಪೂಜ್ಯ ಶ್ರೀ 108 ಶ್ರೀ ಶ್ರೀಸುಬುಧೇಂದ್ರತೀರ್ಥ ಶ್ರೀಪಾದರು,ಶ್ರೀಮನ್ ಮೂಲ ರಾಮಚಂದ್ರದೇವರ ಸಂಸ್ಥಾನ ಪೂಜೆಯನ್ನು ನೆರವೇರಿಸಿ ನಂತರ ಶ್ರೀ ರಾಘವೇಂದ್ರ ಸ್ವಾಮಿಗಳ ಮೂಲ ಪಾದುಕೆಗೆ ಪೂಜೆಯನ್ನು ಮಾಡಿ ನಂತರ ರಾಯರ ಬೃಂದಾವನಕ್ಕೆ ಮಹಾಮಂಗಳಾರತಿಯನ್ನು ನೆರವೇರಿಸಿದರು .ಈ ಸಂದರ್ಭದಲ್ಲಿ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದಿಂದ್ರಾಚಾರ್ಯರು, ಪುರೋಹಿತರಾದ ನಂದಕಿಶೋರಾಚಾರ್ಯರು ಹಾಗೂ ಭಕ್ತರು ಶ್ರೀ ರಾಘವೇಂದ್ರ ಸ್ವಾಮಿಗಳ ಅನುಗ್ರಹಕ್ಕೆ ಪಾತ್ರರಾದರು

City Today News – 9341997936

2023 ವಿಧಾನಸಭಾ ಚುನಾವಣೆ: KRS ಪಕ್ಷದಿಂದ ಮಹಿಳಾ ಅಭ್ಯರ್ಥಿಗಳಿಗೆ ಆದ್ಯತೆ

ರಾಜ್ಯದಲ್ಲಿ ಮತ್ತು ರಾಷ್ಟ್ರದಲ್ಲಿ ಮಹಿಳೆಯರ ಪರಿಸ್ಥಿತಿ ಉತ್ತಮವಾಗಿಲ್ಲ, ಪ್ರತಿನಿತ್ಯ ನಾವು ಮಹಿಳೆಯರ ಮೇಲೆ ಅವರು ಕೆಲಸ ಮಾಡುವ ಸ್ಥಳದಲ್ಲಿ, ಮನೆಗಳಲ್ಲಿ ಮತ್ತು ಇತರ ಕಡೆಗಳಲ್ಲಿ ಅತ್ಯಾಚಾರ, ದೌರ್ಜನ್ಯ, ಕಿರುಕುಳ ಮತ್ತು ಶೋಷಣೆ ಹೆಚ್ಚುತ್ತಿದೆ. ಇದಕ್ಕೆ ಪ್ರಮುಖ ಕಾರಣ ಮಹಿಳೆಯರ ರಾಜಕೀಯ ಪ್ರಾತಿನಿಧ್ಯ ಬಹಳ ಕಡಿಮೆ ಪ್ರಮಾಣದಲ್ಲಿರುವುದು. ಪ್ರಸ್ತುತ ಶಾಸನಸಭೆಗಳಲ್ಲಿ ಮಹಿಳೆಯರ ಪ್ರಾತಿನಿಧ್ಯ ನಗಣ್ಯವಾಗಿದ್ದು, ಈ ಪರಿಸ್ಥಿತಿಯನ್ನು ಉತ್ತಮಪಡಿಸುವ ಅಗತ್ಯವಿದೆ. ಅದರಲ್ಲೂ ಪುರುಷ ಪ್ರಧಾನ ಸಮಾಜದ ನಮ್ಮಲ್ಲಿ ಬದಲಾವಣೆ ತರುವುದು ಬಹಳ ಕಷ್ಟದ ವಿಷಯ, ಆದರೆ ರಾಜಕೀಯ ಪಕ್ಷಗಳು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದರೆ, ತ್ವರಿತವಾಗಿ ಬದಲಾವಣೆ ತರಬಹುದು. 

ರಾಜ್ಯದಲ್ಲಿ ಮತ್ತು ರಾಷ್ಟ್ರದಲ್ಲಿ ಪ್ರಮುಖ ರಾಜಕೀಯ ಪಕ್ಷಗಳು ಮಹಿಳಾ ಸಬಲೀಕರಣದ ಬಗ್ಗೆ ಕೇವಲ ಮಾತನಾಡುತ್ತ ಕಾಲಹರಣ ಮಾಡುತ್ತಿವೆಯೆ ಹೊರತು, ಅವರಿಗೆ ನೀಡಬೇಕಾದ ಅವಕಾಶಗಳನ್ನು ಕಿತ್ತುಕೊಳ್ಳಲು ಎಲ್ಲಾ ವ್ಯವಸ್ಥೆಗಳನ್ನು ನಿರ್ಮಿಸಿಕೊಂಡಿವೆ ಮತ್ತು ಕಾರಣಗಳನ್ನು ನೀಡುತ್ತವೆ. ತೃತೀಯ ಹಂತದ ಸರ್ಕಾರಗಳಾದ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಿ ದಶಕಗಳೆ ಕಳೆದಿದ್ದರೂ ಕೂಡ, ಅಲ್ಲಿಯೂ ಕೂಡ ಪುರುಷರದೇ ಪಾರಮ್ಯ ನಡೆಯುತ್ತಿದೆ. ಕೇವಲ ಹೆಸರಿಗೆ ಮಾತ್ರ ಮಹಿಳಾ ಚುನಾಯಿತ ಪ್ರತಿನಿಧಿಗಳಿದ್ದು, ನಿಜವಾದ ಅಧಿಕಾರ ಅವರ ಪತಿ/ತಂದೆ/ಮಕ್ಕಳು ಚಲಾಯಿಸುತ್ತಿರುತ್ತಾರೆ. ವಿಧಾನ ಸಭೆ, ವಿಧಾನ ಪರಿಷತ್, ಲೋಕಸಭೆ ಮತ್ತು ರಾಜ್ಯಸಭೆಗಳಿಗೆ ನಡೆಯುವ ಚುನಾವಣೆಗಳಿಗೆ ಮಹಿಳೆಯರನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಲಾಗುತ್ತದೆ. ಕನಿಷ್ಠ ಪಕ್ಷ ಮೇಲ್ಮನೆ ಚುನಾವಣೆಗಳಲ್ಲಿ, ನಿಸ್ಸಂದೇಹವಾಗಿ ಗೆಲ್ಲುವ ಕ್ಷೇತ್ರಗಳಲ್ಲೂ, ಅದರಲ್ಲೂ ನಾಮ ನಿರ್ದೇಶನ ಮಾಡುವಂತಹ ಸಂದರ್ಭಗಳಲ್ಲೂ ಮಹಿಳೆಯರನ್ನು ನಿರ್ಲಕ್ಷಿಸಲಾಗುತ್ತಿದೆ. ರಾಜ್ಯದಲ್ಲಿನ ಮೂರು ಭ್ರಷ್ಟ ಪಕ್ಷಗಳು ಎಂದಿಗೂ ಮಹಿಳೆಯರಿಗೆ, ಅವರಿಗೆ ಸಿಗಬೇಕಾದ ರಾಜಕೀಯ ಸ್ಥಾನಮಾನವನ್ನು ನೀಡುವುದಿಲ್ಲ. ಆ ಪಕ್ಷಗಳಿಗೆ ವಾಮ ಮಾರ್ಗದಲ್ಲಿ ಅಧಿಕಾರ ಹಿಡಿಯುವುದು ಆದ್ಯತೆಯೆ ಹೊರತು, ಮಹಿಳೆಯರ ಸಬಲೀಕರಣ ಮತ್ತು ಅವರ ಮೇಲಿನ ದೌರ್ಜನ್ಯ ನಿವಾರಣೆ ಬೇಕಿಲ್ಲ.

ಈ ನಿಟ್ಟಿನಲ್ಲಿ ನಾಯಕತ್ವ ಗುಣವುಳ್ಳ ಮಹಿಳೆಯರು ಇಂದು ಸಮಾಜಕ್ಕೆ ಮತ್ತು ರಾಜಕೀಯ ಕ್ಷೇತ್ರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಳ್ಳುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಕೆ.ಆರ್.ಎಸ್. ಪಕ್ಷವು ಮಹಿಳೆಯರಿಗೆ ವಿಶೇಷ ಆದ್ಯತೆಯನ್ನು ನೀಡುತ್ತಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಮೂರನೇ ಒಂದರಷ್ಟು ಕ್ಷೇತ್ರಗಳನ್ನು ಮಹಿಳೆಯರಿಗೆ ಮೀಸಲಿಡಲಿದ್ದು, ಅರ್ಹ ಮಹಿಳಾ ಅಭ್ಯರ್ಥಿಗಳಿಗೆ ಅಂದಿನ ಪರಿಸ್ಥಿತಿಗೆ ಅನುಗುಣವಾಗಿ ಪಕ್ಷವೇ ಚುನಾವಣಾ ವೆಚ್ಚವನ್ನು ಕೂಡ ಭರಿಸಲಿದೆ.

ಕೆ.ಆರ್.ಎಸ್. ಪಕ್ಷವು ಪಾರದರ್ಶಕವಾಗಿ ಮತ್ತು ಪ್ರಜಾಪ್ರಭುತ್ವದ ನೆಲೆಗಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ ಹಾಗು ಪಕ್ಷದ ಆಂತರಿಕ ಪ್ರಜಾಪ್ರಭುತ್ವ ಗಟ್ಟಿಗೊಳ್ಳುತ್ತಿದೆ. ಈಗಾಗಲೇ ವಿಧಾನಸಭಾ ಚುನಾವಣೆಗೆ 170 ಕ್ಕೂ ಹೆಚ್ಚು ಆಕಾಂಕ್ಷಿಗಳ ಸಂದರ್ಶನ ನಡೆಸಿ, ಅವರಲ್ಲಿ 60 ಕ್ಷೇತ್ರಗಳಿಗೆ ಸಂಭಾವ್ಯ ಅಭ್ಯರ್ಥಿಗಳನ್ನು ಘೋಷಿಸಿದ್ದು, ಈಗಾಗಲೇ ಅವರೆಲ್ಲ, ಆಯಾ ಕ್ಷೇತ್ರಗಳಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಕಳೆದ ಒಂದು ವರ್ಷದಿಂದ ಕೆಆರ್‍ಎಸ್ ಪಕ್ಷವು ನಿರಂತರವಾಗಿ ಪ್ರತಿ ತಿಂಗಳು ಸಂಭಾವ್ಯ ಅಭ್ಯರ್ಥಿಗಳ ಆಯ್ಕೆಗಾಗಿ ಸಂದರ್ಶನ ನಡೆಸಿಕೊಂಡು ಬರುತ್ತಿದ್ದು, ಇದೇ ಡಿಸೆಂಬರ್ 10 ಮತ್ತು 11 ರಂದು ಸಂಭಾವ್ಯ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಲಾಗುತ್ತಿದೆ, ರಾಜ್ಯದ ನೆಲ, ಜಲ, ಭಾಷೆ, ಅರಣ್ಯ ಉಳಿಸಲು, ಸ್ವಚ್ಚ, ಪ್ರಾಮಾಣಿಕ ಮತ್ತು ನೈತಿಕ ರಾಜಕಾರಣದಲ್ಲಿ ಆಸಕ್ತಿಯುಳ್ಳವರು, ರಾಜ್ಯದಲ್ಲಿನ ಭ್ರಷ್ಟ ವ್ಯವಸ್ಥೆಯನ್ನು ಬದಲಾಯಿಸಬೇಕೆಂಬ ಆಕಾಂಕ್ಷೆಯುಳ್ಳವರು, ಅದರಲ್ಲೂ ವಿಶೇಷವಾಗಿ ಮಹಿಳೆಯರು ಈ ಸಂದರ್ಶನ ಪ್ರಕ್ರಿಯೆಯಲ್ಲಿ ಭಾಗವಹಿಸಿ, ಸ್ವಚ್ಚ-ಸುಂದರ-ಸದೃಢ-ಸಮೃದ್ಧ ಕರ್ನಾಟಕ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಲು ಈ ಮೂಲಕ ಕೋರಲಾಗುತ್ತಿದೆ. 

ದಿನಾಂಕ 10 ಮತ್ತು 11 ರಂದು ನಡೆಯುವ ಸಂಭಾವ್ಯ ಅಭ್ಯರ್ಥಿಗಳ ಸಂದರ್ಶನಕ್ಕೆ ಮಹಿಳೆಯರಿಗೆ 2,500/-   ಪುರುಷರಿಗೆ ರೂ. 5,000/- ಶುಲ್ಕವಿರುತ್ತದೆ, ಹೆಚ್ಚಿನ ಮಾಹಿತಿಗಾಗಿ 7975625575 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಮಹಾಲಕ್ಷ್ಮೀ ಚನ್ನಕೇಶವ, ಪ್ರಧಾನ ಕಾರ್ಯದರ್ಶಿ – ಬೆಂಗಳೂರು ಮಹಾನಗರ ಮಹಿಳಾ ಸಮಿತಿ, ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು

City Today News – 9341997936